ತರೀಕೆರೆ: ವಾಟರ್ ಹಿಟರ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ನಡೆದಿದೆ.
ಮೋಹನ್ (34) ಮೃತ ದುರ್ದೈವಿ. ಅಮೃತಪುರ ಗ್ರಾಮ ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೋಹನ್ ಇಂದು ಬೆಳಗ್ಗೆ ನೀರು ಬಿಡಲು ಹೋಗಿದ್ದ ವೇಳೆ ಮೋಟರ್ ನ ಸ್ಟೇಟರ್ ಗೆ ಪ್ಯೂಸ್ ಹಾಗುವ ವೇಳೆ ವಿದ್ಯುತ್ ಸ್ಪರ್ಶಿಸಿ ಕೂದಲೆಳೆ ಅಂತರದಿಂದ ಪಾರಾಗಿದ್ದರು.
ನಂತರ ಮನೆಗೆ ಬಂದಿದ್ದ ಅವರು ಕುಡಿಯಲು ನೀರು ಬಿಸಿ ಮಾಡಲು ಬಳಸುವ ವಾಟರ್ ಹಿಟರ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಈ ವೇಳೆ ಮನೆಯಲ್ಲಿದ್ದವರು ಮೋಹನ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯದರು ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಇಬ್ಬರು ಪುಟ್ಟ ಮಕ್ಕಳನ್ನು ಅಗಲಿರುವ ಮೋಹನ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕ್ರೂರ ವಿಧಿಯ ಆಟಕ್ಕೆ ಮೋಹನ್ ಬಲಿಯಾಗಿರುವುದನ್ನು ಕಂಡು ಸಂಬಂಧಿಕರ ಗೋಳಾಟ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Waterman dies due to electric shock
Leave a comment