Home Crime News ಎರಡು ಮನೆಕಳವು ಪ್ರಕರಣ : ಪೊಲೀಸರು 10.35 ಲಕ್ಷ ರೂ.ಮೌಲ್ಯದ ವಸ್ತು ವಶ
Crime NewschikamagalurHomeLatest Newsnamma chikmagalur

ಎರಡು ಮನೆಕಳವು ಪ್ರಕರಣ : ಪೊಲೀಸರು 10.35 ಲಕ್ಷ ರೂ.ಮೌಲ್ಯದ ವಸ್ತು ವಶ

Share
Share

ಚಿಕ್ಕಮಗಳೂರು: ಎರಡು ಮನೆಕಳವು ಮತ್ತು ತೆಂಗಿನಕಾಯಿ ಕಳವು ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿರುವ ಪೊಲೀಸರು ೧೦.೩೫ ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣಾ ವ್ಯಾಪ್ತಿಯ ವೇಣುಗೋಪಾಲಸ್ವಾಮಿ ದೇವಾಲಯದ ಸಮೀಪದ ಮಂಜುಳ ಎಂಬುವರ ಮನೆಯಲ್ಲಿ ಮಾರ್ಚ್ ೧೯ ರಂದು ಮನೆಯ ಬೀಗವನ್ನು ಮುರಿದು ೪೩ ಗ್ರಾಂ ಚಿನ್ನಾಭರಣಗಳು ಹಾಗೂ ೧೦ಸಾವಿರ ನಗದು ಹಣವನ್ನು ಕಳವು ಮಾಡಲಾಗಿತ್ತು.

ಅದೇ ಸ್ಥಳದಲ್ಲಿ ಜುಲೈ ೧ ರಂದು ಪಕ್ಕದ ಮನೆ ವಾಸಿಯಾದ ಪಾರ್ವತಮ್ಮ ಎಂಬುವರ ಮನೆಯ ಬೀಗವನ್ನು ಮುರಿದು ೫೧ ಗ್ರಾಂ ಚಿನ್ನಾಭರಣಗಳು, ೧೦೦ ಗ್ರಾಂ ಬೆಳ್ಳಿಯ ಆಭರಣಗಳು ಮತ್ತು ೬ಸಾವಿರ ನಗದನ್ನು ಕಳ್ಳತನ ಮಾಡಲಾಗಿತ್ತು.

ನಗರದ ಎಪಿಎಂಸಿ ಆವರಣದಲ್ಲಿ ಮೂರು ತಿಂಗಳಿನಿಂದ ಈಚೆಗೆ ಮಾರ್ಕೆಟ್ ಆವರಣದ ತೆಂಗಿನಕಾಯಿ ಮಂಡಿಗಳಲ್ಲಿ ಐದಾರು ಬಾರಿ ಒಟ್ಟು ೩೪ ಚೀಲದಲ್ಲಿದ್ದ ೨೫೦೦ ತೆಂಗಿನಕಾಯಿಗಳನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೊಗಲಾಗಿತ್ತು. ಮಾಲೀಕರು ನೀಡಿದ ದೂರಿನ ಮೇರೆಗೆ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು, ತನಿಖೆಯನ್ನು ಆರಂಭಗೊಂಡಿತ್ತು.

ಮೇಲ್ಕಂಡ ಪ್ರಕರಣಗಳಲ್ಲಿ ಅತೀ ಶೀಘ್ರವಾಗಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕದ್ದಮಾಲನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪಪೊಲೀಸ್ ಮುಖ್ಯಾಧಿಕಾರಿ ಶೈಲೇಂದ್ರ ನೇತೃತ್ವದಲ್ಲಿ ಬಸವನಹಳ್ಳಿ ವೃತ್ತದ ಸಿಪಿಐ ವಿಜಯಕುಮಾರ ಎಂ.ಬಿರಾದಾರ ಸಿಪಿಐ ಪಿಎಸ್‌ಐಗಳಾದ ಕೀರ್ತಿಕುಮಾರ್, ಅಜರುದ್ದೀನ್ ಮತ್ತು ನಾಗೇಶ್ ಮತ್ತು ಬಸವನಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿಗಳಾದ
ರವೀಂದ್ರ, ಮಧುಸೂಧನ್, ಲಿಂಗಮೂರ್ತಿ, ಮಾಲತೇಶ, ಜಯರಾಮ, ಸತೀಶ್ ಮತ್ತು ಚಾಲಕರಾದ ಇಬ್ರಾಹಿಂ ಅವರನ್ನು ಒಳಗೊಂಡ ವಿಶೇಷ ತನಿಖಾತಂಡವನ್ನು ರಚಿಸಲಾಗಿತ್ತು.

ಈ ಪ್ರಕರಣಗಳಲ್ಲಿ ಆರೋಪಿಗಳು ಮತ್ತು ಕದ್ದಮಾಲು ಪತ್ತೆಯ ಬಗ್ಗೆ ವೈಜ್ಞಾನಿಕವಾಗಿ ತನಿಖೆಯನ್ನು ನಡೆಸಿ ವಿವಿಧ ಆಯಾಮಗಳಲ್ಲಿ ಮಾಹಿತಿಯನ್ನು ಸಂಗ್ರಹಿಸಿ ಬಸವನಹಳ್ಳಿ ವೇಣುಗೋಪಾಲ ದೇವಾಲಯದ ಸಮೀಪ ಎರಡು ಮನೆಗಳಲ್ಲಿ ಕಳವು ಮಾಡಿದ್ದ ಆರೋಪಿ ಕಲ್ಲುದೊಡ್ಡಿಯ ಕೂಲಿಕಾರ್ಮಿಕ ಸಚಿನ್ ವಿ.ಡಿಸೋಜಾ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವು ಪ್ರಕರಣ ಬೆಳಕಿಗೆ ಬಂತು.

ಆರೋಪಿಯನ್ನು ಬಂಧಿಸಿ ೬ ಲಕ್ಷರೂ ಮೌಲ್ಯದ ೭೧ ಗ್ರಾಂ ಚಿನ್ನಾಭರಣಗಳು ಹಾಗೂ ೨೫ಸಾವಿರ ಮೌಲ್ಯದ ೧೦೦ಗ್ರಾಂ ತೂಕದ ಬೆಳ್ಳಿಯ ಒಡವೆ ಆರೋಪಿಯು ಕಳವು ಮಾಡಲು ಉಪಯೋಗಿಸಿದ್ದ ಸುಮಾರು ೧ ಲಕ್ಷರೂ ಮೌಲ್ಯದ ಬಜಾಜ್ ಪಲ್ಸರ್ ಬೈಕ್ ಸೇರಿದಂತೆ ಒಟ್ಟು ೭.೨೫ ಲಕ್ಷ ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.

ನಗರದ ಎಪಿಎಂಸಿ ಆವರಣದಲ್ಲಿ ತೆಂಗಿನಕಾಯಿ ಕಳವು ಮಾಡಿದ ಪ್ರಕರಣದಲ್ಲಿ ಆರೋಪಿಗಳಾದ ತರಕಾರಿ ವ್ಯಾಪಾರ ಮಾಡು ಮೂಡಿಗೆರೆ ಪಟ್ಟಣದ ಬೆಳಗುಳ ಇಂದಿರಾ ನಗರದ ಮಹಮದ್ ನೌಷದ್, ಬಿಳಗುಳದ ವಿವೇಕಾನಗರದ ಆಟೋಚಾಲಕ ಗಣೇಶ ಅವರನ್ನು ವಶಕ್ಕೆ ಪಡೆದು ತೆಂಗಿನಕಾಯಿ ಕಳವು ಮಾಡಿ ಮಾರಾಟ ಮಾಡಿದ ೧.೧೦ ಲಕ್ಷ ರೂ. ನಗದು ಕಳವಿಗೆ ಉಪಯೋಗಿಸಿದ ಸುಮಾರು ೨ ಲಕ್ಷ ರೂ ಮೌಲ್ಯದ ಒಟ್ಟು ೧೦.೩೫ ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ.

ಮೂರು ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸಿ ಆರೋಪಿತರನ್ನು ಪತ್ತೆಹಚ್ಚಿ ಬಂಧಿಸಿ ಕದ್ದಮಾಲನ್ನು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸುವಲ್ಲಿ ಶ್ರಮಿಸಿದ ಅಪರಾಧ ಪತ್ತೆ ಕಾರ್ಯ ವಿಶೇಷ ತನಿಖಾ ತಂಡದಲ್ಲಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಶ್ಲಾಘಿಸಿ ಬಹುಮಾನವನ್ನು ಘೋಷಿಸಿದ್ದಾರೆ.

Two house burglaries: Police seize items worth Rs 10.35 lakh

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...