Home namma chikmagalur chikamagalur ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಬಲಿ
chikamagalurCrime NewsHomeLatest Newsnamma chikmagalur

ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಕಾರ್ಮಿಕ ಬಲಿ

Share
Share

ಚಿಕ್ಕಮಗಳೂರು: ಸಿಲ್ವರ್ ಮರ ಮರಗಸಿ ಮಾಡುವ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರೊಬ್ಬರು ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿಕ್ಕಮಗಳೂರು ತಾಲೂಕಿನ ಕೆರೆಮನೆ ಎಸ್ಟೇಟ್‌ನಲ್ಲಿ ಸಂಭವಿಸಿದೆ.

ಮೃತ ದುರ್ದೈವಿಯನ್ನು ತಮಿಳುನಾಡು ಮೂಲದ ಆರ್ಮುಗಂ (45) ಎಂದು ಗುರುತಿಸಲಾಗಿದೆ. ಇವರು ಬಾಬರ್ ಎಂಬುವರಿಗೆ ಸೇರಿದ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮರ ಕಡಿಯುವ ವೇಳೆ ಹತ್ತಿರದಲ್ಲೇ ಹಾದುಹೋಗಿದ್ದ ವಿದ್ಯುತ್ ಲೈನ್‌ಗೆ ಸ್ಪರ್ಶವಾದ ಪರಿಣಾಮ ಈ ದುರಂತ ನಡೆದಿದೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಮಲ್ಲಂದೂರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಕಾರ್ಮಿಕನ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Worker dies after receiving electric shock while sawing wood

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...