Home namma chikmagalur chikamagalur ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ
chikamagalurCrime NewsHomeLatest Newsnamma chikmagalur

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದಲ್ಲಿ ಕಾಡುಕೋಣ ದಾಳಿಗೆ 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ.

ಮಂಜುನಾಥ್ ಅವರು ತಮ್ಮ ಮನೆಯಿಂದ ತೋಟದ ಕಡೆಗೆ ತೆರಳುತ್ತಿದ್ದ ವೇಳೆ ಹಳ್ಳಿರಸ್ತೆಯಲ್ಲಿ ಏಕಾಏಕಿ ಎದುರಾದ ಕಾಡುಕೋಣ ದಾಳಿ ನಡೆಸಿದೆ. ತೀವ್ರವಾಗಿ ತಿವಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರೂ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಕೇವಲ 15 ದಿನಗಳ ಅಂತರದಲ್ಲಿ ಜಿಲ್ಲೆಯಲ್ಲಿ ಕಾಡುಕೋಣ ದಾಳಿಗೆ ಇದು ಎರಡನೇ ಬಲಿಯಾಗಿದೆ. ಕಳೆದ ಜುಲೈ 7ರಂದು ಕಳಸ ತಾಲೂಕಿನ 52 ವರ್ಷದ ಶೀಲಾ ಅವರು ಕಾಡುಕೋಣ ದಾಳಿಯಲ್ಲಿ ಮೃತಪಟ್ಟಿದ್ದರು. ನಿರಂತರವಾಗಿ ನಡೆಯುತ್ತಿರುವ ಕಾಡುಕೋಣ ದಾಳಿಗಳಿಂದ ಮಲೆನಾಡು ಭಾಗದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಾಡು ಪ್ರಾಣಿಗಳ ಹಾವಳಿಯನ್ನು ನಿಯಂತ್ರಿಸಲು ಶಾಶ್ವತ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮೀಣ ಪ್ರದೇಶದ ಜನರ ಜೀವ ರಕ್ಷಣೆಗಾಗಿ ತುರ್ತು ಕ್ರಮಗಳನ್ನು ಜಾರಿಗೆ ತರಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Worker killed in wild buffalo attack

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...