Home namma chikmagalur chikamagalur ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು
chikamagalurHomeKadurLatest Newsnamma chikmagalur

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

Share
Share

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ.

ಪಟ್ಟಣದ ಪುರಸಭೆ ವ್ಯಾಪ್ತಿಯ 7ನೇ ವಾರ್ಡಿನಲ್ಲಿರುವ ಅ.ನಂ.7762/4081ರ ಸ್ವತ್ತಿನ ಚಕ್ಕುಬಂಧಿಯನ್ನು ನಿಯಾಮಬಾಹಿರವಾಗಿ ತಿದ್ದುಪಡಿ ಮಾಡಿರುವ ಬಗ್ಗೆ ಪಟ್ಟಣದ ನಿವಾಸಿ ಕೆ.ಇ. ಹಿರಿಯಣ್ಣ ಜಿಲ್ಲಾಧಿಕಾರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ

ಪುರಸಭೆಯ ದ್ವಿತೀಯ ದರ್ಜೆ ಸಹಾಯಕ, ಕಂದಾಯ ನಿರೀಕ್ಷಕ ಜಗದೀಶ್ ರಾಜ್ ಅರಸ್ ಮತ್ತು ಖಾತೆ ಶಾಖೆಯ ವಿಷಯ ನಿರ್ವಾಹಕ ಸಿ.ಎಸ್. ಶಂಕರ್ ಕೈಬರಹದ ಅರ್ಜಿಗಳನ್ನು ಭೌತಿಕವಾಗಿ ನಗರ ಸಂಸ್ಥೆಗಳಲ್ಲಿ ಸ್ವೀಕರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದರೂ ಕೂಡ ಕೈ ಬರಹದ ಅರ್ಜಿಯನ್ನು ಸ್ವೀಕರಿಸಿ ಭೌತಿಕ ಕಡತದಲ್ಲಿ ಪ್ರಕರಣವನ್ನು ನಿರ್ವಹಿಸಿ ಪೌರಾಡಳಿತ ನಿರ್ದೇಶನಾಲಯ ಸುತ್ತೊಲೆಯನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಬಾಕಿ ಇಟ್ಟು ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ.

Two second grade assistants of Kadur Municipality suspended

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...