Home namma chikmagalur chikamagalur ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ
chikamagalurHomeLatest Newsnamma chikmagalur

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

Share
Share

ಚಿಕ್ಕಮಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಅಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ ೨,೫೯,೯೫,೯೨೦ ರೂಪಾಯಿಗಳನ್ನು ಕಳೆದುಕೊಂಡು ಸೈಬರ್ ವಂಚಕರ ಬಲೆಗೆ ಬಿದ್ದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಮೊಬೈಲ್ ಗೆ ಬಂದ ವಾಟ್ಸ್ ಆಪ್ ಕರೆಯೊಂದರಲ್ಲಿ ಆನ್‌ಲೈನ್ ಟ್ರೇಡಿಂಗ್ ಬಗ್ಗೆ ಆಸಕ್ತಿ ಇದೆಯೇ ಎಂದು ವಿಚಾರಿಸಲಾಗಿತ್ತು. ಈ ವೇಳೆ ವಂಚಕರು ಕೇವಲ ಸಾವಿರ ಜನರಿಗೆ ಮಾತ್ರ ವಿಶೇಷ ಆಫರ್ ಇದೆ ಎಂದು ನಂಬಿಸಿ ಇವರಿಂದ ಒಂದು ವರ್ಚುವಲ್ ಖಾತೆಯನ್ನು ತೆರೆಯಿಸಿದ್ದರು. ಟ್ರೇಡಿಂಗ್ ಪ್ರಾರಂಭಿಸಿದ ಆರಂಭದಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದು ಎಂದು ನಂಬಿಸಿದ ಕಿರಾತಕರು, ಹಂತಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು ೨.೫೯ ಕೋಟಿಗೂ ಅಧಿಕ ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ತಾವು ಹೂಡಿಕೆ ಮಾಡಿದ ಅಸಲು ಹಣ ಮತ್ತು ಬಂದಿರುವ ಲಾಭಾಂಶವನ್ನು ಹಿಂಪಡೆಯಲು ಮುಂದಾದಾಗ, ಪ್ರತಿ ಬಾರಿಯೂ ಒಟ್ಟು ಮೊತ್ತದ ೨೦% ಹಣವನ್ನು ಡೆಪಾಸಿಟ್ ಇಡಬೇಕು ಎಂಬ ಹೊಸ ಷರತ್ತನ್ನು ವಂಚಕರು ವಿಧಿಸಿದ್ದರು. ಅದರಂತೆ ಹಣ ಪಾವತಿಸಿದರೂ ಸಹ ಒಂದು ರೂಪಾಯಿಯನ್ನೂ ಡ್ರಾ ಮಾಡಲು ಸಾಧ್ಯವಾಗದಿದ್ದಾಗ ತಾವು ಮೋಸ ಹೋಗಿರುವುದು ಪ್ರಜ್ಞಾ ಅವರಿಗೆ ಮನವರಿಕೆಯಾಗಿದೆ.

ತಾವು ಕಷ್ಟಪಟ್ಟು ಸಂಪಾದಿಸಿದ ಕೋಟ್ಯಂತರ ರೂಪಾಯಿ ಹಣವನ್ನು ವಂಚಿಸಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Woman cheated on the pretext of investing in the stock market

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಉಮೇಶ್ ಜಮೀನು ಕೆಲಸಕ್ಕೆ ತೆರಳಿದ್ದ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನಯ್ ಬಿ.ಕೆ....

Related Articles

ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ...

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ...

ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ನಾಪತ್ತೆ

ಕಳಸ : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾತೀರ್ಥದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಭದ್ರಾ...

ಅಕ್ರಮವಾಗಿ ಸಾಕುತ್ತಿದ್ದ ಕಾಡುಗಿಳಿಗಳ ವಶ

ಚಿಕ್ಕಮಗಳೂರು: ಮೂರು ಕಾಡು ಗಿಳಿಗಳನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ಸಾಕುತ್ತಿದ್ದ ಆರೋಪದಲ್ಲಿ ನಗರದ ನೆಹರುನಗರದ ನಿವಾಸಿ ಬಾಬು...