Home Crime News ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸಿಗದೆ ಮಹಿಳೆ ಸಾವು
Crime NewsHomeLatest Newsnamma chikmagalurTarikere

ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸಿಗದೆ ಮಹಿಳೆ ಸಾವು

Share
Share

ತರೀಕೆರೆ: ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಹಾಗೂ ಸೂಕ್ತ ಚಿಕಿತ್ಸೆ ಸಿಗದೆ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳೇ ಲಕ್ಕವಳ್ಳಿಯಲ್ಲಿ ನಡೆದಿದೆ.

ಸುಶೀಲಾ (41) ಮೃತ ದುರ್ದೈವಿ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಸಾವಿಗೆ ನೇರ ಕಾರಣವೆಂದು ಆರೋಪಿಸಿ ಮೃತ ಮಹಿಳೆಯ ಕುಟುಂಬಸ್ಥರು ಹಾಗೂ ಸ್ಥಳೀಯ ನಿವಾಸಿಗಳು ಲಕ್ಕವಳ್ಳಿ ಸರ್ಕಾರಿ ಆಸ್ಪತ್ರೆಯ ಮುಂದೆ ಜಮಾಯಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ.

ಸುಶೀಲಾ ಅವರಿಗೆ ನಿನ್ನೆ ಮಧ್ಯಾಹ್ನವೇ ತೀವ್ರ ಹೃದಯಾಘಾತ ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲು ಕುಟುಂಬಸ್ಥರು ಆಂಬುಲೆನ್ಸ್‌ಗಾಗಿ ಹರಸಾಹಸ ಪಟ್ಟರೂ, ಸಂಜೆಯವರೆಗೂ ವಾಹನ ಸಿಗದೆ ತೀವ್ರ ಪರದಾಟ ನಡೆಸಬೇಕಾಯಿತು.

ಆಸ್ಪತ್ರೆಯ ಆವರಣದಲ್ಲೇ ಆಂಬುಲೆನ್ಸ್ ಇದ್ದರೂ ಅದನ್ನು ಸಕಾಲಕ್ಕೆ ಕಳುಹಿಸದೆ ಅಧಿಕಾರಿಗಳು ಮತ್ತು ಸಿಬ್ಬಂದಿ ತೋರಿದ ಬೇಜವಾಬ್ದಾರಿತನವೇ ಪ್ರಾಣಹಾನಿಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಗಂಭೀರ ಆರೋಪ ಮಾಡಿದ್ದಾರೆ.

ಬಳಿಕ ತಡವಾಗಿ ಬಂದ 108 ಆಂಬುಲೆನ್ಸ್ ಮೂಲಕ ಸುಶೀಲಾ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದು, ಪರಿಶೀಲಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಜೀವ ರಕ್ಷಿಸಬೇಕಾದ ಸರ್ಕಾರಿ ಆಸ್ಪತ್ರೆಯ ಈ ಘೋರ ಅವ್ಯವಸ್ಥೆಯ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Woman dies after ambulance not arriving on time

Share

Leave a comment

Leave a Reply

Your email address will not be published. Required fields are marked *

Don't Miss

ಟಿಪ್ಪು ಸುಲ್ತಾನ್ ಕಟೌಟ್ ಗೆ ದೇಶದ್ರೋಹಿ ಹಾಡು-7 ಜನ ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಕಾಫಿನಾಡಲ್ಲಿ ಪಾಕ್ ಪ್ರೇಮಿಗಳು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಈದ್ ಮಿಲಾದ್ ಆಚರಣೆಗೆ ಟಿಪ್ಪು ಸುಲ್ತಾನ್ ಕಟೌಟ್ ಹಾಕಿರುವ ಯುವಕರು, ಕಟೌಟ್ ಬ್ಯಾಕ್ ಗ್ರೌಂಡ್ ಗೆ ದೇಶದ್ರೋಹಿ ಸಾಂಗ್ ಹಾಕಿ ವಿವಾದ...

ಕಾಫಿಕಿಂಗ್ ಸಿದ್ಧಾರ್ಥಹೆಗ್ಗಡೆ ಹೆಸರು ಶಾಶ್ವತವಾಗಿ ಉಳಿಸುವ ಕಾರ್ಯ ಮಾಡಬೇಕಿದೆ

ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ ಬೆಳೆಗಾರರ ಮತ್ತು ಕಾರ್ಮಿಕರ ಹಿತಕ್ಕಾಗಿ ಸವಿಸಿದ್ದಾರೆಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು. ಅವರು ಭಾನುವಾರ...

Related Articles

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...

ಚಿಕ್ಕಮಗಳೂರಿನಲ್ಲಿ 30 ಕೆ.ಜಿಗೂ ಅಧಿಕ ನಕಲಿ ನಾಟಿ ತುಪ್ಪ ಪತ್ತೆ

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು...

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ...