Home namma chikmagalur chikamagalur ಕಾಡಾನೆ ದಾಳಿಗೆ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಗಾಯ
chikamagalurHomeLatest Newsnamma chikmagalur

ಕಾಡಾನೆ ದಾಳಿಗೆ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಗಾಯ

Share
Share

ಮೂಡಿಗೆರೆ:  ಇಲ್ಲಿನ ಕಾಡು ಪ್ರದೇಶದಲ್ಲಿ ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆ ಕಾಡಾನೆ ದಾಳಿ ನಡೆಸಿ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡವರಲ್ಲಿ ಇಟಿಎಫ್ ಬೀಟ್ ಫಾರೆಸ್ಟರ್ ರಮೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೊರಗುತ್ತಿಗೆ ಸಿಬ್ಬಂದಿ ವಿಶ್ವ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆಯ ನಂತರ ಇಬ್ಬರನ್ನೂ ತಕ್ಷಣ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಮೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ವಿಶ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಚಿಕಿತ್ಸೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆ ಹಿನ್ನೆಲೆ, ಪ್ರದೇಶದಲ್ಲಿ ಕಾಡಾನೆಗಳ ಚಲನವಲನ ಹೆಚ್ಚಿರುವುದರಿಂದ ಸಾರ್ವಜನಿಕರು ಹಾಗೂ ಸಿಬ್ಬಂದಿ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.

Two forest department personnel injured in wild elephant attack

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...