Home namma chikmagalur ಶ್ರೀಗಂಧ ಸಾಗಿಸುತ್ತಿದ್ದ ಪತ್ರಕರ್ತ ಸೇರಿ ಇಬ್ಬರ ಬಂಧನ
namma chikmagalurchikamagalurHomeLatest News

ಶ್ರೀಗಂಧ ಸಾಗಿಸುತ್ತಿದ್ದ ಪತ್ರಕರ್ತ ಸೇರಿ ಇಬ್ಬರ ಬಂಧನ

Share
Share

ಮೂಡಿಗೆರೆ: ‘ಪ್ರೆಸ್’ ಎಂದು ಬರೆಸಿದ್ದ ಬೈಕ್‌ನಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಆರೋಪದಲ್ಲಿ ಹಾಸನದಿಂದ ಪ್ರಕಟವಾಗುವ ಸ್ಥಳೀಯ ಪತ್ರಿಕೆಯ ವರದಿಗಾರ ಸೇರಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ತಾಲ್ಲೂಕಿನ ಹಂಡಗುಳಿ ಮೂಲದ, ಪಟ್ಟಣ ನಿವಾಸಿ ಪತ್ರಕರ್ತ ಎಚ್.ಆರ್. ಮನ್ಸೂರ್ ಹಾಗೂ ಹ್ಯಾಂಡ್ ಪೋಸ್ಟ್ ಬಳಿಯ ನಿವಾಸಿ ಎಂ.ಕೆ. ಯೂಸೂಫ್ ಬಂಧಿತರು.

ಹಂಡುಗುಳಿ ಸಮೀಪದ ನವಗ್ರಾಮದ ಬಳಿ ಬುಧವಾರ ರಾತ್ರಿ ಬೈಕ್‌ನಲ್ಲಿ ಇಬ್ಬರು ಶ್ರೀಗಂಧ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ, ಬೈಕನ್ನು ಬೆನ್ನಟ್ಟಿ ಹಿಡಿದು ಪರಿಶೀಲಿಸಿದಾಗ, ಶ್ರೀಗಂಧದ 8 ತುಂಡುಗಳು ಪತ್ತೆಯಾಗಿದವು.

ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ಶ್ರೀಗಂಧವನ್ನೂ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಗುರುವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಜಿ.ಮಂಜುನಾಥ್, ಡಿಆರ್‌ಎಫ್ಒ ಅಶ್ವತ್ಥ್‌, ಸಿಬ್ಬಂದಿ ಜೆ.ಜಿ.ಉಮೇಶ್, ಎ.ಎಸ್.ಸುರೇಶ್, ಸುಮಂತ್ ನವರಾಜ್, ಭಾಗವಹಿಸಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Two people including a journalist arrested for transporting sandalwood
Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...