Home namma chikmagalur chikamagalur ಅಕ್ರಮ ಮದ್ಯ ಮಾರಾಟ-ಇಬ್ಬರ ಬಂಧನ
chikamagalurCrime NewsHomeLatest Newsnamma chikmagalur

ಅಕ್ರಮ ಮದ್ಯ ಮಾರಾಟ-ಇಬ್ಬರ ಬಂಧನ

Share
Share

ಚಿಕ್ಕಮಗಳೂರು: ಜಿಲ್ಲೆಯ ಬಣಕಲ್ ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತ್ಯೇಕ ದಾಳಿ ನಡೆಸಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಗೂ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದ ಅಂಗಡಿ ವ್ಯಾಪಾರಿ ಸುರೇಶ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಿಎಸ್‌ಐ ರೇಣುಕಾ ಡಿ.ವಿ. ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮದ್ಯದ ಖಾಲಿ ಟೆಟ್ರಾ ಪ್ಯಾಕ್ ಹಾಗೂ ಇನ್ನಿತರ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಿತಿಮ್ಮಾಪುರ ಗ್ರಾಮದ ಟವರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸೇವನೆ ಮಾಡುತ್ತಿದ್ದ ಹೇಮಗಿರಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಿಎಸ್‌ಐ ಶಶಿಕುಮಾರ್ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಈ ಅಕ್ರಮ ಪತ್ತೆಯಾಗಿದ್ದು, ಸ್ಥಳದಲ್ಲಿದ್ದ ಮದ್ಯದ ಪೌಚ್‌ಗಳು ಹಾಗೂ ನೀರಿನ ಬಾಟಲಿಯನ್ನು ಜಪ್ತಿ ಮಾಡಲಾಗಿದೆ. ಎರಡೂ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಪೊಲೀಸರು ನಿಗಾ ವಹಿಸಿದ್ದಾರೆ.

Two arrested for selling illegal liquor

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಉಮೇಶ್ ಜಮೀನು ಕೆಲಸಕ್ಕೆ ತೆರಳಿದ್ದ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನಯ್ ಬಿ.ಕೆ....

Related Articles

ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ...

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ...

ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ನಾಪತ್ತೆ

ಕಳಸ : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾತೀರ್ಥದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಭದ್ರಾ...

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

ಚಿಕ್ಕಮಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಅಮಿಷಕ್ಕೆ ಒಳಗಾದ ಮಹಿಳೆಯೊಬ್ಬರು...