ಚಿಕ್ಕಮಗಳೂರು : ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿಯವರ ಮೇಲೆ ದಾಖಲಿಸಿರುವ ಎಫ್ ಐ ಆರ್ ಹಿಂಪಡೆಯಬೇಕೆಂದು ಹಿಂದೂ ಹಿತರಕ್ಷಣಾ ವೇದಿಕೆ ಒತ್ತಾಯಿಸಿದೆ.
ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹಿಂದೂ ಹಿತರಕ್ಷಣಾ ವೇದಿಕೆಯ ಮುಖಂಡ ಪ್ರವೀಣ್ ಖಾಂಡ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಧರ್ಮ ಗುರುಗಳು ಸಂವಿಧಾನ ವಿರೋಧಿ ಹೇಳಿಕೆಗಳು ನೀಡಿದಾಗ ಅವರ ಮೇಲೆ ಪ್ರಕರಣ ದಾಖಲಿಸುವುದಿಲ್ಲ. ಆದರೆ ಬಡ ರೈತರ ಪರ ದಲಿತರ ಆಸ್ತಿಯನ್ನು ವಕ್ಫ್ ಬೋರ್ಡ್ ಕಾನೂನು ಬಾಹಿರವಾಗಿ ದಾಖಲೆ ನೋಟಿಸ್ ನೀಡಿದರು ರಾಜ್ಯ ಸರ್ಕಾರ ಚಕಾರ ಎತ್ತುವುದಿಲ್ಲ, ಆದರೆ ಚಂದ್ರಶೇಖರನಾಥ ಸ್ವಾಮೀಜಿಯವರಂತ ಸಂತರನ್ನು ಗುರಿಯಾಗಿಸಿ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಕೂಡಲೇ ಪ್ರಕರಣವನ್ನು ಹಿಂಪಡೆಯಬೇಕು, ತಪ್ಪಿದಲ್ಲಿ ರಾಜ್ಯ ವ್ಯಾಪಿ ಹಿಂದೂ ಪರ ಸಂಘಟನೆಗಳು ಒಗ್ಗೂಡಿ ಬೃಹತ್ ಹೋರಾಟ ರೂಪಿಸಲಾಗುವುದು, ಅಲ್ಲದೆ ಇಂದು ಮತ್ತು ನಾಳೆ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ವಿವಿಧ ಸಂಘಟನೆಗಳ ಹಿಂದೂ ಪರ ಮುಖಂಡರು ಉಪಸ್ಥಿತರಿದ್ದರು.
Leave a comment