Home Latest News ಪೊಲೀಸರ ಹಲ್ಲೆಯಿಂದ ಅವಮಾನ ತಾಳದೆ ಯುವಕ ಆತ್ಮಹತ್ಯೆ
Latest NewschikamagalurHomenamma chikmagalur

ಪೊಲೀಸರ ಹಲ್ಲೆಯಿಂದ ಅವಮಾನ ತಾಳದೆ ಯುವಕ ಆತ್ಮಹತ್ಯೆ

Share
Share

ಕಳಸ: ಸಂಸೆ ಗ್ರಾಮದಲ್ಲಿ ಪೊಲೀಸರೇ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು  ದೂರು ನೀಡಿದ್ದ ಯುವಕನ ವಿರುದ್ಧವೇ ಪ್ರಕರಣ ದಾಖಲಾಗಿದ್ದು, ಇದರಿಂದ ಬೇಸತ್ತ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಸೆ ಗ್ರಾಮದ ಬಸ್ತಿಗದ್ದೆ ನಿವಾಸಿ ದಲಿತ ಸಮುದಾಯಕ್ಕೆ ಸೇರಿದ ನಾಗೇಶ್‌ ಆತ್ಮಹತ್ಯೆಗೆ ಶರಣಾಗಿರುವ ಯುವಕ. ‘ಜುಲೈ 15ರಂದು ರಾತ್ರಿ 10.30ರ ಸುಮಾರಿನಲ್ಲಿ ಆಟೊರಿಕ್ಷಾದಲ್ಲಿ ತೆರಳುತ್ತಿದ್ದಾಗ ಕುದುರೆಮುಖ ಠಾಣೆಯ ಕಾನ್‌ಸ್ಟೆಬಲ್ ಸಿದ್ದೇಶ್ ಮತ್ತು ಇಬ್ಬರು ಸ್ಥಳೀಯರು ದಾರಿಗೆ ಅಡ್ಡಲಾಗಿ ವಾಹನ ನಿಲ್ಲಿಸಿಕೊಂಡು ನಿಂತಿದ್ದರು.

ರಿಕ್ಷಾದಿಂದ ಇಳಿದು ಮೊಬೈಲ್‌ ಫೋನ್‌ನಲ್ಲಿ ಟಾರ್ಚ್ ಹಾಕಿಕೊಂಡು ಸಮೀಪಕ್ಕೆ ಹೋದಾಗ ನಾವು ಮದ್ಯ ಸೇವಿಸುತ್ತಿರುವ ದೃಶ್ಯ ಸೆರೆ ಹಿಡಿಯುತ್ತೀಯಾ ಎಂದು ಪ್ರಶ್ನಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದರು’ ಎಂದು ನಾಗೇಶ್ ದೂರು ನೀಡಿದ್ದರು. ಬಳಿಕ ಒಂದು ವಾರ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ದೂರಿನ ಬೆನ್ನಲ್ಲೇ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಕುದುರೆಮುಖ ಪೊಲೀಸರು ನಾಗೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಲ್ಲದೇ ಅವರ ಆಟೊರಿಕ್ಷಾ ಮತ್ತು ಅಡಿಕೆಗೆ ಔಷಧಿ ಸಿಂಪಡಿಸುವ ಯಂತ್ರ ವಶಪಡಿಸಿಕೊಂಡಿದ್ದರು ಎನ್ನಲಾಗಿದೆ.

ಈ ಆರೋಪ ಸಂಬಂಧ ನಾಗೇಶ್ ಜಾಮೀನು ಪಡೆದುಕೊಂಡಿದ್ದರು. ಆದರೆ, ತನ್ನ ಆಟೊ ಬಿಡಿಸಿಕೊಳ್ಳಲು ಹಣ ಇಲ್ಲದೆ, ದುಡಿಮೆಯೂ ಇಲ್ಲದೆ ಸಾಲದ ಕಂತು ಕೂಡ ಕಟ್ಟಲಾರದೆ ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ. ನಾಗೇಶ್ ಪತ್ನಿ ಹೆರಿಗೆಗೆ ಬಾಳೆಹೊಳೆಗೆ ಹೋಗಿದ್ದು ಒಂದೂವರೆ ತಿಂಗಳ ಮಗು ಇದೆ. ‘ಪೊಲೀಸರ ಜತೆಗೆ ಜಟಾಪಟಿ ನಂತರ ನಾಗೇಶ್ ತನ್ನ ಫೋನ್ ಕರೆಯನ್ನೂ ಸ್ವೀಕರಿಸುತ್ತಿರಲಿಲ್ಲ. ಪೊಲೀಸರ ಬಗ್ಗೆ ಹೆದರಿಕೊಂಡಿದ್ದರು’ ಎಂದು ಅವರ ಪತ್ನಿ ಹೇಳಿದರು.

ನಾಗೇಶ್ ಆತ್ಮಹತ್ಯೆಗೆ ಮೊದಲು ಬರೆದಿರುವ ಪತ್ರದಲ್ಲಿ ‘ನನ್ನ ಮೇಲೆ ಪೊಲೀಸ್ ಸಿಬ್ಬಂದಿಯ ದೌರ್ಜನ್ಯ ಮತ್ತು ಕುದುರೆಮುಖ ಸಬ್‌ ಇನ್‌ಸ್ಪೆಕ್ಟರ್ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಸ್ತಾಪಿಸಿದ್ದಾರೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರ ಮೃತದೇಹವನ್ನು ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಜಮಾಯಿಸಿದ ಸಂಬಂಧಿಕರು ಪ್ರತಿಭಟನೆ ನಡೆಸಿದರು.

ಮುಖಂಡ ಅಂಗಡಿ ಚಂದ್ರು ಮಾತನಾಡಿ, ‘ನಾಗೇಶ್ ಸಾವಿಗೆ ಕಾರಣರಾದ ಕಾನ್‌ಸ್ಟೆಬಲ್ ಸಿದ್ದೇಶ ಮತ್ತು ಸುಳ್ಳು ದೂರು ದಾಖಲು ಮಾಡಿದ ಸಬ್‌ ಇನ್‌ಸ್ಪೆಕ್ಟರ್ ಆದರ್ಶ್ ಅವರನ್ನು ಸೇವೆಯಿಂದ ವಜಾ ಮಾಡಿ ಬಂಧಿಸಬೇಕು. ನಾಗೇಶ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

ದೂರು ಸ್ವೀಕರಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್, ‘ನಾಗೇಶ್ ಸಾವಿನಿಂದ ನಮಗೂ ನೋವಾಗಿದೆ. ಒಂದು ತಿಂಗಳ ಮಗು ಮತ್ತು ಪತ್ನಿ ಬಗ್ಗೆ ನಮಗೂ ಸಹಾನುಭೂತಿ ಇದೆ. ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

Unable to bear the humiliation of being assaulted by the police a young man commits suicide.

Share

Leave a comment

Leave a Reply

Your email address will not be published. Required fields are marked *

Don't Miss

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

ಪ್ರೀತಿ ನಿರಾಕರಣೆ : ಬಾಲಕಿ ಮೇಲೆ ಹಲ್ಲೆ

ಚಿಕ್ಕಮಗಳೂರು: ಕಾಫಿನಾಡಿನ ಹೃದಯ ಭಾಗದಲ್ಲಿರುವ ಎಸ್ಪಿ ಮತ್ತು ಡಿಸಿ ಕಚೇರಿ ಪಕ್ಕದಲ್ಲೇ ಇರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರನ್ನ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಕಡೂರು ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ಚಿಕ್ಕಮಗಳೂರಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡು...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...