Home namma chikmagalur ಮೂಡಿಗೆರೆಯಲ್ಲಿ ಹೃದಯಾಘಾತದಿಂದ ಇಬ್ಬರ ಸಾವು
namma chikmagalurchikamagalurHomeLatest News

ಮೂಡಿಗೆರೆಯಲ್ಲಿ ಹೃದಯಾಘಾತದಿಂದ ಇಬ್ಬರ ಸಾವು

Share
Share

ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಫಿನಾಡಿನಲ್ಲಿ ಹೃದಯಾಘಾತ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಒಂದೇ ದಿನ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದ ಮೀನಾಕ್ಷಿ (೨೭) ಹಾಗೂ ಬಿ.ಹೊಸಳ್ಳಿ ಗ್ರಾಮದ ಸುಮಿತ್ರೇಗೌಡ ಹೃದಯಾ ಘಾತದಿಂದ ಮೃತಪಟ್ಟಿದ್ದಾರೆ.

ಭಾರತೀಬೈಲು ಗ್ರಾಮದ ಯುವತಿ ಮೀನಾಕ್ಷಿ ಎದೆ ಉರಿ ಎಂದು ಆಸ್ಪತ್ರೆಗೆ ಕರೆತರಲಾಗಿತ್ತು. ಮಳೆಯಿಂದ ರಸ್ತೆ ಮದ್ಯೆ ಮರ ಬಿದ್ದಿದ್ದರಿಂದ ಆಕೆಯನ್ನು ಆಸ್ಪತ್ರೆಗೆ ಕರೆತರಲು ಅರ್ಧಗಂಟೆ ತಡವಾಗಿತ್ತು. ಆಸ್ಪತ್ರೆಗೆ ಬರುವ ಷ್ಟರಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಯುವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಿದಾಗ ಲೋ ಬಿ.ಪಿ. ಎಂದು ಅಲ್ಲಿನ ಸಿಬ್ಬಂದಿಗಳು ಹೇಳಿದ್ದರು. ಎದೆ ಉರಿ ಜಾಸ್ತಿಯಾಗಿದ್ದು, ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟಿದ್ದಾಳೆ.

ತಾಲೂಕಿನ ಬಿ.ಹೊಸಳ್ಳಿ ಗ್ರಾಮದ ಸುಮಿತ್ರೇಗೌಡ (೭೫) ಅವರು ಮನೆಯಲ್ಲಿಯೇ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿ ದ್ದಾರೆ.

ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

Two die of heart attack in Mudigere

 

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...