Home namma chikmagalur chikamagalur ಡಾ.ಭೀಮಣ್ಣ ಖಂಡ್ರೆ ನಿಧನ ಕ್ಕೆ ನಗರದಲ್ಲಿ ಶ್ರದ್ದಾಂಜಲಿ
chikamagalurHomeLatest Newsnamma chikmagalur

ಡಾ.ಭೀಮಣ್ಣ ಖಂಡ್ರೆ ನಿಧನ ಕ್ಕೆ ನಗರದಲ್ಲಿ ಶ್ರದ್ದಾಂಜಲಿ

Share
Share

ಚಿಕ್ಕಮಗಳೂರು: ಸ್ವಾತಂತ್ರ್ಯ ಹೋರಾಟಗಾರ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಶನಿವಾರ ನಗರದ ಶ್ರೀ ರೇಣುಕಾಚಾರ್ಯ ಸಮುದಾಯ ಭವ ನದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಮಹಾಸಭಾ ತಾಲ್ಲೂಕು ಅಧ್ಯಕ್ಷ ಕೆ.ಸಿ.ನಿಶಾಂತ್ ನಿತ್ಯ ಇಷ್ಟಲಿಂಗ ಪೂಜೆ, ಕಾ ಯಕ ದಾಸೋಹಗಳ ಮೇಲೆ ಅಪಾರ ಒಲವು ಖಂಡ್ರೆ ಅವರಿಗೆ ಇತ್ತು. ಅಲ್ಲದೇ ಕಿರೀಟಪ್ರಾಯವಾಗಿದ್ಧ ಜೀ ವನೋತ್ಸಾಹ, ನೂರೆರಡು ವರ್ಷಗಳ ತುಂಬು ಜೀವನ ನಡೆಸಿದ ಶ್ರೇಷ್ಟ ವ್ಯಕ್ತಿ ಎಂದರು.

ಸರಳತೆ, ಸತ್ಯನಿ? ಮತ್ತು ಜನಪರ ಕಾಳಜಿಯೊಂದಿಗೆ ಬದುಕಿದ ಅವರು, ತಮ್ಮ ಜೀವನವನ್ನೆಲ್ಲ ಸಮಾ ಜದ ಹಿತಕ್ಕಾಗಿ ಅರ್ಪಿಸಿದ ಮಹಾನ್ ವ್ಯಕ್ತಿತ್ವವಾಗಿದ್ದರು. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಸಮಸ್ತ ಸಮಾಜಕ್ಕೆ ತುಂಬಲಾರದ ನ? ಉಂಟಾಗಿದೆ ಎಂದು ಹೇಳಿದರು.

ಶಂಕರ ದೇವರ ಮಠ ಗುರುಗಳು ಚಂದ್ರಶೇಖರ್ ಶಿವಾಚಾರ್ಯ ಮಾತನಾಡಿ ಸ್ವಾಸ್ಥ್ಯ ಸಮಾಜದ ನಿ ರ್ಮಾಣಕ್ಕೆ ಜೀವನವನ್ನೇ ಮುಡಿಪಿಟ್ಟ ಲಿಂ|| ಖಂಡ್ರೆ ಅವರು ಇಹಲೋಕದ ಯಾತ್ರೆ ಮುಗಿಸಿ ಚಿರಶಾಂತಿಗೆ ಸಂದಿದ್ದಾರೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬ, ಅಭಿಮಾನ ಹಾ ಗೂ ಆಪ್ರ ವಲಯಕ್ಕೆ ಕರುಣಿಸಲಿ ಎಂದರು.

ಈ ಸಂದರ್ಭದಲ್ಲಿ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಈಶ್ವರಪ್ಪ, ತಾಲ್ಲೂಕು ಪ್ರಧಾನ ಕಾರ್ಯದ ರ್ಶಿ ನಲ್ಲೂರ್ ದರ್ಶನ್, ಸಮಾಜದ ಬಾಂಧವರಾದ ನಿರಂಜನ್, ರೇಣುಕಾ ಆರಾಧ್ಯ, ಜೈ ಪ್ರಕಾಶ್, ಯೋಗೀಶ್ ಹಿರೇಮಗಳೂರು, ಸತೀಶ್ ಕುಪ್ಪೆ ನೆಲ್ಲಿ, ಗಿರೀಶ್, ಮೋಹನ್ ಲಕ್ಷ್ಮಿಪುರ ದಿನೇಶ್ ಮೂಗೂಳ್ಳಿ, ವೀರಶೈವ ಲಿಂಗಾಯತ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

Tributes paid in the city for the passing away of Dr. Bhimanna Khandre

 

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...