Home namma chikmagalur chikamagalur ಕಿಡಿಗೇಡಿಗಳ ಅಟ್ಟಹಾಸಕ್ಕೆ ವಾಹನಗಳ ಗಾಜಿಗೆ ಹಾನಿ
chikamagalurCrime NewsHomeLatest Newsnamma chikmagalur

ಕಿಡಿಗೇಡಿಗಳ ಅಟ್ಟಹಾಸಕ್ಕೆ ವಾಹನಗಳ ಗಾಜಿಗೆ ಹಾನಿ

Share
Share

ಚಿಕ್ಕಮಗಳೂರು:  ನಗರದ ತಮಿಳು ಕಾಲೋನಿಯ ಅಕ್ಸ ಮಸೀದಿ ರಸ್ತೆಯಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎಂಟಕ್ಕೂ ಹೆಚ್ಚು ವಾಹನಗಳ ಗಾಜುಗಳನ್ನು ಪುಡಿಗೈದು, ಒಳಗಿದ್ದ ನಗದನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ತಮಿಳು ಕಾಲೋನಿಯ ಲಾರಿ ಸ್ಟ್ಯಾಂಡ್ ಸಮೀಪದ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಿ ಮಾಲೀಕರು ಮನೆಗೆ ತೆರಳಿದ್ದರು. ಬೆಳಿಗ್ಗೆ ಬಂದು ನೋಡಿದಾಗ ಟಾಟಾ ಏಸ್ ಸೇರಿದಂತೆ ಹಲವು ವಾಹನಗಳ ಮುಂಭಾಗದ ಗಾಜುಗಳು ಜಖಂಗೊಂಡಿರುವುದು ಕಂಡುಬಂದಿದೆ. ಕಿಡಿಗೇಡಿಗಳು ವಾಹನಗಳ ಗಾಜುಗಳನ್ನು ಒಡೆದು ಮಾತ್ರವಲ್ಲದೆ, ಡ್ಯಾಶ್‌ಬೋರ್ಡ್‌ಗಳನ್ನು ಜಖಂಗೊಳಿಸಿ ಒಳಗಿದ್ದ ಹಣವನ್ನು ದೋಚಿರುವ ಆರೋಪ ಕೇಳಿಬಂದಿದೆ.

ಸಂತ್ರಸ್ತ ವಾಹನ ಮಾಲೀಕರೊಬ್ಬರ ಪ್ರಕಾರ, ಟಾಟಾ ಏಸ್ ವಾಹನದಲ್ಲಿದ್ದ ಸುಮಾರು 25 ಸಾವಿರ ರೂ. ವ್ಯಾಪಾರದ ಹಣ ಕಳ್ಳರ ಪಾಲಾಗಿದೆ. ದುಡಿಮೆಯ ಹಣ ಕಳೆದುಕೊಂಡಿರುವ ಚಾಲಕರು ಮತ್ತು ವಾಹನ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯರ ಮಾಹಿತಿ ಪ್ರಕಾರ, ಈ ಭಾಗದಲ್ಲಿ ಇಂತಹ ಕೃತ್ಯಗಳು ಹೊಸದಲ್ಲ. ಈ ಹಿಂದೆ ಕೂಡ ಹಲವು ಬಾರಿ ವಾಹನಗಳ ಗಾಜು ಒಡೆಯುವ ಘಟನೆಗಳು ನಡೆದಿದ್ದು, ಕಿಡಿಗೇಡಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಸ್ತೆ ಬದಿಯಲ್ಲಿ ನಿಂತಿರುವ ಗುಜರಿ ಹಾಗೂ ಬಳಕೆಯಲ್ಲಿಲ್ಲದ ವಾಹನಗಳು ಸಮಾಜಘಾತುಕ ಚಟುವಟಿಕೆಗಳಿಗೆ ತಾಣವಾಗಿವೆ ಎಂಬ ಆರೋಪವೂ ಕೇಳಿಬಂದಿದೆ

Vehicle windows damaged due to mischievous behavior

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...