Home Latest News ಹದಗೆಟ್ಟ ಕಾನೂನು ಸುವ್ಯವಸ್ಥೆ ಪೊಲೀಸ್ ಇಲಾಖೆಗೆ ಏನಾಗಿದೆ ?
Latest NewschikamagalurHomenamma chikmagalur

ಹದಗೆಟ್ಟ ಕಾನೂನು ಸುವ್ಯವಸ್ಥೆ ಪೊಲೀಸ್ ಇಲಾಖೆಗೆ ಏನಾಗಿದೆ ?

Share
Share

ಕಡೂರು; ಉದ್ದೇಶ ಪೂರ್ವಕವೋ ? ಆಕಸ್ಮಿಕವೋ ಮಾಜಿ ಶಾಸಕ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ಅಳಿಯ ಸಂದೇಶ್ ಮೇಲೆ ಸಂತೋಷ ಮತ್ತಿತರರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ.ಪೊಲೀಸ್ ಠಾಣೆಯ ಕೊಗಳತೆಯ ದೂರದಲ್ಲಿ ಇರುವ ಬಸವೇಶ್ವರ ವೃತ್ತದಲ್ಲಿ ಘಟನೆ ನಡೆದಿದೆ.

ಪೊಲೀಸರಿಗೆ ಕರೆ ಮಾಡಿ ಹೇಳಿದರು ಕ್ಯಾರೆ ಎನ್ನದಿರುವುದು ನೋಡಿದರೆ ಇದರಲ್ಲಿ ಪ್ರಭಾವ ಇರುವುದು ಕಂಡುಬರುತ್ತದೆ. ಶಾಸಕ ಆನಂದ್ ಘಟನೆ ಖಂಡಿಸಿದ್ದಾರೆ ನಿಜ ಪೊಲೀಸ್ ವ್ಯವಸ್ಥೆ ಇಷ್ಟು ಹದಗೆಡಲು ಕಾರಣ ಏನುಎಂದು ತಿಳಿದಿಲ್ಲದವರ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ.

ಸಂತೋಷ ಹಲ್ಲೆ ನಡೆಸಿದ್ದರ ಬಗ್ಗೆ ಸಾವಿರಾರು ಜನ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ಮಾಡಿದ ಮೇಲೆ ಸ್ಥಳಕ್ಕೆ ಬಂದ ಎಸ್.ಪಿ.ಅಮಟೆಯವರು ದೂರು ದಾಖಲಿಸಿ ತನಿಖಾ ತಂಡ ರಚಿಸಿ ಆರೋಪಿಗಳನ್ನು ಹಿಡಿಯಲು ಸೂಚನೆ ನೀಡಿದ್ದಾರೆ ಆಗದರೆ ಇಲ್ಲಿನ ಪೊಲೀಸ್ ವ್ಯವಸ್ಥೆ ಹೇಗಿದೆ ? ಮಾಜಿ ಶಾಸಕರಿಗೆ ಈ ಪರಿಸ್ಥಿತಿಯಾದರೆ ಜನಸಾಮಾನ್ಯರ ಸ್ಥಿತಿ ಏನಾಗಿದೆ.ಕಡೂರಿನಲ್ಲಿ ವಾರಕ್ಕೆರಡು ಇಂತಹ ಘಟನೆಗಳು ನಡೆಯುತ್ತಿವೆ ಎಂದು ಜನರ ಅಳಲು.

ಸಂತೋಷನ ಗುಂಪು ಈಗಾಗಲೇ ಇಂತಹ ಹಲವು ಕೃತ್ಯದಲ್ಲಿ ಭಾಗಿಯಾಗಿದ್ದು ಪೊಲೀಸ್ ರು ಎಡೆಮುರಿ ಕಟ್ಟಿ ರೌಡಿ ಪಟ್ಟಿಗೆ ಸೇರಿಸಲು ತಯಾರಿ ನಡೆದಿದ್ದಾಗ ಠಾಣಧಿಕಾರಿ ಎತ್ತಂಗಡಿ ಮಾಡಿಸಿದ್ದು ಯಾರು ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಎಸ್.ಪಿ.ಅಮಟೆಯವರು ಘಟನೆಗಳು ನಡೆದ ಸ್ಥಳಕ್ಕೆ ಭೇಟಿ ನೀಡುತ್ತಾರೆ ನಿಜ ಆದರೆ ಸ್ಥಳೀಯ ಪೊಲೀಸ್ ಆಡಳಿತದ ಪರಿಸ್ಥಿತಿ ಏಕೆ ಹೀಗಾಗಿದೆ ಅಂದರೆ ಒತ್ತಡ ಯಾರದ್ದು ಎಂದು ಜನ ಅನುಮಾನ ವ್ಯಕ್ತಪಡಿಸುತ್ತಾರೆ.

ಕಾನೂನು ಎಲ್ಲರಿಗೂ ಒಂದೇ ಎಂಬುದಕ್ಕಿಂತ ಅಧಿಕಾರಸ್ಥರಿಗೆ ಒಂದು ಕಾನೂನು ಇದೆಯೇ. ಪೊಲೀಸ್ ಇಲಾಖೆ ಕಾನೂನು ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಜನ ದೂರುತ್ತಿರುವುದು ಮಾತ್ರ ಸತ್ಯ

ಜಿಲ್ಲೆಯಲ್ಲಿ ಆಡಳಿತ ಪಕ್ಷದ ಮರ್ಜಿಯಲ್ಲಿ ಪೊಲೀಸ್ ರು ನಡೆದುಕೊಂಡರೆ ವಿರೋಧ ಪಕ್ಷದವರು ಬಾಯಿ ಮುಚ್ಚಿ ಕುಳಿತಿರುವುದು ಕಾನೂನು ಸುವ್ಯವಸ್ಥೆ ಕುಸಿದು ಜನ ನೋವು ಅನುಭವಿಸುತ್ತಿದ್ದಾರೆ.

ಸಮಯದ ಮಿತಿ ಇಲ್ಲದೆ ನಡೆಯುತ್ತಿರುವ ಲಿಕ್ಕರ್ ಶಾಪ್ ಗಳು ಹೇರಳವಾಗಿ ಸಿಗುತ್ತಿರುವ ಗಾಂಜಾ ಅಧಿಕಾರಸ್ಥರಿಗೆ ಜೈ, ಜೈ

ಅನ್ನುವ ಮಂದಿಗಳಿಂದ ಪದೇ,ಪದೇ ಗಲಾಟೆಗೆ ಕಾರಣ ಎನ್ನಲಾಗಿದೆ.

What is the law and order situation in the police department?

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...