Home Latest News ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ
Latest NewschikamagalurHomenamma chikmagalur

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

Share
Share

ಮೂಡಿಗೆರೆ: ತಾಲ್ಲೂಕಿನಲ್ಲಿ ಹಾದು ಹೋಗಿರುವ ಚಾರ್ಮಾಡಿ ಘಾಟಿಯಲ್ಲಿ ಶನಿವಾರ ಕಾಡಾನೆ ಕಾಣಿಸಿಕೊಂಡಿದ್ದು, ಪ್ರವಾಸಿಗರು ಹಾಗೂ ವಾಹನ ಸಹಾರರು ಆತಂಕಗೊಂಡರು.

ಘಾಟಿಯ ಅರಣ್ಯ ಪ್ರದೇಶದಿಂದ ರಸ್ತೆ ಬದಿಗೆ ಬಂದ ಕಾಡಾನೆಯು, ಕೆಲ ಹೊತ್ತು ರಸ್ತೆ ಮಧ್ಯ ನಿಂತು ವಾಹನ ಸಂಚಾರಕ್ಕೆ ಅಡ್ಡಿ ಮಾಡಿತು. ಕಾಡಾನೆ ಬಂದಿರುವ ಮಾಹಿತಿ ತಿಳಿಯುತ್ತಿದ್ದಂತೆ ವಾಹನ ಸವಾರರು ಕಾಡಾನೆಯತ್ತ ತೆರಳಿ ಸೆಲ್ಫಿ ಕ್ಲಿಕ್ಕಿಸಿಕೊಂಡರು.

ರಸ್ತೆ ಮಧ್ಯದಿಂದ ಬಹಳ ಸಮಯದವರೆಗೆ ಹೋಗದ ಕಾರಣ ರಸ್ತೆಯ ಎರಡೂ ಬದಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕಾಡಾನೆ ಅರಣ್ಯದತ್ತ ಸಾಗಿದ ನಂತರ ವಾಹನ ಸಂಚಾರ ಪ್ರಾರಂಭಗೊಂಡಿತು.

‘ಘಾಟಿಯಲ್ಲಿ ಕಾಡಾನೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ವಾಹನ ಸವಾರರು ಆತಂಕದಿಂದ ಸಂಚರಿಸುವಂತಾಗಿದೆ. ಅನಾಹುತ ಸಂಭವಿಸುವ ಮೊದಲು ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳದಲ್ಲಿದ್ದ ವಾಹನ ಸವಾರರು ಒತ್ತಾಯಿಸಿದರು.

Wild elephant at Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಹಲವು...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

Related Articles

ವೀರಶೈವ ಲಿಂಗಾಯತ ಸಮಾರಂಭದಲ್ಲಿ “ಕುರ್ಚಿ” ತಿಕ್ಕಾಟ ಹಲವು ಸ್ವಾಮಿಜೀಗಳ ವಿರೋದ

ಚಿಕ್ಕಮಗಳೂರು: ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮಿಗಳ ಮಧ್ಯೆ ಕುರ್ಚಿಗಾಗಿ ಪ್ರತಿರೋಧ ಪ್ಯಕ್ತಪಡಿಸಿ ಹೊರ ನಡೆದ ಘಟನೆ...

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...