Home Crime News ಪತ್ನಿ ಕೊಂದು ಹೂತಿಟ್ಟ ಪ್ರಕರಣ: ಪತಿ, ಅತ್ತೆ, ಮಾವ ಪೊಲೀಸ್‌ ವಶಕ್ಕೆ
Crime NewsHomeKadurLatest Newsnamma chikmagalur

ಪತ್ನಿ ಕೊಂದು ಹೂತಿಟ್ಟ ಪ್ರಕರಣ: ಪತಿ, ಅತ್ತೆ, ಮಾವ ಪೊಲೀಸ್‌ ವಶಕ್ಕೆ

Share
Share
ಕಡೂರು: ತಾಲ್ಲೂಕಿನ ಕಸಬಾ ಹೋಬಳಿಯ ಆಲಘಟ್ಟ ಗ್ರಾಮದಲ್ಲಿ ಸುಮಾರು ಒಂದೂವರೆ ತಿಂಗಳ ಹಿಂದೆ ಪತ್ನಿಯನ್ನು ಕೊಂದು ಹೂತಿಟ್ಟ ಪ್ರಕರಣ ಸಂಬಂಧ ಮೃತಳ ಪತಿ ವಿಜಯ್‌ಕುಮಾರ್‌, ಅತ್ತೆ ತಾಯಮ್ಮ ಹಾಗೂ ಮಾವ ಗೋವಿಂದಪ್ಪ ಅವರನ್ನು ಕಡೂರು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಆಲಘಟ್ಟದ ವಿಜಯಕುಮಾರ್‌ ತಾಲ್ಲೂಕಿನ ಚಿಕ್ಕಂಗಳ ಗ್ರಾಮದ ಸಮೀಪ ಪರದೇಶಿಹಾಳ್‌ನ ಭಾರತಿ ಎಂಬುವರನ್ನು ಆರು ವರ್ಷಗಳ ಹಿಂದೆ ವಿವಾಹವಾಗಿದ್ದರು.

ಆರೋಪಿ ವಿಜಯ್‌ಕುಮಾರ್‌ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಪತ್ನಿ ಭಾರತಿಯ ಬಾಯಿಗೆ ಬಟ್ಟೆ ತುರುಕಿ ಹೊಡೆದು ಆಕೆಯು ಮೃತಪಟ್ಟ ಬಳಿಕ ಜಮೀನಿನಲ್ಲಿ ವಿಫಲವಾಗಿದ್ದ ಕೊಳವೆಬಾವಿಯಲ್ಲಿ ಶವವನ್ನು ಹೂತಿಟ್ಟು ಕಡೂರು ಪೊಲೀಸ್‌ ಠಾಣೆಯಲ್ಲಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಯ ಪೋಷಕರು ಕೇಳಿದರೆ ಸಂಬಂಧಿಕರಿಗೆ ಹುಷಾರಿಲ್ಲವೆಂದು ಶಿವಮೊಗ್ಗಕ್ಕೆ ಹೋಗಿದ್ದಾಳೆ ಎಂದು ಸಬೂಬು ಹೇಳಿ ಜಾರಿಕೊಳ್ಳುತ್ತಿದ್ದ. ವಿಜಯಕುಮಾರ್‌ ಅನುಮಾನಾಸ್ಪದ ಹೇಳಿಕೆ ಹಾಗೂ ನಡವಳಿಕೆಯಿಂದ ಸಂಶಯಗೊಂಡ ಪೊಲೀಸರು ವಿಚಾರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸಿ ಹತ್ಯೆ ಮಾಡಿರುವುದು ಹಾಗೂ ಆರೋಪಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಮೃತ ಭಾರತಿಯ ಅತ್ತೆ ಮತ್ತು ಮಾವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

Wife’s murder and burial case: Husband mother-in-law  father-in-law taken into police custody

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...