Home namma chikmagalur chikamagalur ಬೀರೂರಿನಲ್ಲಿ ಅನುಮಾನದ ಭೂತಕ್ಕೆ ಪತ್ನಿ ಕೊಲೆ
chikamagalurHomeLatest Newsnamma chikmagalur

ಬೀರೂರಿನಲ್ಲಿ ಅನುಮಾನದ ಭೂತಕ್ಕೆ ಪತ್ನಿ ಕೊಲೆ

Share
Share

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾಗಿ 12 ವರ್ಷಗಳ ಸುಖ ಸಂಸಾರ ನಡೆಸಿದ್ದ ದಂಪತಿಗಳ ನಡುವೆ ಅನುಮಾನದ ಕಿಚ್ಚು ಹತ್ತಿ, ದಾಂಪತ್ಯ ಜೀವನವೇ ನಾಶವಾಗಿದೆ. ಈ ಅನುಮಾನದ ಭೂತದಿಂದ ಪತ್ನಿಯ ಕೊಲೆ ಮಾಡಿರುವ ಘಟನೆ ಬೀರೂರು ಪಟ್ಟಣದ ಚೌಡೇಶ್ವರಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಮತಾ (32) ಎಂದು ಗುರುತಿಸಲಾಗಿದೆ.

ಇದೀಗ ಕೊಲೆ ಮಾಡಿದ ಪತಿ ರಂಗನಾಥ್ ಪೊಲೀಸರ ವಶದಲ್ಲಿದ್ದಾನೆ. ಅಜ್ಜಂಪುರ ತಾಲೂಕಿನ ಬುರುಡೆಕಟ್ಟೆ ಗ್ರಾಮದ ರಂಗನಾಥ್ ಮತ್ತು ಮಮತಾ ಪರಸ್ಪರ ಪ್ರೀತಿಸಿ 12 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. 7 ವರ್ಷಗಳ ಹಿಂದೆ ಇವರು ಬೀರೂರಿಗೆ ಬಂದು ನೆಲೆಸಿದ್ದರು.

ಗಾರೆ ಕೆಲಸ ಮಾಡುತ್ತಿದ್ದ ರಂಗನಾಥ್ ಸುಖ ಸಂಸಾರವನ್ನು ಮಾಡುತ್ತಿದ್ದ, ಗಂಡನಿಗೆ ಸಹಾಯವಾಗಲಿ ಎಂದು ಮಮತಾ ಕೂಡ ಅಡಿಕೆ ಸುಲಿಯುವ ಮತ್ತು ಮದುವೆ ಮಂಟಪಗಳಲ್ಲಿ ಕೆಲಸ ಮಾಡುತ್ತಿದ್ದಳು. ಕೆಲಸದ ನಿಮಿತ್ತ ಹೊರಹೋಗುತ್ತಿದ್ದ ಮಮತಾಗೆ ಮೊಬೈಲ್ ಚಟ ಹೆಚ್ಚಾಗಿತ್ತು.

ಇದರಿಂದ ಹಲವಾರು ಪುರುಷರ ಜೊತೆ ಅವರು ಸಂಪರ್ಕದಲ್ಲಿದ್ದಾಳೆ ಎಂಬ ಸಂಶಯ ರಂಗನಾಥ್ ಮನಸ್ಸಿನಲ್ಲಿ ಇತ್ತು. ಫೆಬ್ರವರಿ 4ರ ಸಂಜೆ ಮಗನ ಹುಟ್ಟುಹಬ್ಬದ ಆಚರಣೆಗೆ ಮನೆಯಲ್ಲಿ ಸಿದ್ಧತೆ ನಡೆದಿತ್ತು. ಇದೇ ವೇಳೆ ಮಮತಾ ಮೊಬೈಲ್‌ನಲ್ಲೇ ಬ್ಯುಸಿಯಾಗಿರುವುದನ್ನು ನೋಡಿ ರಂಗನಾಥ್ ಅವರ ಕೋಪ ನೆತ್ತಿಗೇರಿತ್ತು. ಆಕ್ರೋಶಗೊಂಡ ರಂಗನಾಥ್, ಮಕ್ಕಳ ಮುಂದೆಯೇ ಗಲಾಟೆ ಆರಂಭಿಸಿದ್ದಾರೆ.

ಜಗಳ ವಿಕೋಪಕ್ಕೆ ಹೋಗಿ, ಮಮತಾಳನ್ನು ನೆಲಕ್ಕೆ ಕೆಡವಿ ಕತ್ತು ಹಿಸುಕಿ, ವೇಲ್‌ನಿಂದ ಬಿಗಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹತ್ಯೆಯ ನಂತರ ರಾತ್ರಿಯಿಡೀ ಹೆಂಡತಿಯ ಶವ ಮತ್ತು ಮಕ್ಕಳ ಜೊತೆಯೇ ಕಳೆದ ಹಂತಕ ರಂಗನಾಥ್, ಫೆಬ್ರವರಿ 5ರ ಗುರುವಾರ ಬೆಳಿಗ್ಗೆ ಬೀರೂರು ಪೊಲೀಸ್ ಠಾಣೆಗೆ ಹೋಗಿ, ಸರ್, ನನ್ನ ಹೆಂಡತಿ ರಾತ್ರಿ ಚೆನ್ನಾಗಿದ್ದಳು, ಬೆಳಿಗ್ಗೆ ಎದ್ದೇಳುತ್ತಿಲ್ಲ ಎಂದು ಕಥೆ ಕಟ್ಟಿದ್ದಾನೆ.
ಆದರೆ ಮನೆಗೆ ಬಂದು ಪರಿಶೀಲಿಸಿದ ಪೊಲೀಸರಿಗೆ ಕುತ್ತಿಗೆಯ ಮೇಲಿದ್ದ ಗುರುತುಗಳನ್ನು ನೋಡಿ ಇದು ಕೊಲೆ ಎಂದು ಖಚಿತವಾಗಿದೆ. ವಿಚಾರಣೆ ನಡೆಸಿದಾಗ ರಂಗನಾಥ್ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಹೆಂಡತಿ ಬರ್ಬರವಾಗಿ ಹತ್ಯೆಯಾಗಿದ್ದು, ಗಂಡ ಜೈಲು ಪಾಲಾಗಿದ್ದಾನೆ. ತಂದೆ-ತಾಯಿಯ ನಡುವಿನ ಜಗಳ ಮತ್ತು ಅನುಮಾನಕ್ಕೆ ಇಬ್ಬರು ಮುಗ್ಧ ಮಕ್ಕಳು ಅನಾರ್ಥರಾಗಿದ್ದಾರೆ.
Wife murdered over suspicion in Birur
Share

Leave a comment

Leave a Reply

Your email address will not be published. Required fields are marked *

Don't Miss

ಕಾರ್ಮಿಕ ವಿರೋಧಿ ನಡೆ ಖಂಡಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಕಾರ್ಮಿಕ ವಿರೋಧಿ ನಡೆ ಅನುಸರಿಸುತ್ತಿರುವ ಸರ್ಕಾರಗಳ ವಿರುದ್ಧ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಎಐಟಿಯುಸಿ, ಪ್ಲಾಂಟೇಷನ್ ಯೂನಿಯನ್, ಬಿಸಿಯೂ ಟ-ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ನೂರಾರು ಕಾರ್ಮಿಕರು ಧರಣಿ ನಡೆಸಿ, ಅಂಚೆ...

ಮಾನಸಿಕ-ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ಚಿಕ್ಕಮಗಳೂರು:  ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ...

Related Articles

ನಿಂತಿದ್ದ ಕಂಟೇನರ್ ಗೆ ಕಾರು ಡಿಕ್ಕಿ-ವ್ಯಕ್ತಿ ಸಾವು

ಚಿಕ್ಕಮಗಳೂರು: ನಿಂತಿದ್ದ ಕಂಟೇನರ್ ಗೆ ಕಾರು ಅಪ್ಪಳಿಸಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ಫೆ 17 ರ ಬೆಳಗಿನ...

ನಿವೃತ್ತ ಮಹಿಳಾ ನೌಕರಿಗೆ 1,50,000 ರೂ ವಂಚನೆ

ಚಿಕ್ಕಮಗಳೂರು: ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಮಹಿಳಾ ನೌಕರರೊಬ್ಬರಿಗೆ ಫೇಸ್ ಬುಕ್ ನಲ್ಲಿ BOB PENSION...

ವಿಮಾ ಪರಿಹಾರ ಬಡ್ಡಿ ಸಹಿತ ನೀಡಲು ಆದೇಶ

ಚಿಕ್ಕಮಗಳೂರು: ಶಿಕ್ಷಕರ ಸಹಕಾರ ಬ್ಯಾಂಕ್‌ನಿಂದ ಸಾಲ ಪಡೆದ ಸರ್ಕಾರಿ ಶಿಕ್ಷಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಸಾಲ ಮರುಪಾವತಿಗೆ...

ನನ್ನ ಆಟ ನನ್ನದು ಎನ್ನುತ್ತಲೇ ಶಾಸಕ ತಮ್ಮಯ್ಯ ವಿದೇಶಿ ಟೂರ್

ಚಿಕ್ಕಮಗಳೂರು: ಶಾಸಕ ಹೆಚ್.ಡಿ.ತಮ್ಮಯ್ಯ ವಿದೇಶಕ್ಕೆ ಪ್ರಯಾಣ ಮಾಡಿದ್ದಾರೆ.ಅದರಲ್ಲೂ ಅಲ್ಲಿನ ರೈತರ ಬದುಕು,ವ್ಯವಸಾಯದ ವಿಧಾನ ತಿಳಿದುಕೊಂಡು ಬಂದು...