Home namma chikmagalur chikamagalur ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರ ಸಾವು
chikamagalurHomeLatest Newsnamma chikmagalur

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರ ಸಾವು

Share
Share

ಚಿಕ್ಕಮಗಳೂರು: ಜಿಲ್ಲೆಯ ಎರಡು ಸಂಭವಿಸಿದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಯರೇಹಳ್ಳಿ ಗ್ರಾಮದಿಂದ ಧರ್ಮಸ್ದಳಕ್ಕೆ ಪಾದಯಾತ್ರೆ ತೆರಳುತ್ತಿದ್ದಾಗ ಲಕ್ಷ್ಮಿಪುರ ಗ್ರಾಮದ ಬಿಸಲೇಹಳ್ಳಿ ಗೇಟಿನ ನಡೆದು ಹೋಗುತ್ತಿದ್ದವರಿಗೆ ಹಿಂದಿನಿಂದ ಬಂದು ಬೈಕ್ ಅಪ್ಪಳಿಸಿದೆ.

ನಿಯಂತ್ರಣ ತಪ್ಪಿ ಬೈಕ್ ಸಮೇತ ಕೆಳಕ್ಕೆ ಬಿದ್ದ ಚಾಲಕ ಲಕ್ಷ್ಮಿಪುರದ ಮಂಜುನಾಥಗೆ ತೀವ್ರ ಗಾಯವಾಗಿ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಅಲ್ಲಿ ಮೃತಪಟ್ಟಿದ್ದಾನೆ.

ಶಶಾಂಕ್ ಬಾಣಾವರದಿಂದ ಕೆಲಸ ಮುಗಿಸಿಕೊಂಡು ವಾಪಾಸ್ ಮನೆಗೆ ಬರುತ್ತಿದ್ದ ವೇಳೆ ಮತಿಘಟ್ಟ-ಮಾಡಾಳು ರಸ್ತೆಯಲ್ಲಿ ಹಠಾತ್ತನೆ ಹಸು ಅಡ್ಡ ಬಂದು ನಿಯಂತ್ರಣ ತಪ್ಪಿ ಬೈಕ್ ಕೆಳಗೆ ಬಿದ್ದಿದೆ.

ಬೈಕ್ ಬಿದ್ದ ಹಿನ್ನೆಲೆ ತೀವ್ರ ಗಾಯವಾಗಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು ಅಲ್ಲಿ ಗುಣಮುಖ ಆದ ಹಿನ್ನೆಲೆಯಲ್ಲಿ ಕಡೂರಿನ ಖಾಸಗಿ ಆಸ್ಪತ್ರೆಗೆ ತಂದು ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶಶಾಂಕ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Two people die in separate accidents

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...