Home namma chikmagalur chikamagalur ಬೊಲೆರೋ ಪಿಕ್ ಅಪ್ ವಾಹನದಲ್ಲಿ ಕಾಡುಪ್ರಾಣಿಯ ಮಾಂಸ ಪತ್ತೆ
chikamagalurHomeLatest Newsnamma chikmagalur

ಬೊಲೆರೋ ಪಿಕ್ ಅಪ್ ವಾಹನದಲ್ಲಿ ಕಾಡುಪ್ರಾಣಿಯ ಮಾಂಸ ಪತ್ತೆ

Share
Share

ಮೂಡಿಗೆರೆ: ಕಾಡುಪ್ರಾಣಿಗಳನ್ನು ಬೇಟೆಯಾಡಿ ಸಾಗಿಸುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಜನ್ನಾಪುರದಿಂದ ಮೂಡಿಗೆರೆ ಕಡೆಗೆ ಬೊಲೆರೋ ಪಿಕ್ ಅಪ್ ವಾಹನದಲ್ಲಿ ಕಾಡುಪ್ರಾಣಿಯ ಮಾಂಸ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಗೋಣಬೀಡು ಶಾಖೆಯ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

ಹಾಲೂರು ಗ್ರಾಮದ ಜೋಗಣ್ಣನಕೆರೆ ಬಸ್‌ಸ್ಟಾಂಡ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ನಿಲ್ಲಿಸದೆ ವೇಗವಾಗಿ ಸಾಗಿದ್ದ ಬಿಳಿ ಬಣ್ಣದ ಮಹೀಂದ್ರ ಬೊಲೆರೋ ಮ್ಯಾಕ್ಸ್ ಟ್ರಕ್ (KA-46-6330) ಅನ್ನು ಅಧಿಕಾರಿಗಳು ಬೆನ್ನಟ್ಟಿ ಹಿಡಿದಿದ್ದಾರೆ. ವಾಹನವನ್ನು ಪರಿಶೀಲಿಸಿದಾಗ ಪ್ಲಾಸ್ಟಿಕ್ ಚೀಲದಲ್ಲಿ ಸತ್ತಿರುವ ಮೂರು ಪುನುಗುಬೆಕ್ಕುಗಳು (Small Indian Civet Cat) ಪತ್ತೆಯಾಗಿವೆ.

ಬಂಧಿತ ಆರೋಪಿಗಳಾದ ಅಬಚೂರಿನ ಎ.ಜೆ.ನಂದನ್ (38 ವರ್ಷ) ಮತ್ತು ಹಾಲೂರು ಗ್ರಾಮದ ಹೆಚ್.ಜಿ.ಆದರ್ಶ (33 ವರ್ಷ) ಅವರನ್ನು ವಿಚಾರಣೆ ನಡೆಸಿದಾಗ, ಇವರು ಚಿಕ್ಕಮಗಳೂರು ತಾಲ್ಲೂಕಿನ ಕಳಸಾಪುರ ಮತ್ತು ಮರ್ಲೆ ಗ್ರಾಮದ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಸರ್ಚ್ ಲೈಟ್ ಬಳಸಿ ರಾತ್ರಿ ವೇಳೆ ಬೇಟೆಯಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಬೇಟೆಯಾಡಿದ ಪ್ರಾಣಿಗಳ ಮಾಂಸವನ್ನು ಬಳಸುವ ಉದ್ದೇಶವನ್ನು ಇವರು ಹೊಂದಿದ್ದರು ಎಂದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಿದ ಎರಡು ಒಂಟಿನಳಿಕೆ ಬಂದೂಕುಗಳು, 4 ಜೀವಂತ ಗುಂಡುಗಳು, ಒಂದು ಸರ್ಚ್ ಲೈಟ್, ಎರಡು ಮೊಬೈಲ್ ಫೋನ್‌ಗಳು ಮತ್ತು ಬೊಲೆರೋ ವಾಹನವನ್ನು ಇಲಾಖೆ ವಶಕ್ಕೆ ಪಡೆದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ (WLOR/No.03/2026-27) .

ಪ್ರಕರಣದಲ್ಲಿ ಭಾಗಿಯಾದ ಎ3 ರಿಂದ ಎ6 ವರೆಗಿನ ಆರೋಪಿಗಳಾದ ಪ್ರೀತಮ್, ಚಿದಾನಂದ, ಕೃಷ್ಣಪ್ಪ ಮತ್ತು ಬಂದೂಕು ನೀಡಿ ಸಹಕರಿಸಿದ ಹೆಚ್.ಜಿ.ಕರುಣಾಕರಮೂರ್ತಿ ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ.

Wild animal meat found in Bolero pick-up vehicle

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...