Home namma chikmagalur ಮಕ್ಕಳ ಆಸ್ಪತ್ರೆ-ಸಖಿ ಸೆಂಟರ್‌ಗೆ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ
namma chikmagalurchikamagalurHomeLatest News

ಮಕ್ಕಳ ಆಸ್ಪತ್ರೆ-ಸಖಿ ಸೆಂಟರ್‌ಗೆ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ

Share
Share

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಮಾನ್ಯ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ನಗರದ ರುಕ್ಮಿಣಿಯಮ್ಮ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸಖಿ ಒನ್ ಸೆಂಟರ್‌ಗೆ ಇಂದು ಭೇಟಿ ನೀಡಿದ ವ್ಯವಸ್ಥೆಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಆಸ್ಪತ್ರೆ ಒನ್‌ಸ್ಟಾಫ್ ಸಖಿ ಸೆಂಟರ್ ಹೊಂದಿದ್ದು,, ನಮ್ಮ ಆಯೋಗದ ದೃಷ್ಟಿಯಿಂದ ಇಂದು ತುಂಬಾ ಅಗತ್ಯವಾದುದು. ಇಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಕೌಟುಂಬಿಕ ಕಲಹಗಳಿಂದ ತೊಂದರೆಗೊಳಗಾದ ಮಕ್ಕಳು, ಮಹಿಳೆಯರು, ಪೋಕ್ಸೋ, ಬಾಲ್ಯ ವಿವಾಹ ಪ್ರಕರಣಗಳಲ್ಲಿ ನೊಂದ ಎಲ್ಲ ಮಕ್ಕಳು ಪೊಲೀಸ್ ಠಾಣೆಯ ನಂತರ ಈ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಾರೆ ಎಂದರು.

ನೊಂದ ಮಕ್ಕಳು ಮತ್ತು ತಾಯಂದಿರಿಗೆ ಬೇರೆ ಬೇರೆ ಕಡೆಗಳಲ್ಲಿ ಆಶ್ರಯ ನೀಡಿದರೆ ಸಮಸ್ಯೆಯಾಗುತ್ತದೆ ಎನ್ನುವ ಕಾರಣಕ್ಕೆ ಇಲ್ಲಿಯೇ ಏಳು ದಿನಗಳ ಕಾಲ ಆಶ್ರಯ ನೀಡಿ, ವಕೀಲರು, ವೈದ್ಯರು ಹಾಗೂ ಪೊಲೀಸರ ನೆರವು ಕಲ್ಪಿಸಲಾಗುತ್ತಿದೆ, ಇಲ್ಲಿನ ವ್ಯವಸ್ಥೆ ಉತ್ತಮವಾಗಿದ್ದು, ಈ ಕಾರ್ಯಕ್ರಮಕ್ಕೆ ನಿರ್ಭಯಾ ಯೋಜನೆಯ ಅನುದಾನ ಬಳಕೆಯಾಗುತ್ತದೆ ಎಂದು ತಿಳಿಸಿದರು.

ಪ್ರತೀ ಜಿಲ್ಲೆಗೆ ಭೇಟಿ ನೀಡಿದಾಗ ಒನ್‌ಸ್ಟಾಫ್ ಸಖಿ ಸೆಂಟರ್‌ಗೆ ಕಡ್ಡಾಯವಾಗಿ ಭೇಟಿ ನೀಡುತ್ತಿದ್ದು, ಅಲ್ಲಿ ದಾಖಲಾಗಿರುವ ವಿವಿಧ ಬಗೆಯ ಎಲ್ಲಾ ಪ್ರಕರಣಗಳ ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದ ಅವರು, ಈ ಜಿಲ್ಲೆಯಲ್ಲಿ ೨೦೧೯-೨೦ ರಲ್ಲಿ ೩೫ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ೨೦೨೪-೨೫ ರಲ್ಲಿ ಐದು ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷ ಜನವರಿಯಿಂದ ಏಪ್ರಿಲ್‌ವರೆಗೆ ಮೂರು ಪ್ರಕರಣಗಳು ದಾಖಲಾಗಿವೆ.

ಈ ಹಿಂದಿನ ಪ್ರಕರಣಗಳಿಗೆ ಹೋಲಿಸಿದಲ್ಲಿ ಈ ಪ್ರಮಾಣ ಬಹಳಷ್ಟು ಕಡಿಮೆಯಾಗುತ್ತಾ ಬಂದಿದೆ. ಈ ರೀತಿ ಪ್ರಕರಣಗಳ ತೀವ್ರತೆ ಕಡಿಮೆಯಾಗುತ್ತಾ ಬಂದಿರುವುದು ಒಂದು ವಿಶೇಷವೇ ಸರಿ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಆಡಳಿತಕ್ಕೆ ಮತ್ತು ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಅಭಿನಂದಿಸುವುದಾಗಿ ಹೇಳಿದರಲ್ಲದೆ, ಮುಂದಿನ ದಿನಗಳಲ್ಲಿ ಈ ಎಲ್ಲಾ  ಪ್ರಕರಣಗಳು ಶೂನ್ಯಕ್ಕೆ ಇಳಿಯಲಿ ಎಂದು ಆಶಿಸುತ್ತೇನೆ. ಆ ಸಂಬಂಧ ಜಿಲ್ಲಾಧಿಕಾರಿಗಳಿಂದ ಮಾಡಿರುವ ಎಲ್ಲಾ ಕ್ರಮಗಳ ಬಗ್ಗೆ ವರದಿ ತರಿಸಿಕೊಳ್ಳುವುದಾಗಿ ತಿಳಿಸಿದರು.

ಸಖಿ ಸೆಂಟರ್‌ನಲ್ಲಿರುವ ನೀರಿನ ತೊಟ್ಟಿ ಶುಚಿಯಾಗಿಲ್ಲದಿರುವುದು ತಮಗೆ ಬೇಸರ ತರಿಸಿತು. ಅದನ್ನು ಎರಡರಿಂದ ಮೂರು ದಿನಗಳ ಒಳಗೆ ಸ್ವಚ್ಛಗೊಳಿಸಿ ವರದಿ ಸಲ್ಲಿಸಬೇಕು. ಉಳಿದಂತೆ ಆಸ್ಪತ್ರೆಯ ವ್ಯವಸ್ಥೆ ಉತ್ತಮವಾಗಿದೆ. ಬಾಣಂತಿಯರಿಗೆ ಇರುವ ಬಿಸಿ ನೀರಿನ ವ್ಯವಸ್ಥೆ ಸರಿಪಡಿಸಿಕೊಳ್ಳಬೇಕಿದೆ. ಮೂರು-ನಾಲ್ಕು ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿ ವರದಿ ನೀಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಮೋಹನ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸರ್ಜನ್ ಡಾ.ಚಂದ್ರಶೇಖರ್ ಸಾಲಿಮಠ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ.ರೋಹಿತ್, ಅಸೋಸಿಯೇಟ್ ಪ್ರೊಫೆಸರ್‌ಗಳಾದ ಡಾ.ಪಾಂಡುರಂಗಯ್ಯ ಹಾಗೂ ಡಾ.ಕೋನಪ್ಪ ಮತ್ತು ಸಿಬ್ಬಂದಿ ಹಾಜರಿದ್ದರು.

Women’s Commission Chairperson visits Children’s Hospital-Sakhi Center

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...