Home namma chikmagalur ಜಿಲ್ಲೆಯಲ್ಲಿ ₹2,500 ಕೋಟಿ ಮೊತ್ತದ ಕಾಮಗಾರಿ ಪ್ರಗತಿ
namma chikmagalurchikamagalurHomeLatest News

ಜಿಲ್ಲೆಯಲ್ಲಿ ₹2,500 ಕೋಟಿ ಮೊತ್ತದ ಕಾಮಗಾರಿ ಪ್ರಗತಿ

Share
Share

ಚಿಕ್ಕಮಗಳೂರು: ಎರಡೂವರೆ ವರ್ಷಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ₹2,500 ಕೋಟಿ ಮೊತ್ತದ ಕಾಮಗಾರಿ ಪ್ರಗತಿಯಲ್ಲಿದೆ. ಅಭಿವೃದ್ಧಿ ಸಹಿಸದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹತಾಶರಾಗಿ ಮನಸೋಇಚ್ಛೆ ಮಾತನಾಡುತ್ತಿದ್ದಾರೆ’ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಪಿ ಅಂಶುಮಂತ್‌ ಹೇಳಿದರು.

‘ಪಂಚ ಗ್ಯಾರಂಟಿ ಫಲಾನುಭವಿಗಳಿಗೆ ₹2000 ಕೋಟಿ ದೊರೆತಿದೆ. ನಾವು ಜನಪರ ಎಂಬುದನ್ನು ಸಾಬೀತು ಮಾಡಿದ್ದೇವೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಜಿಲ್ಲೆಯ ಪ್ರತಿ ಕ್ಷೇತ್ರಕ್ಕೆ ₹ 50 ಕೋಟಿಯಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ₹250 ಕೋಟಿ ಅನುದಾನ ನೀಡಲಾಗಿದೆ. ಮೆಡಿಕಲ್ ಕಾಲೇಜಿಗೆ ₹430 ಕೋಟಿ, ಮೆಸ್ಕಾಂ ಉಪ ಕೇಂದ್ರ ನಿರ್ಮಿಸಲು ₹150 ಕೋಟಿ, ಕೊಪ್ಪದಲ್ಲಿ ತಾಯಿ–ಮಗು ಆಸ್ಪತ್ರೆಗೆ ₹12 ಕೋಟಿ, ಜಯಪುರ ಆಸ್ಪತ್ರೆಗೆ ₹13 ಕೋಟಿ, ಜಯಪುರ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆರಿಸಿ 30 ಹಾಸಿಗೆಗಳ ಕಾಮಗಾರಿಗೆ ₹12 ಕೋಟಿ, ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಆಸ್ಪತ್ರೆಗೆ ₹9 ಕೋಟಿಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ವಿವರಿಸಿದರು.

ಶೃಂಗೇರಿಯ 100 ಹಾಸಿಗಳ ಆಸ್ಪತ್ರೆಗೆ ₹37 ಕೋಟಿ, ಗ್ರಾಮೀಣ ಪ್ರದೇಶಗಳ ಆರೋಗ್ಯ ದೃಷ್ಟಿಯಿಂದ ₹65 ಲಕ್ಷ ವೆಚ್ಚದ 25 ಕಟ್ಟಡಗಳಿಗೆ ₹1.62 ಕೋಟಿ ಮಂಜೂರಾಗಿದೆ ಎಂದರು.

ಜಿಲ್ಲೆಯಲ್ಲಿ ಎರಡು ಟೆಕ್ಸ್‌ಟೈಲ್ ಪಾರ್ಕ್ ನಿರ್ಮಿಸಲು ಜಾಗ ಗುರುತಿಸ ಲಾಗಿದೆ. ಜಿಲ್ಲೆಯ ಬಯಲು ಭಾಗದ ವಿವಿಧ ಕೆರೆಗಳಿಗೆ ನೀರು ತುಂಬಿಸು ಯೋಜನೆಗೆ ₹800 ಕೋಟಿ ಬಿಡುಗಡೆ ಯಾಗಿದೆ. ತರೀಕೆರೆ, ಅಜ್ಜಂಪುರ ಹಾಗೂ ಹೊಸದುರ್ಗ ಸೇರಿದಂತೆ 400ಕ್ಕೂ ಹೆಚ್ಚು ಹಳ್ಳಿಗಳಿಗೆ ಕುಡಿಯುವ ನೀರನ್ನು ಪೂರೈಸಲು ₹250 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿದೆ ಎಂದರು.

ಲೋಕೋಪಯೋಗಿ ಇಲಾಖೆಯಲ್ಲಿ 89 ವಿವಿಧ ಕಾಮಗಾರಿಗಳಿಗೆ ಒಟ್ಟು ₹150 ಕೋಟಿ, ನಗರದಲ್ಲಿ ನೂತನವಾಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ₹20 ಕೋಟಿ, ತರೀಕೆರೆ ಬಸ್ ನಿಲ್ದಾಣ ನಿರ್ಮಾಣಕ್ಕೆ ₹9.15 ಕೋಟಿ, ಕಡೂರು ಬಸ್ ನಿಲ್ದಾಣ ನಿರ್ಮಾಣಕ್ಕೆ ₹5.98 ಕೋಟಿ ಬಿಡುಗಡೆಯಾಗಿದೆ ಎಂದರು.

ಕಡೂರಿಗೆ ₹16 ಕೋಟಿ ಮೊತ್ತದ ಹಾಗೂ ಅಜ್ಜಂಪುರದಲ್ಲಿ ₹10 ಕೋಟಿ ವೆಚ್ಚದ ಪ್ರಜಾಸೌಧ ಕಟ್ಟಡ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಶೀಘ್ರದಲ್ಲೇ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ₹7 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಜಿಲ್ಲಾ ಆಟದ ಮೈದಾನದ ಅಭಿವೃದ್ಧಿಗೆ ₹1 ಕೋಟಿ ಹಾಗೂ ಕಡೂರು ಕ್ರೀಡಾಂಗಣ ಅಭಿವೃದ್ಧಿಗೆ ಕ್ರಿಯಾ ಯೋಜನೆ ಸಿದ್ಧವಾಗಿದೆ. ಗುಣಮಟ್ಟದ ಶಿಕ್ಷಣ ನೀಡಲು ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಕಾರ್ಯ ಪ್ರವೃತ್ತವಾಗಿದ್ದು, ಜಿಲ್ಲೆಗೆ ಮೊದಲ ಹಂತದಲ್ಲೇ ಒಟ್ಟು 15 ಶಾಲೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಘಟಕ ಅಧ್ಯಕ್ಷ ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಜಿಲ್ಲಾ ಕಾಂಗ್ರೆಸ್ ವಕ್ತಾರ ರೋಬಿನ್ ಮೋಸಿಸ್, ಕಾಂಗ್ರೆಸ್ ನೀತಿ, ಸಂಶೋಧನೆ ಹಾಗೂ ತರಬೇತಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಶಿವಕುಮಾರ್‌ ಹಿರೇಗೌಜ ಉಪಸ್ಥಿತರಿದ್ದರು.

Work worth ₹2500 crore in progress in the district

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....