ಕಳಸ: ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್ ಒಂದರಲ್ಲಿ ಸಂಭವಿಸಿದೆ.
ಮೃತರನ್ನು ತರೀಕೆರೆ ಮೂಲದ 53 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಇವರು ಜೀವನೋಪಾಯಕ್ಕಾಗಿ ಕಳಸಕ್ಕೆ ವಲಸೆ ಬಂದು ಇಲ್ಲಿನ ತೋಟಗಳಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಎಂದಿನಂತೆ ಮರಗಸಿ (ಮರ ಕಟಾವು/ಸವರಿಕೆ) ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಕಳಸ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳಸ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ.
Worker dies after falling from tree
Leave a comment