Home namma chikmagalur chikamagalur ಯಡಿಯೂರಪ್ಪ ಸ್ವಾಗತಿಸುವ ವೇಳೆ ದಿಕ್ಕಾರ…?
chikamagalurHomeLatest Newsnamma chikmagalur

ಯಡಿಯೂರಪ್ಪ ಸ್ವಾಗತಿಸುವ ವೇಳೆ ದಿಕ್ಕಾರ…?

Share
Share

ಚಿಕ್ಕಮಗಳೂರು: ನಗರಕ್ಕೆ ಆಗಮಿಸಿದ ಬಿ.ಎಸ್. ಯಡಿಯೂರಪ್ಪ ಅವರನ್ನು ಸ್ವಾಗತಿಸುವ ವೇಳೆ ಒಂದು ವಿಚಿತ್ರ ಘಟನೆ ಗಮನಸೆಳೆಯಿತು. ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗುವ ವೇಳೆ ಗೊಂದಲ ಉಂಟಾಗಿ, ಕೆಲವರು ತಪ್ಪಾಗಿ ಯಡಿಯೂರಪ್ಪ ವಿರುದ್ಧವೇ ಘೋಷಣೆ ಕೂಗಲು ಮುಂದಾದರು.

ವಿನಯ್ ಕುಲಕರ್ಣಿಯನ್ನು ಜೈಲಿಗೆ ಕಳುಹಿಸಿದ ಯಡಿಯೂರಪ್ಪನವರಿಗೆ ಜೈ ಎಂದು ಘೋಷಣೆ ಕೂಗುವ ವೇಳೆ, ಕೆಲವರು ತಪ್ಪಾಗಿ ವಿರೋಧದ ಘೋಷಣೆ ಕೂಗಿದಂತಾಗಿದೆ. ನಂತರ ತಕ್ಷಣವೇ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಕಾರ್ಯಕರ್ತರು ತಮ್ಮ ಘೋಷಣೆಯನ್ನು ನಿಲ್ಲಿಸಿದರು. ಈ ಘಟನೆ ಸ್ಥಳದಲ್ಲಿದ್ದವರ ಗಮನಸೆಳೆಯಿತು.

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ, ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಆಜಾದ್ ಪಾರ್ಕ್ ವೃತ್ತದಲ್ಲಿ ಮಾತನಾಡಿದ ಅವರು, ಈ ಘಟನೆ ಬಗ್ಗೆ ಏನು ಹೇಳಬೇಕು ಎನ್ನುವುದು ನನಗೆ ತೋಚುತ್ತಿಲ್ಲ. ಆ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ. ಈ ರೀತಿಯ ಘಟನೆ ನಡೆಯಬಾರದಿತ್ತು, ಆದರೆ ನಡೆದಿದ್ದು ದುಃಖಕರ. ಅಪರಾಧ ನಡೆದ ಸಂದರ್ಭದಲ್ಲಿ ನಾನು ಹೇಳಬೇಕಿದ್ದನ್ನು ಆಗಲೇ ಹೇಳಿದ್ದೆ. ಇಂದು ನಾನು ಹೇಳಿದ್ದೇ ಸತ್ಯ ಎಂಬಂತೆ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟರು.

2016ರಲ್ಲಿ ಯೋಗೇಶ್ ಗೌಡ ಕೊಲೆ ನಡೆದಾಗ ಇಂದಿನ ಸಿಎಂ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿತ್ತು. ಸಿಬಿಐಗೆ ನೀಡಬೇಕೆಂದು ಯೋಗೇಶ್ ಗೌಡ ಕುಟುಂಬ ಒತ್ತಾಯಿಸಿದ್ರು. ಆದರೆ ಆಗ ಕೇಸ್ ಬಗ್ಗೆ ಯಾವ ಬೆಳವಣಿಗೆಯೂ ನಡೆಯಲಿಲ್ಲ. ಆದರೆ ಮೈತ್ರಿ ಸರ್ಕಾರ ಇದ್ದಾಗ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಈ ಕೇಸ್ ಅನ್ನು 2019ರಲ್ಲಿ ಸಿಬಿಐಗೆ ವಹಿಸಿದರು. ಅಲ್ಲಿಂದ ಈ ಪ್ರಕರಣಕ್ಕೆ ಟರ್ನಿಂಗ್ ಪಾಯಿಂಟ್ ಸಿಕ್ಕಿತು.

ಬಿ.ಎಸ್. ಯಡಿಯೂರಪ್ಪ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದು, ನಾಳೆ ಲಿಂಗಾಯಿತ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೈತ್ರಾದೇವಿ-ಯಡಿಯೂರಪ್ಪ ವೀರಶೈವ ಲಿಂಗಾಯಿತ ಸಮುದಾಯ ಭವನವು ಸುಮಾರು ₹10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನಗರದ ಎಐಟಿ ಕಾಲೇಜು ಹಿಂಭಾಗದಲ್ಲಿ ಈ ಭವನ ನಿರ್ಮಾಣವಾಗಿದೆ. ಕಾರ್ಯಕ್ರಮದ ಬಳಿಕ ಅವರು ನಾಳೆ ಮಧ್ಯಾಹ್ನ ಬೆಂಗಳೂರಿಗೆ ಮರಳಲಿದ್ದಾರೆ ಎಂದು ತಿಳಿದು ಬಂದಿದೆ.

Where will Yediyurappa greet us?

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...