Home namma chikmagalur chikamagalur ಮಲೆನಾಡು ಭಾಗದಲ್ಲಿ ವರುಣನ ಅಬ್ಬರ
chikamagalurHomeLatest Newsnamma chikmagalur

ಮಲೆನಾಡು ಭಾಗದಲ್ಲಿ ವರುಣನ ಅಬ್ಬರ

Share
Share

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ವರುಣನ ಅಬ್ಬರ ಜೋರಾಗಿದ್ದು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ನಿನ್ನೆಯೂ ಮಲೆನಾಡಿನ ಹಲವು ಪ್ರದೇಶಗಳಲ್ಲಿ ಆರ್ಭಟಿಸಿದ್ದ ಮಳೆರಾಯ, ಇಂದು ಕೂಡ ತನ್ನ ರೌದ್ರಾವತಾರವನ್ನು ಮುಂದುವರಿಸಿದ್ದಾನೆ. ಇದರಿಂದಾಗಿ ಮಲೆನಾಡಿನ ಜನಜೀವನ ಅಸ್ತವ್ಯಸ್ತಗೊಂಡಿದೆ.

ವಿಶೇಷವಾಗಿ ಮೂಡಿಗೆರೆ ತಾಲೂಕಿನ ಸುತ್ತಮುತ್ತಲಿನ ಭಾಗಗಳಲ್ಲಿ ಮಳೆ ಅಬ್ಬರಿಸಿದ್ದು, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಹಾಗೂ ಆಲ್ಲೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಭಾರೀ ಗಾಳಿ ಮತ್ತು ಗುಡುಗು ಸಹಿತ ಸುರಿದ ಈ ಮಳೆಯಿಂದಾಗಿ ವಾಹನ ಸವಾರರು ನಿಂತಲ್ಲೇ ನಿಲ್ಲಬೇಕಾದ ಅನಿವಾರ್ಯತೆ ಎದುರಾಯಿತು.

ಚಾರ್ಮಾಡಿ ಘಾಟ್ ನಲ್ಲಿ ಹೆಚ್ಚುತ್ತಿರುವದರಿಂದ ವಾಹನಗಳು ನಿಧಾನವಾಗಿ ಸಂಚರಿಸಿದ ದೃಶ್ಯಗಳು ಕಂಡುಬಂತು. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಪ್ರಕೃತಿಯ ವಿಕೋಪಕ್ಕೆ ಜನಸಾಮಾನ್ಯರು ಆತಂಕಕ್ಕೀಡಾಗಿದ್ದಾರೆ.

ಮೂಡಿಗೆರೆ ತಾಲೂಕಿನ ಗಬ್ಬಲ್ ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದು ದಿಢೀರ್ ಮಳೆಗೆ ತತ್ತರಿಸಿದೆ. ಸೋಮವಾರ ಮಧ್ಯಾಹ್ನ ಒಂದು ಗಂಟೆ ಕಾಲ ಬೀಸಿದ ಭಾರೀ ಗಾಳಿ ಮತ್ತು ಮಳೆಯ ಆರ್ಭಟಕ್ಕೆ ಮದುವೆ ಮನೆಯಲ್ಲಿದ್ದ ಶಾಮಿಯಾನ ಮತ್ತು ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿ ಹಾರಿ ಹೋಗಿವೆ.

ಊಟಕ್ಕೆ ಹಾಕಲಾಗಿದ್ದ ಶಾಮಿಯಾನ ಮುರಿದು ಬಿದ್ದಿದ್ದರಿಂದ ಮದುವೆಗೆ ಆಗಮಿಸಿದ್ದ ಅತಿಥಿಗಳು ಮತ್ತು ಸಂಬಂಧಿಕರು ದಿಕ್ಕುತೋಚದೆ ಪರದಾಡುವಂತಾಯಿತು. ಮಳೆ ನಿಂತ ನಂತರ ಅಸ್ತವ್ಯಸ್ತಗೊಂಡಿದ್ದ ಮದುವೆ ಮನೆಯಲ್ಲಿ ಸಿಕ್ಕ ಸಿಕ್ಕ ಕಡೆಗಳಲ್ಲಿ ನಿಂತು ಊಟ ಮಾಡಿ ಅಲ್ಲಿಂದ ನಿರ್ಗಮಿಸಿದರು. ಮದುವೆಯ ಸಂಭ್ರಮಕ್ಕೆ ಮಳೆರಾಯ ಅಡ್ಡಿಪಡಿಸಿದ್ದರಿಂದ ವಧು-ವರರ ಕುಟುಂಬದವರು ಮತ್ತು ಅತಿಥಿಗಳು ಹೈರಾಣಾದ್ರು.

Varuna’s storm in the Malnad region

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...