Home namma chikmagalur ಕಮ್ಮರಗೋಡು ಗ್ರಾಮದ ಕೃಷಿಹೊಂಡದಲ್ಲಿ ಕಾಡಾನೆ ನೀರಾಟ
namma chikmagalurchikamagalurHomeLatest News

ಕಮ್ಮರಗೋಡು ಗ್ರಾಮದ ಕೃಷಿಹೊಂಡದಲ್ಲಿ ಕಾಡಾನೆ ನೀರಾಟ

Share
Share

ಮೂಡಿಗೆರೆ: ಗೋಣಿಬೀಡು ಹೋಬಳಿಯ ಕಮ್ಮರಗೋಡು ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಬಂದಿದ್ದ ಕಾಡಾನೆಯೊಂದು ಕೃಷಿಹೊಂಡಕ್ಕೆ ಇಳಿದು ಅರ್ಧ ಗಂಟೆಗೂ ಹೆಚ್ಚು ಕಾಲ ನೀರಾಟವಾಡಿದೆ.

ಗೋಣಿಬೀಡು ಹೋಬಳಿಯಲ್ಲಿ ಒಂದೂವರೆ ತಿಂಗಳಿನಿಂದಲೂ ಬೀಡುಬಿಟ್ಟಿರುವ ಒಂಟಿ ಕಾಡಾನೆಯು ಕೆಲ ದಿನಗಳ ಹಿಂದೆ ಮನೆಯೊಳಗೆ ಪ್ರವೇಶಿಸುವ ಯತ್ನ ನಡೆಸಿ ಭೀತಿಗೊಳಿಸಿತ್ತು.

ಕಾಡಾನೆ ಕೃಷಿ ಹೊಂಡಕ್ಕೆ ಇಳಿದಿರುವ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದು, ವಿಡಿಯೊ, ಫೋಟೊ ಸೆರೆ ಹಿಡಿದರೂ ಕೃಷಿ ಹೊಂಡದಿಂದ ಕಾಡಾನೆ ಮೇಲೆ ಬರಲಿಲ್ಲ. ಬಳಿಕ ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡಾನೆಯನ್ನು ಕೃಷಿ ಹೊಂಡದಿಂದ ಓಡಿಸಿದ್ದು, ಪಕ್ಕದಲ್ಲಿರುವ ಅರಣ್ಯ ಪ್ರದೇಶ ಸೇರಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಒಂಟಿ ಕಾಡಾನೆ ಆತಂಕ: ಮಾಕೋನಹಳ್ಳಿ, ನಂದೀಪುರ, ಗೋಣಿಬೀಡು ಗ್ರಾ.ಪಂಗಳ ಸುತ್ತಮುತ್ತಲ ಪ್ರದೇಶಗಳಲ್ಲಿಯೇ ಒಂದೂವರೆ ತಿಂಗಳಿನಿಂದ ಓಡಾಡುತ್ತಿರುವ ಕಾಡಾನೆಯು, ಇತ್ತೀಚೆಗೆ ಹಗಲಿನಲ್ಲಿಯೂ ಕಾಣಿಸಿಕೊಳ್ಳು ತ್ತಿರುವುದು ಸ್ಥಳೀಯರಿಗೆ ಆತಂಕ ಮೂಡಿಸಿದೆ.

ರಾತ್ರಿಯಾಗುತ್ತಿದ್ದಂತೆ ಮನೆಯಂಗಳಕ್ಕೆ ಬರುವ ಕಾಡಾನೆಯು ಕಾಫಿ ತೋಟ, ಮನೆಯಂಗಳದಲ್ಲಿ ಬೆಳೆದಿರುವ ಬೆಳೆಗಳನ್ನು ನಾಶ ಮಾಡುತ್ತಿದ್ದು, ಬೆಳಕು ಮೂಡಿದರೂ ಗ್ರಾಮದೊಳಗೆ ಕಾಣಿಸಿಕೊಳ್ಳುತ್ತಿದ್ದು ಜೀವ ಭಯದಿಂದಿರುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Wild elephants watering in an agricultural pond in Kammaragod village

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...