Home namma chikmagalur chikamagalur ಕಾಫಿ ಕ್ಯೂರಿಂಗ್ ಬೇಜವಾಬ್ದಾರಿತಕ್ಕೆ ಇಬ್ಬರು ರೈತರು ಗಂಭೀರ ಗಾಯ
chikamagalurCrime NewsHomeLatest Newsnamma chikmagalur

ಕಾಫಿ ಕ್ಯೂರಿಂಗ್ ಬೇಜವಾಬ್ದಾರಿತಕ್ಕೆ ಇಬ್ಬರು ರೈತರು ಗಂಭೀರ ಗಾಯ

Share
Share

ಚಿಕ್ಕಮಗಳೂರು: ಕಾಫಿನಾಡಿನ ಹರಿಹರದಹಳ್ಳಿಯಲ್ಲಿರುವ ವಿದ್ಯಾ ಕಾಫಿ ಕ್ಯೂರಿಂಗ್ ಘಟಕದ ಮಾಲೀಕರು ಮತ್ತು ಮ್ಯಾನೇಜೆಂಟ್ ಬೇಜವಾಬ್ದಾರಿತನದಿಂದಾಗಿ ಸ್ಥಳೀಯ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರುವಂತಾಗಿದೆ.

ಈ ಘಟಕದಿಂದ ಸಂಸ್ಕರಿಸದೆ ಬೂದಿ ಮತ್ತು ರಾಸಾಯನಿಕ ಮಿಶ್ರಿತ ತ್ಯಾಜ್ಯವನ್ನು ತಂದು ಸುರಿಯಲಾಗುತ್ತಿದ್ದು, ಇದು ಈಗ ಸ್ಥಳೀಯರ ಪ್ರಾಣಕ್ಕೆ ಕುತ್ತಾಗಿ ಪರಿಣಮಿಸಿದೆ. ಬೂದಿಯ ರಾಶಿ ಮೇಲ್ನೋಟಕ್ಕೆ ತಣ್ಣಗಿರುವಂತೆ ಕಂಡರೂ ಅದರ ಒಳಭಾಗದಲ್ಲಿ ತೀವ್ರವಾಗಿ ಸುಡುವಷ್ಟು ಉಷ್ಣತೆ ಇರುವುದರಿಂದ, ಅರಿಯದೆ ಅದರ ಮೇಲೆ ಕಾಲಿಟ್ಟವರ ಚರ್ಮ ಸಂಪೂರ್ಣವಾಗಿ ಸುಟ್ಟು ಹೋಗಿದೆ.

ಹರಿಹರದಹಳ್ಳಿ ಗ್ರಾಮದ ದೇವರಾಜು ಮತ್ತು ಈರೇಗೌಡ ಎಂಬುವವರು ತಮ್ಮ ಜಮೀನಿಗೆ ತೆರಳುತ್ತಿದ್ದಾಗ, ದಾರಿಯಲ್ಲಿ ಸುರಿಯಲಾಗಿದ್ದ ಈ ಅಪಾಯಕಾರಿ ಬೂದಿಯ ಮೇಲೆ ಕಾಲಿಟ್ಟಿದ್ದಾರೆ. ಇದರ ಪರಿಣಾಮವಾಗಿ ಇಬ್ಬರ ಕಾಲಿನ ಮೇಲೆ ಚರ್ಮವು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಅವರು ತೀವ್ರವಾದ ನೋವಿನಿಂದ ಬಳಲುತ್ತಿದ್ದಾರೆ.

ಸದ್ಯ ಗಾಯಾಳುಗಳು ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಬೂದಿಯ ಕೆಂಡಕ್ಕೆ ಸಿಲುಕಿ ಈಗಾಗಲೇ ಕೆಲವು ಮೂಕ ಪ್ರಾಣಿಗಳು ಸಹ ಸಾವನ್ನಪ್ಪಿವೆ ಎಂಬ ಆರೋಪ ಕೇಳಿ ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಗಾಯಾಳು ದೇವರಾಜು ಅವರು ನೀಡಿದ ದೂರಿನ ಮೇರೆಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದ್ಯಾ ಕಾಫಿ ಕ್ಯೂರಿಂಗ್‌ನ ಮ್ಯಾನೇಜರ್ ಮತ್ತು ಮಾಲೀಕರ ವಿರುದ್ಧ ಎಫ್.ಐ.ಆರ್. ದಾಖಲಾಗಿದೆ.

ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಘಟಕದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Two farmers seriously injured in irresponsible coffee curing

Share

Leave a comment

Leave a Reply

Your email address will not be published. Required fields are marked *

Don't Miss

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆ – ಅಂಗನವಾಡಿಗಳಿಗೆ ರಜೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ವರುಣನ ಆರ್ಭಟ ಮುಂದುವರಿದಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ. ನಾಳೆ...

Related Articles

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...

ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರವೇಶಕ್ಕೆ ಆಹ್ವಾನ

ಚಿಕ್ಕಮಗಳೂರು:  ಸೀಗೋಡುವಿನ ಪಿ.ಎಂ.ಶ್ರೀ ಜವಾಹರ ನವೋದಯ ವಿದ್ಯಾಲಯವು  ವಸತಿಯುತ ಸಹಶಿಕ್ಷಣ ವಿದ್ಯಾಲಯವಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿಭಾವಂತ...