Home namma chikmagalur chikamagalur ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು
chikamagalurCrime NewsHomeLatest Newsnamma chikmagalur

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

Share
Share

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಶೈಲಾ (57) ಎಂಬುವರ ಜಾನುವಾರುಗಳು ಮೃತಪಟ್ಟಿದ್ದು, ಈ ಸಂಬಂಧ ಅವರು ನರಸಿಂಹರಾಜಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಶೈಲಾ ಅವರು ತಮ್ಮ ತೋಟದಲ್ಲಿ ಗೊಬ್ಬರ ಹಾಗೂ ಹಾಲಿನ ಉದ್ದೇಶಕ್ಕಾಗಿ ಆರು ಜಾನುವಾರುಗಳನ್ನು ಸಾಕುತ್ತಿದ್ದು, ಪ್ರತಿದಿನ ಜಾನುವಾರುಗಳನ್ನು ಮೇಯಲು ಕಾಡಿಗೆ ಬಿಡುತ್ತಿದ್ದರು. ಆಗಸ್ಟ್ 11ರಂದು ಬೆಳಿಗ್ಗೆ 8 ಗಂಟೆಗೆ ಎಂದಿನಂತೆ ಜಾನುವಾರುಗಳನ್ನು ಮೇಯಲು ಕಾಡಿಗೆ ಬಿಟ್ಟ ಬಳಿಕ ಅವರು ಶಾಲೆಯಲ್ಲಿ ಬಿಸಿಯೂಟ ತಯಾರಿಸಲು ತೆರಳಿದ್ದರು.

ಮಧ್ಯಾಹ್ನ 12.15ರ ಸುಮಾರಿಗೆ ಗ್ರಾಮದ ನಾಗರಾಜ್ ಎಂಬುವರು ಕರೆ ಮಾಡಿ, ಶ್ರವಣ್ ಕುಮಾರ್ ಎಂಬುವರ ಜಮೀನಿನ ಐಬೆಕ್ಸ್ ತಂತಿ ಬೇಲಿಗೆ ಸಿಲುಕಿ ಎರಡು ಜಾನುವಾರುಗಳು ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ. ಬಳಿಕ ಶಾಲೆಯ ಕೆಲಸ ಮುಗಿಸಿ ಮಧ್ಯಾಹ್ನ 2.30ರ ಸುಮಾರಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ತಮ್ಮ ಮನೆಯ ಒಂದು ಹೋರಿಕರು ಹಾಗೂ ಒಂದು ದನ ಮೃತಪಟ್ಟಿರುವುದು ಕಂಡುಬಂದಿದೆ.

ಐಬೆಕ್ಸ್ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಶೈಲಾ ಅವರು ಕೆಇಬಿ ಲೈನ್‌ಮ್ಯಾನ್ ಸುನೀಲ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಲೈನ್‌ಮ್ಯಾನ್ ತಂತಿಯನ್ನು ಪರಿಶೀಲಿಸಿದಾಗ, ಬೇಲಿಗೆ ಮನೆಯ ವಿದ್ಯುತ್ ಸಂಪರ್ಕದಿಂದ ವಿದ್ಯುತ್ ಹರಿಸಲಾಗಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಜಾನುವಾರುಗಳು ಜಮೀನಿಗೆ ಪ್ರವೇಶಿಸದಂತೆ ಶ್ರವಣ್ ಕುಮಾರ್ ಅವರು ಐಬೆಕ್ಸ್ ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು, ಇದರಿಂದ ತಲಾ ಸುಮಾರು ₹15 ಸಾವಿರ ಮೌಲ್ಯದ ಎರಡು ಜಾನುವಾರುಗಳು ಮೃತಪಟ್ಟಿವೆ ಎಂದು ಶೈಲಾ ಆರೋಪಿಸಿದ್ದಾರೆ.

ಘಟನೆ ಕುರಿತು ಲೈನ್‌ಮ್ಯಾನ್ 112 ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರವಣ್ ಕುಮಾರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶೈಲಾ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

Two cattle die due to electric shock

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...