Home namma chikmagalur chikamagalur ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು
chikamagalurCrime NewsHomeLatest Newsnamma chikmagalur

ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು

Share
Share

ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ನಡೆದಿದೆ. ಅಭಿಷೇಕ್ (27) ಹಾಗೂ ಯೋಗೀಶ್ (17) ಮೃತ ದುರ್ದೈವಿಗಳು.

ಮೃತ ಯುವಕರಿಬ್ಬರು ಮೂಲತಃ ಕೊಡಗು ಜಿಲ್ಲೆಯವರು ಎಂದು ತಿಳಿದುಬಂದಿದೆ.

ಮೃತ ಅಭಿಷೇಕ್ ಅಕ್ಕ ಕಳಸದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಅವರ ಮನೆಗೆ ಬಂದಿದ್ದ. ಅಲ್ಲಿಂದ ಯೋಗೀಶ್ ಹಾಗೂ ಅಭಿಷೇಕ್ ಇಬ್ಬರು ಭದ್ರಾ ನದಿಯಲ್ಲಿ ಈಜಲು ಹೋದಾಗ ಭದ್ರಾ ನದಿಯ ಆಳದ ಅರಿವಿಲ್ಲದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜು ತಜ್ಞರ ನೆರವಿನಿಂದ ಮೃತ ದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಈವರೆಗೂ ಮೃತದೇಹ ಪತ್ತೆಯಾಗಿಲ್ಲ. ಘಟನೆ ಸಂಬಂಧ ಕಳಸ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಂಜೆಯಾದ ಕಾರಣ ಮೃತದೇಹದ ಶೋಧ ಕಾರ್ಯವನ್ನ ನಿಲ್ಲಿಸಲಿರುವ ಪೊಲೀಸರು ನಾಳೆ ಮತ್ತೆ ಹುಡುಕಾಟ ಆರಂಭಿಸಲಿದ್ದಾರೆ ಎಂದು ತಿಳಿದುಬಂದಿದೆ.

Two young men who had gone swimming fell into the water.

Share

Leave a comment

Leave a Reply

Your email address will not be published. Required fields are marked *

Don't Miss

ಆರು ಮರಿಗಳಿಗೆ ಜನ್ಮ ನೀಡಿದ ಆಡು

ಚಿಕ್ಕಮಗಳೂರು: ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಅಪರೂಪದ ಘಟನೆಯೊಂದು ನಡೆದಿದ್ದು, ದೇವರಿಗೆ ಬಲಿ ಕೊಡಲು ತಂದಿದ್ದ ಕುರಿಯೊಂದು ಏಕಕಾಲಕ್ಕೆ ಆರು ಮರಿಗಳಿಗೆ ಜನ್ಮ ನೀಡುವ ಮೂಲಕ ರೈತನ ಪಾಲಿಗೆ ವರವಾಗಿ ಪರಿಣಮಿಸಿದೆ. ಚಿಕ್ಕಮಗಳೂರು...

ಬಿ.ಜೆ.ಪಿಯಲ್ಲಿ ಭಾಜಾ ಭಜಂತ್ರಿ ನಿರಂಜನ್ ಸಸ್ಪೆಂಡ್ ! ಆನಂದ್ ಗೆ ಅತಿಥ್ಯ ?

ಚಿಕ್ಕಮಗಳೂರು: ಭಾರತೀಯ ಜನತಾ ಪಕ್ಷದಲ್ಲಿ ಸಸ್ಪೆಂಡ್ ಯುಗ ಪ್ರಾರಂಭವಾಗಿದೆ. ಇನ್ನೂ ಎಷ್ಟು ಜನಕ್ಕೆ ಸಸ್ಪೆಂಡ್ ಸಿಟಿ.ಹೊಡೆಯಲಿದೆ ಎಂಬ ಲೆಕ್ಕಾಚಾರ ನಡೆಯುತ್ತಿದೆ.ಯಾರನ್ನು ಸಸ್ಪೆಂಡ್ಮಾಡಬೇಕು ಯಾರಿಗೆ ಅತಿಥ್ಯ ನೀಡಬೇಕು ಎಂಬುದು ಪಕ್ಷಕ್ಕೆ ಬಿಟ್ಟ ವಿಚಾರ....

Related Articles

ಅಜ್ಜಂಪುರದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ಅಜ್ಜಂಪುರ: ರೈಲ್ವೆ ಹಳಿ ಮೇಲೆ ರೈಲಿಗೆ ಸಿಲುಕಿ ಸುಮಾರು 65 ರಿಂದ 70 ವರ್ಷ ವಯಸ್ಸಿನ...

ಶಾಸಕ ತಮ್ಮಯ್ಯ ರಸ್ತೆ ಡಾಂಬರೀಕರಣ ಕಾಮಗಾರಿ ಪರಿಶೀಲನೆ

ಚಿಕ್ಕಮಗಳೂರು: ನಗರಸಭಾ ವ್ಯಾಪ್ತಿಯಲ್ಲಿ ವಿಶೇಷ ಅನುದಾನದಡಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಪೂರ್ಣಗೊಂಡ ಕಾಮಗಾರಿಗಳನ್ನು ಶಾಸಕ ಹೆಚ್.ಡಿ....

ಕಬಡ್ಡಿ ಪಂದ್ಯಾವಳಿದಲ್ಲಿ ಜ್ಞಾನ ಸಹಾದ್ರಿ ಶಂಕರಘಟ್ಟ ತಂಡ ಪ್ರಥಮ

ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಐಡಿ ಎಸ್‌ಜಿ ಕಾಲೇಜಿನಲ್ಲಿ ನಡೆದ ಅಂತರ ಕಾಲೇಜು ಕಬಡ್ಡಿ...

ನಟ ದರ್ಶನ್ ಫೋಟೋ ಕೈಯಲ್ಲಿ ಹಿಡಿದುಕೊಂಡು ಪಾದಯಾತ್ರೆ

ಚಿಕ್ಕಮಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಬಿಡುಗಡೆ ಹಾಗೂ ಅವರ ಹುಟ್ಟುಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಕಾಫಿನಾಡಿನ ಅಭಿಮಾನಿಯೊಬ್ಬರು...