ಚಿಕ್ಕಮಗಳೂರು : ಶಿಸ್ತಿನ ಪಕ್ಷವೆನ್ನುತ್ತಿದ್ದ ಬಿಜೆಪಿ ಪಕ್ಷ ಒಡೆದ ಮನೆಯಾಗಿದೆ. ನಾಲ್ಕು ಗುಂಪುಗಳಾಗಿದ್ದು, ರಾಷ್ಟಿಯ ಅಧ್ಯಕ್ಷ ರಾಗಲಿ, ರಾಜ್ಯಾಧ್ಯಕ್ಷರಾಗಲಿ ಗುಂಪುಗಾರಿಕೆಗೆ ಕಡಿವಾಣ ಹಾಕುವಲ್ಲಿ, ಕ್ರಮಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಗೇಲಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಿಪಕ್ಷ ರಚನಾತ್ಮಕವಾಗಿ ಕೆಲಸ ಮಾಡಬೇಕು. ಭೌದ್ಧಿಕ ಮತ್ತು ಸೈದ್ದಾಂ ತಿಕವಾಗಿ ಬಿಜೆಪಿ ಪಕ್ಷ ದಿವಾಳಿಯಾಗಿದ್ದು, ಇಂತಹ ವಿಪಕ್ಷವನ್ನು ಇದುವರೆಗೂ ನೋಡಿರಲಿಲ್ಲ. ವಿಜಯೇಂದ್ರ, ಬಸವನ ಪಾಟೀ ಲ್ ಯತ್ನಾಳ್, ರೇಣುಕಾಚಾರ್ಯ ತಂಡವಾಗಿ ಬಿ.ವೈ.ವಿಜಯೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಾಯಿಗೆ ಬಂ ದಂತೆ ಮಾತನಾಡುತ್ತಿದ್ದಾರೆ. ಶಿಸ್ತುಕ್ರಮ ಕೈಗೊಳ್ಳುವಲ್ಲಿ ರಾಷ್ಟಿçÃಯ ಮುಖಂಡರು ಮತ್ತು ರಾಜ್ಯ ಮುಖಂಡರು ವಿಫಲರಾಗಿ ದ್ದಾರೆಂದು ದೂರಿದರು.
ವಿಪಕ್ಷ ಸಿದ್ದರಾಯಯ್ಯ ಅವರ ವೈಯಕ್ತಿಕ ವಿಚಾರ ಹಾಗೂ ಮೂಡಾ ಮತ್ತು ವಕ್ಛ್ಬೋರ್ಡ್ ವಿಚಾರವನ್ನು ಮಾತ್ರ ಪ್ರಸ್ತಾಪಿ ಸುತ್ತಿದ್ದಾರೆ. ರಾಜ್ಯದಲ್ಲಿ ರೈತರು, ಕಾರ್ಮಿಕರು, ಮಹಿಳೆಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಮಸ್ಯೆಗಳ ಬಗ್ಗೆ ಚಕಾರ ಎತ್ತುತ್ತಿಲ್ಲ. ಶಿಸ್ತಿನ ಪಕ್ಷದಲ್ಲಿ ಮನೆಯೊಂದು ಮೂರು ಬಾಗಿಲಾಗಿದೆ ಎಂದು ಟೀಕಿಸಿದರು.
ವಿಶ್ವ ಒಕ್ಕಲಿಗರ ಸಂಘದ ಚಂದ್ರಶೇಖರ ಸ್ವಾಮೀಜಿ ಆರ್‌ಎಸ್‌ಎಸ್ ಪ್ರಾಯೋಜಿತ ಭಾರತೀಯ ಕಿಸಾನ್ ಸಂಘದ ಕಾರ್ಯಕ್ರಮ ದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು ಎಂದು ಹೇಳಿರುವುದು ವಿಷಾಧನೀಯ. ಇದು ಸಂವಿಧಾನ ಮತ್ತು ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನವಾಗಿದ್ದು, ಸ್ವಾಮೀಜಿ ಬಹಿರಂಗ ಕ್ಷಮೆಯಾಚಿಸ ಬೇಕೆಂದು ಆಗ್ರಹಿಸಿದರು. ಸ್ವಾಮೀಜಿಗಳು ಸಮಾಜವನ್ನು ತಿದ್ದಿ ಸರಿದಾರಿಗೆ ತರುವ ಕೆಲಸ ಮಾಡಬೇಕು. ಸಮಾಜವನ್ನು ಪ್ರಚೋದಿಸಿ, ಸಾಮರಸ್ಯ ಹಾಳು ಮಾಡುವ ಕೆಲಸ ಮಾಡಬಾರದು ಎಂದರು.
ನಗರದಲ್ಲಿ ಒಕ್ಕಲಿಗರ ಸಂಘದ ಬೆಳ್ಳಿ ಭವನ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ. ಅವರನ್ನು ಸಮಾರಂಭಕ್ಕೆ ಆಹ್ವಾನಿಸಿ ಅಪಮಾನ ಮಾಡಿದ್ದಾರೆ. ಬಜರಂಗದಳದ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿರುವುದು ಖಂಡನೀಯ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷರು ಈ ಸಂಬಂಧ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
ಮಲೆನಾಡು ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದೆ. ಕಾಡಿನಲ್ಲಿ ಆಹಾರ ಸಿಗದೆ ನಾಡಿಗೆ ಲಗ್ಗೆ ಇಡುತ್ತಿವೆ. ಶಾಲಾ ಮಕ್ಕಳು, ಸಾರ್ವಜನಿಕರು, ಕೂಲಿ ಕಾರ್ಮಿಕರು ಜೀವಭಯದಲ್ಲಿ ಓಡಾಡಬೇಕಾಗಿದೆ. ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿ ಆನೆಗಳನ್ನು ಸ್ವಾಸ್ಥಾನಕ್ಕೆ ಕಳಿಸುವ ಕ್ರಮ ಕೈಗೊಳ್ಳಬೇಕು. ಬೆಳೆಗಾರರು ಮತ್ತು ಕೃಷಿಕರು ಅನುಭವಿಸಿರುವ ನಷ್ಟದ ನಾಲ್ಕುಪಟ್ಟು ಪರಿಹಾರ ನೀಡಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ನಡೆಯುವ ಅದಿವೇಶನದಲ್ಲಿ ಆನೆಗಳ ನಿಯಂತ್ರಣಕ್ಕೆ ನಿರ್ಣಾಯ ಕೈಗೊಳ್ಳಬೇಕು ಎಂದು ತಿಳಿಸಿದರು.
Leave a comment