Home namma chikmagalur ajjampura ದ್ವಿಚಕ್ರ ವಾಹನ-ಕ್ರೈನ್ ನಡುವೆ ಅಪಘಾತ: ವ್ಯಕ್ತಿ ಸಾವು
ajjampuraCrime NewsHomeLatest Newsnamma chikmagalur

ದ್ವಿಚಕ್ರ ವಾಹನ-ಕ್ರೈನ್ ನಡುವೆ ಅಪಘಾತ: ವ್ಯಕ್ತಿ ಸಾವು

Share
Share

ಅಜ್ಜಂಪುರ : ದ್ವಿಚಕ್ರ ವಾಹನ ಹಾಗೂ ಕ್ರೈನ್ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಕಣಬಗಟ್ಟೆ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬಸವರಾಜಪ್ಪ ಎಂಬುವವರು ಮೃತಪಟ್ಟಿದ್ದಾರೆ.

ತಮ್ಮ ಟಿವಿಎಸ್ ಎಕ್ಸ್.ಎಲ್ ದ್ವಿಚಕ್ರ ವಾಹನದಲ್ಲಿ ಕಣಬಗಟ್ಟೆ ದೇವಸ್ಥಾನದಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಹರಿಯನಹಳ್ಳಿ ಕಡೆಯಿಂದ ಬಂದ ಕ್ರೇನ್ ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ದ್ವಿಚಕ್ರ ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬಸವರಾಜಪ್ಪ ಅವರ ಬಲಭಾಗದ ತೊಡೆಯ ಮೇಲೆ ಕ್ರೇನ್ ಚಕ್ರ ಹರಿದಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ನಂತರ ಚಾಲಕನು ಕ್ರೇನ್ ಅನ್ನು ದೇವಸ್ಥಾನದ ಬಳಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.

ಮೃತರ ಸಂಬಂಧಿ ಶಿವಕುಮಾ‌ರ್ ನೀಡಿದ ದೂರಿನ ಮೇರೆಗೆ ಅಜ್ಜಂಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Two-wheeler-crane accident: One killed

Share

Leave a comment

Leave a Reply

Your email address will not be published. Required fields are marked *

Don't Miss

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೌರಿ ಹಬ್ಬದ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ ಬಂದಿದ್ದ ರಾಗಿ ಬೆಳೆಯ ಮೇಲೆ ಟ್ರಾಕ್ಟರ್ ಹರಿಸಿ ನಾಶಪಡಿಸಿರುವ ಆಘಾತಕಾರಿ ಘಟನೆಯೊಂದು ತರೀಕೆರೆ ತಾಲೂಕಿನ...

Related Articles

ಮೂಡಿಗೆರೆಯಲ್ಲಿ ಮುಸುಕುಧಾರಿ ಖದೀಮರಿಂದ ಸರಗಳ್ಳತನ

ಮೂಡಿಗೆರೆ: ಮುಂಜಾನೆಯ ತಂಪಾದ ವಾತಾವರಣದಲ್ಲಿ ರಸ್ತೆ ಬದಿಯಲ್ಲಿ ನಿರಾತಂಕವಾಗಿ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು...

ಅರಸನ ನಾಲೆ ಪುನಶ್ಚೇತನ‌ಕ್ಕೆ ಆಗ್ರಹಿಸಿ ಇಂದು ರೈತರ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ಹಾಗೂ...

ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ

ಚಿಕ್ಕಮಗಳೂರು: ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ : ಡಾ.ಮಾತೆ ಗಂಗಾದೇವಿನಾಡಿನ ವೀರಶೈವ-ಲಿಂಗಾಯಿತ ಜನಾಂಗವನ್ನು ಬಸವದಳ ಸೂತ್ರದಡಿ...

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ...