Home namma chikmagalur chikamagalur ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು
chikamagalurHomeLatest Newsnamma chikmagalur

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

Share
Share

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಸಕ್ಕರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಓಂಕಾರಮ್ಮ ಎಂದು ಗುರುತಿಸಲಾಗಿದೆ. ಅವರ ಪತಿ ಬೀರಪ್ಪ ಡಿ.ಕೆ. ಸ್ಕೂಟರ್ ಚಲಾಯಿಸುತ್ತಿದ್ದರು.

ಬೆಂಗಳೂರು ನಿವಾಸಿಗಳಾಗಿರುವ ಬೀರಪ್ಪ, ಓಂಕಾರಮ್ಮ ಹಾಗೂ ಅವರ ಪುತ್ರ ಜ್ಞಾನಮೂರ್ತಿ ಅವರು ಮನೆದೇವರ ಪೂಜೆಗೆಂದು ದೇವನೂರಿಗೆ ಆಗಮಿಸಿದ್ದರು. ಆಗಸ್ಟ್ 7ರಂದು ನಿಢಘಟ್ಟದ ಪೋಸ್ಟ್ ಆಫೀಸ್ ಕೆಲಸದ ನಿಮಿತ್ತ ದೇವನೂರಿನಿಂದ ಹೋಚಿಹಳ್ಳಿ ಮಾರ್ಗವಾಗಿ ಕೆಎ-51-ಇಎನ್-9836 ನೋಂದಣಿ ಸಂಖ್ಯೆಯ ಟಿವಿಎಸ್ ಸ್ಕೂಟರ್‌ನಲ್ಲಿ ಬೀರಪ್ಪ ಹಾಗೂ ಓಂಕಾರಮ್ಮ ತೆರಳುತ್ತಿದ್ದರು.

ಗಾಂಧಿನಗರ ಮತ್ತು ನಾಗರಾಳ್ ಗೇಟ್ ನಡುವಿನ ದೊಡ್ಡ ಆಲದ ಮರದ ಬಳಿ ಸ್ಕೂಟರ್ ನಿಯಂತ್ರಣ ತಪ್ಪಿ ಮರದ ಬಿಳಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಓಂಕಾರಮ್ಮ ಸ್ಕೂಟರ್ ಸಮೇತ ಡಾಂಬರು ರಸ್ತೆಯಿಂದ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಕೂಟರ್ ಸವಾರ ಬೀರಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತದೇಹವನ್ನು ಕಡೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

ಸ್ಕೂಟರ್ ಅನ್ನು ಬೀರಪ್ಪ ಅವರು ವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಸಿದ್ದರಾಮಯ್ಯ ಡಿ.ಎಸ್. ನೀಡಿದ ದೂರಿನ ಆಧಾರದ ಮೇಲೆ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ

Woman dies on the spot after scooter hits tree stump

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...