Home namma chikmagalur chikamagalur ಮರಗಸಿ ಕೆಲಸ ಮಾಡುವಾಗ ಬಿದ್ದು ಕಾರ್ಮಿಕ ಸಾವು
chikamagalurCrime NewsHomeLatest Newsnamma chikmagalur

ಮರಗಸಿ ಕೆಲಸ ಮಾಡುವಾಗ ಬಿದ್ದು ಕಾರ್ಮಿಕ ಸಾವು

Share
Share

ಚಿಕ್ಕಮಗಳೂರು: ಮರಗಸಿ ಕೆಲಸ ಮಾಡುವಾಗ 25 ಅಡಿ ಎತ್ತರದಿಂದ ಬಿದ್ದು ಕಾರ್ಮಿಕನೊಬ್ಬ ಅಂತ್ಯ ಕಂಡಿರುವ ಘಟನೆ ಸಂಭವಿಸಿದೆ.

ಆಲ್ಲೂರಿನ ಭೂತನಕಾಡು ನಿವಾಸಿಯಾದ ವಿಠಲ ಎಂಬುವವರು ಮೃತಪಟ್ಟ ದುರ್ದೈವಿ. ಇವರು ಸೋಮವಾರಪೇಟೆಯ ನವೀನ್ ಟಿ.ಪಿ. ಎಂಬುವವರ ತೋಟದಲ್ಲಿ ಸಿಲ್ವ‌ರ್ ಮರಗಸಿ ಕೆಲಸ ಮಾಡುತ್ತಿದ್ದಾಗ, ಸುಮಾರು 25 ಅಡಿ ಎತ್ತರದಿಂದ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ತಕ್ಷಣ ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ]

ಆದರೆ ಪರಿಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಅಂಬುಲೆನ್ಸ್‌ನಲ್ಲಿ ಕರೆದೊಯ್ಯುವ ಮಾರ್ಗಮಧ್ಯದಲ್ಲಿಯೇ ವಿಠಲ ಅವರು ಕೊನೆಯುಸಿರೆಳೆದಿದ್ದಾರೆ.

ತೋಟದ ಮಾಲೀಕ ನವೀನ್ ಅವರು ಮರ ಹತ್ತುವ ಕಾರ್ಮಿಕನಿಗೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಹಾಗೂ ಸೂಕ್ತ ಸುರಕ್ಷತಾ ಸಲಕರಣೆಗಳನ್ನು ನೀಡದೆ ನಿರ್ಲಕ್ಷ್ಯ ವಹಿಸಿದ್ದೇ ತನ್ನ ಗಂಡನ ಸಾವಿಗೆ ನೇರ ಕಾರಣ ಎಂದು ಮೃತರ ಪತ್ನಿ ಅಶ್ವಿನಿ ದೂರು ನೀಡಿದ್ದು. ಸದ್ಯ ಆಲ್ಲೂರು ಪೊಲೀಸ್‌ ಠಾಣೆಯಲ್ಲಿ ತೋಟದ ಮಾಲೀಕನ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಾಗಿದೆ.

Worker dies after falling while working on carpentry

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...