Home namma chikmagalur ಯೋಗ ದಿನಾಚರಣೆ ಪ್ರಯುಕ್ತ ಕಾಲ್ಕಡಿಗೆಯ ಜಾಥಾ
namma chikmagalurchikamagalurHomeLatest News

ಯೋಗ ದಿನಾಚರಣೆ ಪ್ರಯುಕ್ತ ಕಾಲ್ಕಡಿಗೆಯ ಜಾಥಾ

Share
Share

ಚಿಕ್ಕಮಗಳೂರು: ೧೧ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದೊಂದಿಗೆ ಯೋಗಾಭ್ಯಾಸದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜೂನ್ ೧೮ ರಂದು ಬೆಳಿಗ್ಗೆ ನಗರದ ತಾಲ್ಲೂಕು ಕಚೆರಿ ಆವರಣದಿಂದ ಎಂ.ಜಿರಸ್ತೆಯಿಂದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಯೋಗ ಜಾಥಾಕ್ಕೆ ನಗರಸಭೆ ಅಧ್ಯಕ್ಷೆ ಬಿ.ಸಿ.ಸುಜಾತ ಶಿವಕುಮಾರ್ ಹಸಿರು ನಿಶಾನೆ ತೋರಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಎಸ್.ಎಸ್.ಘಟಕ, ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮೇರಾ ಯುವ ಭಾರತ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಭಾರತ ಸೇವಾ ದಳ, ವಿವಿಧ ಯೋಗ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆದ ಈ ಜಾಥಾದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಭಾಗ್ಯಕ್ಕ, ಪ್ರಭೋದಿನಿ ಯೋಗ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಹೆಚ್.ಸಿ.ಸುರೇಂದ್ರ, ಹರಿದ್ವಾರದ ಭಾರತ್ ಸ್ವಾಭಿಮಾನ್ ಪತಂಜಲಿ ಯೋಗ ಸಮಿತಿ ಪವಿತ್ರ ಎಂ.ಸಿ., ಅಣುವ್ರತ್ ಸಮಿತಿಯ ಮಂಜು ಬನ್ಸಾಲಿ, ಜ್ಞಾನರಶ್ಮಿ ಶಾಲೆ, ಎಂ.ಇ.ಎಸ್ ಶಾಲೆಯ ಮಕ್ಕಳು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಡಾ.ಶಶಿಕಲಾ, ಡಾ.ಸೀಮಾ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ ಎಸ್. ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೇರಾ ಯುವ ಭಾರತ್, ಎನ್.ಎಸ್.ಎಸ್. ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮತ್ತು ವಿವಿಧ ಯೋಗ ಸಂಸ್ಥೆಗಳ ವತಿಯಿಂದ ಜೂನ್ ೨೧ ರಂದು ಬೆಳಿಗ್ಗೆ ೬ ಗಂಟೆಗೆ ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷರು ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಮತ್ತು ಅನಿವಾಸಿ ಭಾರತೀಯ ಕೋಶ ಉಪಾಧ್ಯಕ್ಷೆ ಡಾ.ಆರತಿಕೃಷ್ಣ ಉಪಸ್ಥಿತರಿರಲಿದ್ದಾರೆ, ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಶ್ರೇಯಸ್ ಎಂ.ಪಟೇಲ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಶಾಸಕರಾದ ಜಿ.ಹೆಚ್.ಶ್ರೀನಿವಾಸ್, ಕೆ.ಎಸ್.ಆನಂದ್, ನಯನ ಮೋಟಮ್ಮ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಡಾ.ಧನಂಜಯ ಸರ್ಜಿ, ಭದ್ರ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತ್ತು ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್, ನಗರಸಭೆ ಅಧ್ಯಕ್ಷೆ ಬಿ.ಸಿ.ಸುಜಾತ ಶಿವಕುಮಾರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Walking rally on the occasion of Yoga Day

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...