Home namma chikmagalur chikamagalur ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕಳವು
chikamagalurCrime NewsHomeLatest Newsnamma chikmagalur

ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕಳವು

Share
Share

ಮೂಡಿಗೆರೆ: ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ, ಕುತ್ತಿಗೆಗೆ ಕೈ ಹಾಕಿ 24 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮೂಡಿಗೆರೆ ಪಟ್ಟಣದ ಕುರ್ಕಮಕ್ಕಿ ವಾರ್ಡ್‌ನಲ್ಲಿ ಸೆ.5ರಂದು ನಡೆದಿದೆ.

ಕುರ್ಕಮಕ್ಕಿಯ ದಾಕ್ಷಾಯಿಣಿ (58) ಎಂಬುವರು ದೂರು ನೀಡಿದ್ದು, ಉತ್ತರ ಪ್ರದೇಶದಿಂದ ಕೆಲಸಕ್ಕಾಗಿ ಬಂದಿದ್ದ ಸಂಜೀತ್ ಎಂಬಾತನಿಗೆ ನಾಲ್ಕು ತಿಂಗಳ ಹಿಂದೆ ತಮ್ಮ ಮನೆಯನ್ನು ಬಾಡಿಗೆಗೆ ನೀಡಿದ್ದರು. ಮಂಜುನಾಥ ಗಂಗನಮಕ್ಕಿ ಅವರ ಮೂಲಕ ಮನೆ ಬಾಡಿಗೆಗೆ ನೀಡಲಾಗಿದ್ದು, ತಿಂಗಳಿಗೆ ₹2,200 ಬಾಡಿಗೆ ನಿಗದಿಪಡಿಸಲಾಗಿತ್ತು.

ಸೆ.5ರಂದು ಬೆಳಿಗ್ಗೆ ಸುಮಾರು 11.15ಕ್ಕೆ ಸಂಜೀತ್ ದಾಕ್ಷಾಯಿಣಿ ಅವರ ಮನೆಗೆ ಬಂದು, ತಾನು ಮನೆ ಖಾಲಿ ಮಾಡಿಕೊಂಡು ಊರಿಗೆ ತೆರಳುತ್ತಿರುವುದಾಗಿ ಹಿಂದಿ ಭಾಷೆಯಲ್ಲಿ ತಿಳಿಸಿದ್ದಾನೆ. ಬಳಿಕ ಬಾಡಿಗೆಗೆ ನೀಡಿದ್ದ ಮನೆಗೆ ಕರೆದುಕೊಂಡು ಹೋಗಿ, ಪ್ಲೇಟ್‌ನಲ್ಲಿ ಖಾರದ ಪುಡಿ ತೋರಿಸಿ ಅದು ಚೆನ್ನಾಗಿಲ್ಲ ಎಂದು ಹೇಳಿದ್ದಾನೆ. ನಂತರ ಅಲ್ಲಿದ್ದ ಅಕ್ಕಿಯನ್ನು ತೋರಿಸಿ ಮಾತನಾಡುತ್ತಿದ್ದ ವೇಳೆ, ಬೆಳಿಗ್ಗೆ 11.35ರ ಸುಮಾರಿಗೆ ದಾಕ್ಷಾಯಿಣಿ ಅವರ ಮುಖಕ್ಕೆ ಖಾರದ ಪುಡಿ ಎರಚಿದ್ದಾನೆ ಎನ್ನಲಾಗಿದೆ.

ಖಾರದ ಪುಡಿ ಕಣ್ಣಿಗೆ ಬಿದ್ದ ಹಿನ್ನೆಲೆಯಲ್ಲಿ ದಾಕ್ಷಾಯಿಣಿ ಕೂಗಿಕೊಂಡು ಆರೋಪಿಯನ್ನು ತಳ್ಳಿ ಹೊರಗೆ ಬರಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿ ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾನೆ. ದಾಕ್ಷಾಯಿಣಿ ಪಕ್ಕದ ಬಾಡಿಗೆ ಮನೆಯತ್ತ ತೆರಳುತ್ತಿದ್ದಾಗ, ಅವರ ಹಿಂದೆ ಬಂದ ಆರೋಪಿ ಮತ್ತೆ ಕುತ್ತಿಗೆಗೆ ಕೈ ಹಾಕಿ 24 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಬಳಿಕ ದಾಕ್ಷಾಯಿಣಿ ಕಿರುಚುತ್ತಾ ಆರೋಪಿಯ ಹಿಂದೆ ಓಡಿದರೂ ಆತ ಸಿಗಲಿಲ್ಲ. ವಿಷಯವನ್ನು ಮಗ ಮಧುಸೂಧನ್‌ಗೆ ತಿಳಿಸಿದ್ದು, ಅವರು ಆರೋಪಿಯನ್ನು ಬೆನ್ನಟ್ಟಿದಾಗ ಗಂಗನಮಕ್ಕಿ ಲೇಔಟ್‌ ಸಮೀಪ ತೆರಳಿರುವುದು ಕಂಡುಬಂದಿದೆ ಎನ್ನಲಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಹಾಗೂ ಕುಟುಂಬಸ್ಥರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಕಳವಾಗಿರುವ 24 ಗ್ರಾಂ ಬಂಗಾರದ ಮಾಂಗಲ್ಯ ಸರದ ಮೌಲ್ಯ ಸುಮಾರು ₹2.40 ಲಕ್ಷ ಎಂದು ಅಂದಾಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ದಾಕ್ಷಾಯಿಣಿ ನೀಡಿದ ದೂರಿನ ಮೇರೆಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಠಾಣಾ ಮೊ.ನಂ.147/2026, ಕಲಂ 309(4) ಬಿಎನ್‌ಎಸ್ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Woman’s necklace stolen after being sprinkled with chili powder in her face

Share

Leave a comment

Leave a Reply

Your email address will not be published. Required fields are marked *

Don't Miss

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ನಗರದಲ್ಲಿ ಸೋಮವಾರ ಟಿಪ್ಪು...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಯನ್ನು ಎನ್.ಆ‌ರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ...

Related Articles

ಜನರ ಗಮನ ಸೆಳೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ

ಚಿಕ್ಕಮಗಳೂರು: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ...

ತುಂಗಾನದಿಯಲ್ಲಿ ಕಾಲು ಜಾರಿ ಬಿದ್ದು ಪ್ರಾಣ ಯವಕನ ಸಾವು

ಶೃಂಗೇರಿ : ನದಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರಹಿಡಿಯಲು ಹೋದ ಯುವಕನೊಬ್ಬ ಕಾಲು ಜಾರಿ ನದಿಗೆ ಬಿದ್ದು...

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ...