ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಕಾಡಾನೆ ದಾಳಿಗೆ ಯುವತಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ.
ಅನಿತಾ (25) ಸಾವನ್ನಪ್ಪಿದ ದುರ್ದೈವಿ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮೂಲದ ಅನಿತಾ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ವಾಸವಾಗಿದ್ದರು.
ನಿನ್ನೆ ರಾತ್ರಿ ಮನೆಗೆ ತೆರಳುವಾಗ ಅನಿತಾ ಅವರ ಮೇಲೆ ಆನೆ ದಾಳಿ ನಡೆಸಿದೆ. ಈ ವೇಳೆ ತೀವ್ರ ಗಾಯಗೊಂಡ ಆಕೆಯನ್ನು ತಕ್ಷಣ ಬಾಳೆಹೊನ್ನೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಶಿವಮೊಗ್ಗಕ್ಕೆ ರವಾನೆ ಮಾಡುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಘಟನೆಯ ಹಿನ್ನೆಲೆ ಜನ ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಮಲೆನಾಡು ತಾಲೂಕುಗಳಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು ಕೆಲ ತಿಂಗಳುಗಳಿಂದ ಮನುಷ್ಯರ ಮೇಲೆ ದಾಳಿ ಕೊಂಚ ಕಡಿಮೆಯಾಗಿತ್ತು ಆದರೆ ಇದೀಗ ಮತ್ತೆ ಆನೆಗಳು ಮನುಷ್ಯರ ಮೇಲೆ ದಾಳಿ ಪ್ರಾರಂಭಿಸಿವೆ.
ಮೂಡಿಗೆರೆ ತಾಲೂಕಿನಲ್ಲಿ ಹಿಂಡು ಹಿಂಡಾಗಿ ಆನೆಗಳು ಲಗ್ಗೆ ಇಟ್ಟಿದ್ದು ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಘಟನೆಯ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Woman worker dies in wild elephant attack near Bannur
Leave a comment