Home Crime News ಬನ್ನೂರು ಬಳಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು
Crime NewschikamagalurHomeLatest Newsnamma chikmagalur

ಬನ್ನೂರು ಬಳಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

Share
Share

ಚಿಕ್ಕಮಗಳೂರು:  ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಕಾಡಾನೆ ದಾಳಿಗೆ ಯುವತಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಬಳಿ ನಡೆದಿದೆ.

ಅನಿತಾ (25) ಸಾವನ್ನಪ್ಪಿದ ದುರ್ದೈವಿ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮೂಲದ ಅನಿತಾ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ವಾಸವಾಗಿದ್ದರು.

ನಿನ್ನೆ ರಾತ್ರಿ ಮನೆಗೆ ತೆರಳುವಾಗ ಅನಿತಾ ಅವರ ಮೇಲೆ ಆನೆ ದಾಳಿ ನಡೆಸಿದೆ. ಈ ವೇಳೆ ತೀವ್ರ ಗಾಯಗೊಂಡ ಆಕೆಯನ್ನು ತಕ್ಷಣ ಬಾಳೆಹೊನ್ನೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಶಿವಮೊಗ್ಗಕ್ಕೆ ರವಾನೆ ಮಾಡುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಘಟನೆಯ ಹಿನ್ನೆಲೆ ಜನ ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಮಲೆನಾಡು ತಾಲೂಕುಗಳಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು ಕೆಲ ತಿಂಗಳುಗಳಿಂದ ಮನುಷ್ಯರ ಮೇಲೆ ದಾಳಿ ಕೊಂಚ ಕಡಿಮೆಯಾಗಿತ್ತು ಆದರೆ ಇದೀಗ ಮತ್ತೆ ಆನೆಗಳು ಮನುಷ್ಯರ ಮೇಲೆ ದಾಳಿ ಪ್ರಾರಂಭಿಸಿವೆ.

ಮೂಡಿಗೆರೆ ತಾಲೂಕಿನಲ್ಲಿ ಹಿಂಡು ಹಿಂಡಾಗಿ ಆನೆಗಳು ಲಗ್ಗೆ ಇಟ್ಟಿದ್ದು ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಘಟನೆಯ ಸಂಬಂಧ ಬಾಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Woman worker dies in wild elephant attack near Bannur

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...