Home namma chikmagalur chikamagalur ಚಾರ್ಮಾಡಿ ಘಾಟ್‌ನಲ್ಲಿ ಎರಡು ಲಾರಿಗಳು ಪಲ್ಟಿ – ಸಂಚಾರ ಸ್ಥಗಿತ
chikamagalurHomeLatest Newsnamma chikmagalur

ಚಾರ್ಮಾಡಿ ಘಾಟ್‌ನಲ್ಲಿ ಎರಡು ಲಾರಿಗಳು ಪಲ್ಟಿ – ಸಂಚಾರ ಸ್ಥಗಿತ

Share
Share

ಚಿಕ್ಕಮಗಳೂರು: ಕಾಫಿನಾಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್‌ನಲ್ಲಿ ಎರಡು ಲಾರಿಗಳು ಪಲ್ಟಿಯಾದ ಪರಿಣಾಮ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ಕಡಿದಾದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದ್ದು, ರಸ್ತೆಯ ಮಧ್ಯೆಯೇ ಲಾರಿಗಳು ಉರುಳಿ ಬಿದ್ದಿರುವುದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದಾಗಿ ಘಾಟ್ ರಸ್ತೆಯುದ್ದಕ್ಕೂ ಹತ್ತು ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಸಂಚಾರ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕೊಟ್ಟಿಗೆಹಾರದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ರಸ್ತೆಯನ್ನು ಬಂದ್ ಮಾಡಲಾಗಿದ್ದು, ವಾಹನಗಳು ಘಾಟ್ ಪ್ರದೇಶಕ್ಕೆ ಪ್ರವೇಶಿಸದಂತೆ ತಡೆಯಲಾಗಿದೆ.

ಸದ್ಯ ಪಲ್ಟಿಯಾಗಿರುವ ಲಾರಿಗಳನ್ನು ರಸ್ತೆಯಿಂದ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಸಂಚಾರ ಸುಗಮವಾಗಲು ಇನ್ನೂ ಕೆಲ ಸಮಯ ಹಿಡಿಯುವ ಸಾಧ್ಯತೆ ಇದೆ. ಆದ್ದರಿಂದ ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಪೊಲೀಸ್ ಇಲಾಖೆ ಸೂಚಿಸಿದೆ.

Two trucks overturn at Charmadi Ghat – traffic disrupted

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...