Home Crime News notorious thieves arrested:ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರ ಬಂಧನ
Crime NewsKadurnamma chikmagalur

notorious thieves arrested:ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರ ಬಂಧನ

Share
Share

ಚಿಕ್ಕಮಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರೂ ಕುಖ್ಯಾತ ಕಳ್ಳರನ್ನು ಬಂಧಿಸಿರುವ ಚಿಕ್ಕಮಗಳೂರು ಬಸವನಹಳ್ಳಿ ಠಾಣೆ ಪೋಲೀಸರು ಅವರಿಂದ ಬರೋಬ್ಬರಿ 25 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳ ಹಾಗೂ ಕೃತ್ಯಕ್ಕೆ ಬಳಕೆ ಮಾಡಿದ್ದ ಕಳ್ಳತನ ಮಾಡಿದ್ದ ಬೈಕ್ ಹಾಗೂ ಪಿಸ್ತೂಲ್ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಆರ್ ಟಿ ನಗರದಲ್ಲಿ ನೆಲೆಸಿದ್ದ ಚಿಕ್ಕಮಗಳೂರು ಉಪ್ಪಳ್ಳಿ ನಿವಾಸಿ ಮೊಹಮದ್ ಕಬೀರ್, ಡಿಜೆ ಹಳ್ಳಿವಾಸಿ ಯೂಸುಫ ಪಾಷಾ ನನ್ನು ಬಂಧಿಸಿ ಒಟ್ಟು 334 ಗ್ರಾಂ ಬಂಗಾರದ ಗಟ್ಟಿ, ಮತ್ತು ಕೃತ್ಯಕ್ಕೆಬಳಸಿದ್ದ ಬಜಾಜ್ ಪಲ್ಸರ್ ಬೈಕ್ ( ತುಮಕೂರಿನಲ್ಲಿ ಕಳವು ಮಾಡಿದ್ದು) ಒಟ್ಟು ಬೆಲೆ 25,00,000 ವಶಪಡಿಸಿಕೊಳ್ಳಲಾಗಿದೆ.

ಅಹಮದ್ ಕಬೀರ್ ನನ್ನು 2023 ನೇ ಸಾಲಿನಲ್ಲಿ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಬಂಧಿಸಿದ್ದು, 12 ಮನೆಕಳವು ಪ್ರಕರಣಗಳು ಪತ್ತೆಯಾಗಿದ್ದು, ಆರೋಪಿಯಿಂದ 295 ಗ್ರಾಂ ಚಿನ್ನ & 350 ಗ್ರಾಂ ಬೆಳ್ಳಿಯ ಭರಣ ಹಾಗೂ 1 ಪಿಸ್ತೂಲ್ & ಗುಂಡುಗಳು ದೊರೆತಿದ್ದವು.
ಪಿಸ್ತೂಲ್ ಅನ್ನು ವೈಜ್ಞಾನಿಕ ಪರೀಕ್ಷೆಗೆ ಕಳುಹಿಸಿದಾಗ 11.07.2020 ರಂದು ಚಿಕ್ಕಮಗಳೂರು ನಗರದ ಕೇಸರಿ ಜ್ಯೂಯೆಲರಿ ಚಿನ್ನದ ಅಂಗಡಿಯಲ್ಲಿ ಗುಂಡು ಹಾರಿಸಿ ದರೋಡೆಗೆ ಪ್ರಯತ್ನಿಸಿದ್ದಾಗ ಸ್ಥಳದಲ್ಲಿ ದೊರೆತ ಗುಂಡಿಗೆ ಹೋಲಿಕೆಯಾಗಿರುವುದಾಗಿ ಎಫ್.ಎಸ್.ಎಲ್
ವರದಿಯಿಂದ ದೃಢಪಟ್ಟಿದೆ.

ಆರೋಪಿ ಕಬೀರ್ ಮತ್ತು ಆತನ ಸಹಚರರು ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವುದೂ ಬೆಳಕಿಗೆ ಬಂದಿದೆ. ಈತನ ವಿರುದ್ಧ ಮಂಗಳೂರು ನಗರ, ಶಿವಮೊಗ್ಗ , ತುಮಕೂರು , ದಾವಣಗೆರೆ , ಚಾಮರಾಜನಗರ ಜಿಲ್ಲೆ ಗಳಲ್ಲಿ 50 ಕ್ಕೂ ಹೆಚ್ಚು ಕಳವು ಪ್ರಕರಣಗಳು ದಾಖಲಾಗಿದ್ದು, ಆರೋಪಿಯು
ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಈತನ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು, ಕಾರ್ಯಾಚರಣೆ ತಂಡಕ್ಕೆ ಪೊಲೀಸ್ ಅಧೀಕ್ಷಕರು ಬಹುಮಾನ ಘೋಷಿಸಿದ್ದಾರೆ

ಕಾರ್ಯಾಚರಣೆಯಲ್ಲಿ ಪಿಎಸ್ಐ ಅಬ್ದುಲ್ ಖಾದರ್, ಸಿಬ್ಬಂದಿಗಳಾದ ನಂಜಪ್ಪ, ಪ್ರದೀಪ್, ರೋಹಿತ್, ರವೀಂದ್ರ, ಮಧುಸೂದನ್, ಲಿಂಗ ಮೂರ್ತಿ, ಗಿರೀಶ್, ಅನ್ವರ್ ಪಾಷಾ, ಹರಿಪ್ರಸಾದ್, ಅಬ್ದುಲ್ ರಬ್ಬಾನಿ, ಪುಷ್ಪ ಪಾಲ್ಗೊಂಡಿದ್ದರು.

Two notorious thieves arrested for burglarizing houses

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...