Home namma chikmagalur chikamagalur ಕಲ್ಯಾಣನಗರ 5ನೇ ಕ್ರಾಸ್‌ನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು
chikamagalurHomeLatest Newsnamma chikmagalur

ಕಲ್ಯಾಣನಗರ 5ನೇ ಕ್ರಾಸ್‌ನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು

Share
Share

ಚಿಕ್ಕಮಗಳೂರು: ಭಜನೆ ಮುಗಿಸಿಕೊಂಡು ಸ್ನೇಹಿತೆಯೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಗೃಹಿಣಿಯೊಬ್ಬರ ಕುತ್ತಿಗೆಯಿಂದ ಬೈಕ್‌ನಲ್ಲಿ ಬಂದ ಇಬ್ಬರು ಹೆಲ್ಮೆಟ್ ಧರಿಸಿದ ವ್ಯಕ್ತಿಗಳು ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಗರದ ಕಲ್ಯಾಣನಗರ 5ನೇ ಕ್ರಾಸ್‌ನಲ್ಲಿ ಗುರುವಾರ ನಡೆದಿದೆ.

ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರಕಾರ, ಗೃಹಿಣಿಯೊಬ್ಬರು ನರಿಗುಡ್ಡನಹಳ್ಳಿ ಕ್ರಾಸ್‌ನಲ್ಲಿರುವ ದಾಸ ಸಾಹಿತ್ಯ ಭಜನಾ ಮಂಡಳಿಗೆ ಭಜನೆಗೆ ತೆರಳಿದ್ದರು. ಭಜನೆ ಮುಗಿಸಿಕೊಂಡು ತಮ್ಮ ಭಜನಾ ಮಂಡಳಿಯ ಸ್ನೇಹಿತೆ ಶಾರಾದ ಅವರೊಂದಿಗೆ ಕಲ್ಯಾಣನಗರದಲ್ಲಿರುವ ಮನೆಗೆ ನಡೆದುಕೊಂಡು ಬರುತ್ತಿದ್ದರು.

ಮಧ್ಯಾಹ್ನ ಸುಮಾರು 1.30ರ ವೇಳೆಗೆ ಕಲ್ಯಾಣನಗರದ 5ನೇ ಕ್ರಾಸ್‌ನಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪ್ರಾವಿಜನ್ ಸ್ಟೋರ್ ಮುಂಭಾಗ ಇಬ್ಬರೂ ಮಾತನಾಡುತ್ತಾ ನಿಂತಿದ್ದಾಗ, ಹೆಲ್ಮೆಟ್ ಧರಿಸಿದ್ದ ಇಬ್ಬರು ಬೈಕ್‌ನಲ್ಲಿ ಅಲ್ಲಿಗೆ ಬಂದಿದ್ದಾರೆ. ಬೈಕ್‌ನ ಹಿಂಬದಿ ಕುಳಿತಿದ್ದ ವ್ಯಕ್ತಿ ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಳ್ಳಲು ಯತ್ನಿಸಿದ್ದಾನೆ.

ಮಹಿಳೆ ಸರವನ್ನು ಕೈಯಿಂದ ಹಿಡಿದುಕೊಂಡಿದ್ದರೂ, ಸರದ ಒಂದು ಎಳೆಯನ್ನು ಕಿತ್ತುಕೊಂಡು ಆರೋಪಿಗಳು ಬೈಕ್‌ನಲ್ಲಿ ವೇಗವಾಗಿ ಪರಾರಿಯಾಗಿದ್ದಾರೆ. ಮಹಿಳೆ ಜೋರಾಗಿ ಕೂಗಿಕೊಂಡರೂ ಆರೋಪಿಗಳನ್ನು ಹಿಡಿಯಲು ಸಾಧ್ಯವಾಗಿಲ್ಲ.

ಕಳವಾಗಿರುವ 57 ಗ್ರಾಂ ತೂಕದ ಎರಡು ಎಳೆಯ ಮಾಂಗಲ್ಯ ಸರದಲ್ಲಿ ಸುಮಾರು 19 ಗ್ರಾಂ ತೂಕದ ಒಂದು ಎಳೆ ನಾಪತ್ತೆಯಾಗಿದ್ದು, ಅದರ ಅಂದಾಜು ಮೌಲ್ಯ ₹2.85 ಲಕ್ಷ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಕುರಿತು ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Woman’s wedding ring stolen at Kalyananagar 5th Cross

Share

Leave a comment

Leave a Reply

Your email address will not be published. Required fields are marked *

Don't Miss

ಲಾರಿ ಡಿಕ್ಕಿಗೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿ ಸಾವು

ಅಜ್ಜಂಪುರ: ಕರ್ತವ್ಯಕ್ಕೆ ತೆರಳುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಶುವೈದ್ಯಕೀಯ ಇಲಾಖೆಯ ಅಟೆಂಡರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಿರಿಯಾಪುರದ ಜ್ಞಾನ ದೀಪ ಶಾಲೆ...

ವಿದ್ಯುತ್ ಸ್ಪರ್ಶ: ಬೇಲಿ ಕಟಾವು ಮಾಡುತ್ತಿದ್ದ ವಾಚ್‌ಮನ್ ಸಾವು

ತರೀಕೆರೆ: ತೋಟದ ಬೇಲಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಾಚ್‌ಮನ್ ಮೃತಪಟ್ಟಿರುವ ಘಟನೆ ತರೀಕೆರೆ ಪಟ್ಟಣದ ಗಾಳಿಹಳ್ಳಿ ಕ್ರಾಸ್‌ನಲ್ಲಿ ಆ.20ರಂದು ನಡೆದಿದೆ. ಮೃತರನ್ನು ಲಿಂಗದಹಳ್ಳಿ ಕಾವಲ್ ಆರ್.ಸಿ. ಕಾಲೋನಿ...

Related Articles

ಕಾಫಿನಾಡಿನಲ್ಲಿ ಎಚ್1ಎನ್1 ಪ್ರಕರಣ ಏರಿಕೆ: 24 ಮಂದಿಗೆ ಸೋಂಕು ದೃಢ

ಚಿಕ್ಕಮಗಳೂರು:  ಕಾಫಿನಾಡಿನಲ್ಲಿ ಕಳೆದೊಂದು ವಾರದಿಂದ ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರ, ನೆಗಡಿ, ಕೆಮ್ಮು ಹಾಗೂ...

ಉಪ ಪೊಲೀಸ್ ಠಾಣೆಗಳ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯ

ಚಿಕ್ಕಮಗಳೂರು:  ಜಿಲ್ಲೆಯ ಕೆಲವು ಕಡೆ ಉಪ ಪೊಲೀಸ್ ಠಾಣೆಗಳನ್ನು ತೆರೆಯುವಂತೆ ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಕೆ.ಭರತ್...

ಆಲ್ದೂರಿನಲ್ಲಿ ಟೈಲ್ಸ್ ಮೇಲೆ ಜಾರಿ ಬಿದ್ದ ರೈತ ಸಾವು

ಆಲ್ದೂರು: ಅಡುಗೆ ಮನೆಯ ನೆಲದ ಮೇಲೆ ಬಿದ್ದಿದ್ದ ನೀರನ್ನು ಗಮನಿಸದೆ ಟೈಲ್ಸ್ ಮೇಲೆ ಕಾಲಿಟ್ಟು ಜಾರಿ...

ಕಡೂರು ತಾಲ್ಲೂಕು ಬರಪೀಡಿತ ಘೋಷಣೆಗೆ ಆಗ್ರಹಿಸಿ ಪಾದಯಾತ್ರೆ ಆರಂಭ

ಕಡೂರು: ತಾಲ್ಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಲು ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ...