Home namma chikmagalur chikamagalur ಬೈಕ್‌ ನಿಂದ ಕೆಳಗೆ ಬಿದ್ದಮಹಿಳೆಗೆ ಗಂಭೀರ ಗಾಯ
chikamagalurHomeLatest Newsnamma chikmagalur

ಬೈಕ್‌ ನಿಂದ ಕೆಳಗೆ ಬಿದ್ದಮಹಿಳೆಗೆ ಗಂಭೀರ ಗಾಯ

Share
Share

ಕಡೂರು: ದೇವಸ್ಥಾನಕ್ಕೆ ಹೋಗಿ ಪೂಜೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಬೈಕಿಗೆ ಹಾವು ಅಡ್ಡ ಬಂದ ಪರಿಣಾಮ ಸವಾರ ದಿಢೀರ್ ಬ್ರೇಕ್ ಹಾಕಿದ್ದರಿಂದ ಹಿಂಬದಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಣಾವಾರ-ಸಖರಾಯಪಟ್ಟಣ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಅರಕೆರೆ ಗ್ರಾಮದ ನಿವಾಸಿ ತಿಲೋತ್ತಮ (39) ಗಾಯಗೊಂಡ ಮಹಿಳೆ. ಈ ಸಂಬಂಧ ಬೈಕ್ ಸವಾರ ಮಧು ಎಂಬುವವರ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಿಲೋತ್ತಮ ಅವರು ಮೇ 23ರಂದು ಬೆಳಗ್ಗೆ ಕಡೂರು ತಾಲೂಕಿನ ಬಳ್ಳೇಕೆರೆ ಗ್ರಾಮದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪೂಜೆ ಮಾಡಿಸಲು ಗ್ರಾಮಸ್ಥರ ಕಾರಿನಲ್ಲಿ ತೆರಳಿದ್ದರು. ಪೂಜೆ ಮುಗಿದ ಬಳಿಕ ಸಂಜೆ 6 ಗಂಟೆ ಸಮಯದಲ್ಲಿ ಅದೇ ಗ್ರಾಮದ ಮಧು ಎಂಬುವವರು ಬಳ್ಳೇಕೆರೆ ದೇವಸ್ಥಾನದಿಂದ ತಮ್ಮ ಬೈಕ್ ನಲ್ಲಿ (KA-13 EG-1613) ಅರಕೆರೆಗೆ ವಾಪಸ್ ಹೊರಟಿದ್ದರು.

ಈ ವೇಳೆ ತಿಲೋತ್ತಮ ಅವರು ಮಧು ಅವರ ಬೈಕ್‌ ಹಿಂಬದಿ ಕುಳಿತು ತೆರಳುತ್ತಿರುವಾಗ ಮಾಚಗೊಂಡನಹಳ್ಳಿ ಗೇಟ್ ಬಳಿ ಹಾವೊಂದು ದಿಢೀರನೆ ರಸ್ತೆಗೆ ಅಡ್ಡ ಬಂದಿದೆ ಹೀಗಾಗಿ ಬೈಕ್ ಚಾಲಕ ಮಧು ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದರಿಂದ ನಿಯಂತ್ರಣ ಸಿಗದೆ ತಕ್ಷಣವೇ ಬ್ರೇಕ್ ಹಾಕಿದ್ದಾರೆ.

ಹೀಗಾಗಿ ಹಿಂಬದಿ ಕುಳಿತಿದ್ದ ತಿಲೋತ್ತಮ ಅವರು ರಸ್ತೆಗೆ ಬಿದ್ದ ಪರಿಣಾಮ ಅವರ ಎರಡು ಕಾಲುಗಳು ಹಾಗೂ ಬಲಭುಜಕ್ಕೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಹಾಗೂ ದಾರಿಹೋಕರು ಗಾಯಾಳುವನ್ನು ಬಾಣಾವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸದ್ಯ ತಿಲೋತ್ತಮ ಅವರು ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ಭೇಟಿ ನೀಡಿದ ಸಖರಾಯಪಟ್ಟಣ ಠಾಣೆಯ ಎಎಸ್‌ಐ ಕುಮಾರ್ ಅವರು ಗಾಯಾಳು ತಿಲೋತ್ತಮ ಅವರಿಂದ ಹೇಳಿಕೆ ಪಡೆದು ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ ಹೀಗಾಗಿ ಸವಾರ ಮಧು ವಿರುದ್ಧ ಸಖರಾಯಪಟ್ಟಣ ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Woman seriously injured after falling off bike

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...