Home namma chikmagalur chikamagalur ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ಕಾಡಾನೆ ಸೆರೆ
chikamagalurHomeLatest Newsnamma chikmagalur

ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ಕಾಡಾನೆ ಸೆರೆ

Share
Share

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ಮಲೆನಾಡಿಗರ ನಿದ್ದೆಗೆಡಿಸಿ, ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ರಕ್ಕಸ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ.

ಭಾನುವಾರ ಬೆಳಿಗ್ಗೆ ಮತ್ತೊಬ್ಬ ಕಾರ್ಮಿಕ ಮಹಿಳೆಯನ್ನು ಭೀಕರವಾಗಿ ಕೊಂದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ವೈದ್ಯರ ತಂಡ, ಚಾಣಾಕ್ಷತನದಿಂದ ಕಾರ್ಯಾಚರಣೆ ನಡೆಸಿ ಆನೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.

ಭಾನುವಾರ ಬೆಳಿಗ್ಗೆ ಚಿಕ್ಕಮಗಳೂರು ತಾಲೂಕಿನ ಬೆರಣಗೋಡು ಸಮೀಪದ ಕೆರೆಮನೆ ಬಳಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಬೋರಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅರ್ಧ ಗಂಟೆಯಲ್ಲೇ ಆಪರೇಷನ್: ಮಹಿಳೆಯ ಸಾವಿನಿಂದ ಕೆರಳಿದ ಜನ ಹಾಗೂ ಸ್ಥಳದಲ್ಲೇ ಬೀಡುಬಿಟ್ಟಿದ್ದ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾದರು. ಮಹಿಳೆ ಬಲಿಯಾದ ಕೇವಲ 30 ನಿಮಿಷಗಳ ಅಂತರದಲ್ಲೇ ಆನೆಯನ್ನು ಸುತ್ತುವರಿಯಲಾಯಿತು.

ಅರವಳಿಕೆ ಚುಚ್ಚುಮದ್ದು: ಅರಣ್ಯ ಇಲಾಖೆಯ ಶೂಟರ್‌ಗಳು ಹಾಗೂ ಪಶುವೈದ್ಯರ ತಂಡ ಆನೆಗೆ ನಿಖರವಾಗಿ ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಅದನ್ನು ನಿಷ್ಕ್ರಿಯಗೊಳಿಸಿದರು.ಅದನ್ನು ಸ್ಥಳಾಂತರಿಸಲು ಸಾಕಾನೆಗಳ (ಕುಮ್ಮಿ) ತಂಡವನ್ನು ಸ್ಥಳಕ್ಕೆ ಕರೆಯಿಸಿಕೊಳ್ಳಲಾಗಿದೆ.

Wild elephant that killed two innocent people captured

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...