ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯ ಸಂಭವಿಸಿಲ್ಲ.
ಬೆಂಗಳೂರು ಮೂಲದ ೧೧ ಮಂದಿ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಟಿಟಿ ವಾಹನ ಮುಳ್ಳಯ್ಯನಗಿರಿ ಕಡೆಗೆ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ ಇನೋವಾ ಕಾರು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದೆ. ಬಳಿಕ ರಸ್ತೆ ಬದಿಯಲ್ಲಿದ್ದ ತೋಟದ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ಸಂದರ್ಭದಲ್ಲಿ ಟಿಟಿ ವಾಹನದಲ್ಲಿದ್ದ ೧೧ ಮಂದಿ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ. ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಳ್ಳಯ್ಯನಗಿರಿ ಕ್ರಾಸ್‌ನಲ್ಲಿ ವಾಹನಗಳು ನಿಂತಿದ್ದರಿಂದ ಕೆಲಕಾಲ ಸಂಚಾರದಲ್ಲೂ ಗೊಂದಲ ಉಂಟಾಯಿತು.
ಮಾಹಿತಿ ತಿಳಿದು ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.
TT vehicle collides with tree near Mullaiyanagari Cross
Leave a comment