Home ಕಂಚಿಕೆರೆ ಗ್ರಾಮದ ಕಾಲಭೈರವನ ದೇವಸ್ಥಾನಕ್ಕೆ ವಾಮಾಚಾರ
HomeLatest Newsnamma chikmagalur

ಕಂಚಿಕೆರೆ ಗ್ರಾಮದ ಕಾಲಭೈರವನ ದೇವಸ್ಥಾನಕ್ಕೆ ವಾಮಾಚಾರ

Share
Share

ಚಿಕ್ಕಮಗಳೂರು: ಭದ್ರಾ ನದಿಯ ದಡದಲ್ಲಿ ನಿರಂತರ ವಾಮಾಚಾರಗಳು ನಡೆಯುತ್ತಲೇ ಇರುತ್ತದೆ. ಆದರೆ ಈಗ ನದಿಯ ಸಮೀಪವಿರುವ ದೇವಸ್ಥಾನದ ಮುಂಭಾಗದಲ್ಲಿಯೇ ವಾಮಾಚಾರ ಮಾಡಲಾಗಿದೆ. ಅದರಲ್ಲೂ ಯುಗಾದಿಯ ಹಬ್ಬದ ದಿನವೇ ಕಿಡಿಗೇಡಿಗಳ ಕೃತ್ಯ ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ಜಿಲ್ಲೆಯ ಕಳಸ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿರವ ಕಾಲಭೈರವೇಶ್ವರ ದೇಗುಲದ ಎದುರು ಘಟನೆ ನಡೆದಿದೆ.

ಕಾಫಿನಾಡು ಚಿಕ್ಕಮಗಳೂರಿನ ದಕ್ಷಿಣ ಕಾಶಿ ಎಂದು ಕರೆಸಿಕೊಳ್ಳುವ ಕಳಸೇಶ್ವರ ದೇವರಿಗೆ ಹಲವು ದೇವಸ್ಥಾನಗಳು ಸೇರುತ್ತೆ. ಅದರಲ್ಲಿಯೂ ಗಿರಿಜಾ ಕಲ್ಯಾಣದ ಮೆರವಣಿಗೆ ನಡೆಯುವ ಮಾರ್ಗದಲ್ಲಿರುವ ಕಳಸ ಪಟ್ಟಣದ ಕಂಚಿಕೆರೆ ಗ್ರಾಮದ ಕಾಲಭೈರವನ ದೇವಸ್ಥಾನದ ಮುಂಭಾಗದಲ್ಲಿ ವಾಮಾಚಾರ ಮಾಡಲಾಗಿದೆ ಅದು ಹಿಂದೂಗಳ ಹೊಸ ವರ್ಷದ ಸಂಭ್ರಮದ ಯುಗಾದಿ ಹಬ್ಬದ ದಿನವೇ.

ಇನ್ನು ಕಳಸ ಸಮೀಪದ ಕಂಚಿಕೆರೆ ಕಾಲಭೈರವ ದೇವಸ್ಥಾನಕ್ಕೆ ಸಹಸ್ರ ಸಹಸ್ರ ಭಕ್ತರಿದ್ದಾರೆ. ಹೊರ ಜಿಲ್ಲೆ ಸೇರಿದಂತೆ ಸ್ಥಳೀಯರು ಕಾಲಭೈರವನನ್ನ ನಂಬಿ ಪೂಜಿಸುತ್ತಾರೆ. ದೇವಸ್ಥಾನದ ಮುಂದೆಯೇ ವಾಮಾಚಾರ ಮಾಡಿರುವುದರಿಂದ ಆಕ್ರೋಶ ವ್ಯಕ್ತವಾಗಿದೆ. ಕಳೆದ ವರ್ಷವೂ ವಾಮಾಚಾರ ನಡೆದ ಕಾಲಭೈರವ ದೇವಾಲಯದಲ್ಲಿ ಕಳ್ಳತನ ನಡೆದಿತ್ತು.

ಇಂದು ವಾಮಾಚಾರ ಮಾಡಲಾಗಿದೆ. ಕಳಸ ಭಾಗದಲ್ಲಿ ಹರಿಯುವ ಭದ್ರಾ ನದಿಯ ತಟದಲ್ಲಿ ವಾಮಾಚಾರದ ಪ್ರಕರಣ ನಡೆಯುತ್ತಲೇ ಇತ್ತು. ಈಗ ದೇವಸ್ಥಾನದ ಮುಂದೆಯೇ ಮಾಡಿದ್ದಾರೆ. ಅದು ಬಹುತೇಕ ತಡರಾತ್ರಿ ಎರಡರಿಂದ ಮೂರುಗಂಟೆಯೊಳಗೆ ನಡೆದಿರಬಹುದು ಎನ್ನಲಾಗುತ್ತಿದೆ. ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದೇವಾಲಯದ ಮುಂಭಾಗದಲ್ಲಿ ವಾಮಾಚಾರ ಮಾಡಿರುವ ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇಲ್ಲಿಯವರಾ? ಅಥವಾ ಹೊರ ಭಾಗದವರಾ? ಅನ್ನೋ ಅನುಮಾನ ಸ್ಥಳೀಯರು ಮುಂದಿಟ್ಟಿದ್ದಾರೆ. ಪವಿತ್ರ ಭದ್ರಾ ನದಿ ಹಾಗೂ ಸುತ್ತಮುತ್ತ ಇರುವ ದೇವಸ್ಥಾನಗಳಲ್ಲಿ ಇತ್ತೀಚಿನ ದಿನದಲ್ಲಿ ವಾಮಾಚಾರ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಕಿಡಿಗೇಡಿಗಳ ಹೆಡೆಮುರಿ ಕಟ್ಟುವಂತೆ ಕಳಸದ ಜನರು ಒತ್ತಾಯಿಸಿದ್ದಾರೆ.

Witchcraft to Kalabhairavan temple in Kanchikere village

Share

Leave a comment

Leave a Reply

Your email address will not be published. Required fields are marked *

Don't Miss

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೌರಿ ಹಬ್ಬದ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ ಬಂದಿದ್ದ ರಾಗಿ ಬೆಳೆಯ ಮೇಲೆ ಟ್ರಾಕ್ಟರ್ ಹರಿಸಿ ನಾಶಪಡಿಸಿರುವ ಆಘಾತಕಾರಿ ಘಟನೆಯೊಂದು ತರೀಕೆರೆ ತಾಲೂಕಿನ...

Related Articles

ಮೂಡಿಗೆರೆಯಲ್ಲಿ ಮುಸುಕುಧಾರಿ ಖದೀಮರಿಂದ ಸರಗಳ್ಳತನ

ಮೂಡಿಗೆರೆ: ಮುಂಜಾನೆಯ ತಂಪಾದ ವಾತಾವರಣದಲ್ಲಿ ರಸ್ತೆ ಬದಿಯಲ್ಲಿ ನಿರಾತಂಕವಾಗಿ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು...

ಅರಸನ ನಾಲೆ ಪುನಶ್ಚೇತನ‌ಕ್ಕೆ ಆಗ್ರಹಿಸಿ ಇಂದು ರೈತರ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ಹಾಗೂ...

ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ

ಚಿಕ್ಕಮಗಳೂರು: ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ : ಡಾ.ಮಾತೆ ಗಂಗಾದೇವಿನಾಡಿನ ವೀರಶೈವ-ಲಿಂಗಾಯಿತ ಜನಾಂಗವನ್ನು ಬಸವದಳ ಸೂತ್ರದಡಿ...

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ...