Home namma chikmagalur ’ವಿಶ್ವ ಸ್ತನ್ಯಪಾನ ಸಪ್ತಾಹ’ – ೨೦೨೫
namma chikmagalurchikamagalurHomeLatest News

’ವಿಶ್ವ ಸ್ತನ್ಯಪಾನ ಸಪ್ತಾಹ’ – ೨೦೨೫

Share
Share

ಚಿಕ್ಕಮಗಳೂರು: ತಾಯಿ ಹಾಲು ಅದರ ಮಹತ್ವ ಮಗುವಿನ ಮೇಲಾಗುವ ಪ್ರಯೋಜನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಆಗಸ್ಟ್ ಮೊದಲ ವಾರದಲ್ಲಿ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ಬಾಬು ತಿಳಿಸಿದರು.

ಅವರು ಇಂದು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾಸ್ಪತ್ರೆ, ಹಾಗೂ ಇನ್ನರ್ ವೀಲ್ಹ್ ಕ್ಲಬ್, ರೋಟರಿ ಕ್ಲಬ್, ರೋಟರಿ ಕಾಫಿ ಲ್ಯಾಂಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ‘ವಿಶ್ವ ಸ್ತನ್ಯಪಾನ ಸಪ್ತಾಹ’ ೨೦೨೫ ನ್ನು ಉದ್ಘಾಟಿಸಿ ಮಾತನಾಡಿದರು.

ಸ್ತನ್ಯಪಾನದಿಂದ ಯಾವ ಯಾವ ರೋಗಗಳನ್ನು ತಡೆಯಬಹುದು ಹಾಗೂ ಅದರ ಅನುಕೂಲತೆಗಳ ಬಗ್ಗೆ ಈ ಸಪ್ತಾಹದ ಮೂಲಕ ತಾಯಂದಿರಲ್ಲಿ ಜಾಗೃತಿ ಮೂಡಿಸಲಾಗುವುದೆಂದು ಹೇಳಿ ಆರೋಗ್ಯ ಇಲಾಖೆಯಿಂದ ಆಯೋಜಿಸುವ ವಿವಿಧ ಆರೋಗ್ಯ ಅರಿವು ಕಾರ್ಯಕ್ರಮಗಳಲ್ಲಿ ಇನ್ನರ್ ವೀಲ್ಹ್ ಕ್ಲಬ್, ರೋಟರಿ ಕ್ಲಬ್, ಲಯನ್ ಸಂಸ್ಥೆ ಸಕ್ರಿಯವಾಗಿ ಪಾಲ್ಗೊಂಡು ಸಲಹೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಗು ಜನಿಸಿದ ೬ ತಿಂಗಳು ತಪ್ಪದೇ ಸ್ತನ್ಯಪಾನ ಕಡ್ಡಾಯವಾಗಿ ನೀಡಬೇಕು ಎಂಬುದನ್ನು ತಾಯಂದಿರಲ್ಲಿ ಸಪ್ತಾಹದ ಮೂಲಕ ಅರಿವು ಮೂಡಿಸುವ ಅಗತ್ಯ ಇದೆ ಎಂದರು.

ಇದನ್ನು ಮನಗಂಡ ವಿಶ್ವ ಆರೋಗ್ಯ ಸಂಸ್ಥೆ ಪ್ರತೀ ವರ್ಷ ಈ ಬಗ್ಗೆ ಅರಿವು ಮೂಡಿಸಲು ಸ್ತನ್ಯಪಾನ ಸಪ್ತಾಹವನ್ನು ಆಚರಿಸುತ್ತಿದೆ. ೨೦೨೫ ರಲ್ಲಿ ‘ತಾಯಿಯ ಹಾಲು ನೀಡುವುದರಲ್ಲಿ ಹೂಡಿಕೆ ಮಾಡಿದರೆ ಮಕ್ಕಳ ಆರೋಗ್ಯಕರ ಭವಿಷ್ಯಕ್ಕಾಗಿ ಹೂಡಿಕೆ ಮಾಡಿದಂತೆ’ ಎಂಬ ಘೋಷವಾಕ್ಯದೊಂದಿಗೆ ಶೇ.೫೦ ರಷ್ಟು ಗುರಿ ತಲುಪಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸ್ತನ್ಯಪಾನದಿಂದ ತಾಯಿ ಮತ್ತು ಮಗು ಇಬ್ಬರಿಗೂ ಪ್ರಯೋಜನವಿದೆ. ಚುಚ್ಚುಮದ್ದು ಕೊಡುವುದರಿಂದ ಹಲವಾರು ರೋಗಗಳನ್ನು ತಡೆಗಟ್ಟಲು ಅವಕಾಶವಿರುವಂತೆ ಮಗುವಿಗೆ ರೋಗಗಳು ಬರದಂತೆ ತಡೆಯುವ ಶಕ್ತಿ ಸ್ತನ್ಯಪಾನಕ್ಕಿದೆ ಎಂದು ಹೇಳಿದರು.

ಮಗು ಜನಿಸಿದ ಮೊದಲ ತಿಂಗಳಲ್ಲೇ ಮೃತಪಡುವುದು ಮತ್ತು ರೋಗಗಳಿಗೆ ತುತ್ತಾಗುವುದನ್ನು ತಡೆಯಲು ಸ್ತನ್ಯಪಾನದಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ತಾಯಂದಿರು ಮಗು ಹಾರೈಕೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕಾಗಿದೆ ಎಂದು ಕಿವಿಮಾತು ಹೇಳಿದರು.

ಸ್ತನ್ಯಪಾನ ಮಾಡುವುದರಿಂದ ಮಹಿಳೆಯರ ಸೌಂದರ್ಯ ಹಾಳಾಗುತ್ತದೆಂಬ ಮೂಡನಂಬಿಕೆಯಿಂದ ಹೊರತರುವ ಕೆಲಸವನ್ನು ಈ ಸಪ್ತಾಹದ ಮೂಲಕ ತಾಯಂದಿರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ ಎಂದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಮಂಜುನಾಥ್ ಮಾತನಾಡಿ, ಮಗು ಜನಿಸಿದ ೬ ತಿಂಗಳವರೆಗೆ ಕಡ್ಡಾಯವಾಗಿ ಎದೆಹಾಲನ್ನು ನೀಡಿದರೆ ವಾಂತಿಭೇದಿ, ನ್ಯುಮೋನಿಯಾ ಮುಂತಾದವುಗಳಿಗೆ ತುತ್ತಾಗುವುದನ್ನು ತಡೆಯಬಹುದಾಗಿದೆ. ತಾಯಂದಿರಿಗೆ ಹಾಲುಣಿಸುವ ಬಗ್ಗೆ ಆರೋಗ್ಯ ಇಲಾಖೆಯ ಕಾರ್ಯಕರ್ತರು ಮನವರಿಕೆ ಮಾಡುತ್ತಿದ್ದಾರೆಂದು ಹೇಳಿದರು.

ಜಿಲ್ಲೆಯಲ್ಲಿ ೨೦೨೪-೨೫ ರಲ್ಲಿ ೧೨೩೦೨ ಮಕ್ಕಳು ಜನಿಸಿದ್ದು, ಇದರಲ್ಲಿ ೮೩ ಮಕ್ಕಳು ಮೊದಲ ಹುಟ್ಟುಹಬ್ಬವನ್ನೇ ನೋಡಿಲ್ಲ. ಕಾರಣ ಸ್ತನ್ಯಪಾನದಿಂದ ವಂಚಿತರಾಗಿ ೧೮ ಮಕ್ಕಳು ಮೃತಪಟ್ಟಿರುವುದಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ. ಭಾರತಿ, ಡಾ. ಶಶಿಕಲಾ, ಶಿವರಾಜ್, ಸ್ತ್ರೀರೋಗ ತಜ್ಞ ಡಾ. ಪುಟ್ಟಪ್ಪ, ಮಕ್ಕಳ ತಜ್ಞರಾದ ಡಾ. ವರದಾ ವಿದ್ಯಾರಾಣಿ, ಡಾ. ಕಲ್ಪನ, ಇನ್ನರ್ ವೀಲ್ಹ್ ಕ್ಲಬ್, ನಯನ ಸಂತೋಷ್, ಶಾಲಿನ ನಾಗೇಶ್, ನಾಗೇಶ್ ಕೆಂಜಿಗೆ, ಮತ್ತಿತರರು ಉಪಸ್ಥಿತರಿದ್ದರು.ಮೊದಲಿಗೆ ಡಿ.ಎನ್.ಓ ರೇಣುಕ ಸ್ವಾಗತಿಸಿ, ಜಲಜಾಕ್ಷಿ ನಿರೂಪಿಸಿದರು.

‘World Breastfeeding Week’ – 2022

Share

Leave a comment

Leave a Reply

Your email address will not be published. Required fields are marked *

Don't Miss

ನಯನಮೋಟಮ್ಮ ಅಲಿಯಾಸ್ ನಯನ ಕಮಲಮ್ಮ?

ಮೂಡಿಗೆರೆ: ಮೂಡಿಗೆರೆ ಶಾಸಕಿ ನಯನಮೋಟಮ್ಮ ಕೇಸರಿ ಶಾಲು ಧರಿಸಿ ಹಿಂದು ಮಹಸಭಾ ಗಣಪತಿ ಕಾರ್ಯಕ್ರಮದಲ್ಲಿ ಪ್ರಮೋದ್ ಮುತಾಲಿಕ್ ಮತ್ತು ಬಿಜೆಪಿ ವಿಧಾನ ಪರಿಷತ್ ಸದಸ್ಯ ಪ್ರಾಣೇಶ್ ಜೊತೆಗೆ ವೇದಿಕೆಯಲ್ಲಿ ಇರುವುದರ ಬಗ್ಗೆ...

ತಾಯಿಗೆ ಬೆಂಕಿ ಹಾಕಿ ಕೊಂದ ಮಗ

ಚಿಕ್ಕಮಗಳೂರು: ತಾಯಿಯನ್ನು ಮಗ ಬೆಂಕಿ ಹಾಕಿ ಸುಟ್ಟು ಕೊಂದಿರುವ ಅಮಾನುಷ ಘಟನೆ ನಡೆದಿದೆ. ಆಲ್ದೂರು ಠಾಣೆ ವ್ಯಾಪ್ತಿಯ ಅರೆನೂರು ಗ್ರಾಮದಲ್ಲಿ ನಡೆದಿದ್ದು ವಿಷಯ ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿ ತೆರಳಿದ್ದಾರೆ. Son...

Related Articles

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ

ಚಿಕ್ಕಮಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಲು ಕಾರಣನಾದ ಆರೋಪಿಗೆ...

ಆ.10ಕ್ಕೆ ಬಸವ ಮಾಚಿದೇವ ಶ್ರೀಗಳ ಸಾಮೂಹಿಕ ಪಾದಪೂಜೆ

ಚಿಕ್ಕಮಗಳೂರು: ಶ್ರಾವಣ ಮಾಸದ ಪೂಜೆ ಕಾರ್ಯಕ್ರಮದ ಅಂಗವಾಗಿ ಬಸವನಹಳ್ಳಿಯ ಜಿಲ್ಲಾ ಮಡಿವಾಳರ ಸಂಘದ ಆವರಣದಲ್ಲಿ ಆ.೧೦...

ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ

ಚಿಕ್ಕಮಗಳೂರು:  ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು. ಅನ್ನಭಾಗ್ಯ ಅಕ್ಕಿಯ...

ಆ.7-8 ಕ್ಕೆ ಸಿಪಿಐ ಸಮಾವೇಶ-ಬಹಿರಂಗ ಅಧಿವೇಶನ

ಚಿಕ್ಕಮಗಳೂರು: ಭಾರತ ಕಮ್ಯುನಿಷ್ಟ ಪಾರ್ಟಿ ಸ್ಥಾಪನೆಯಾಗಿ ೧೦೦ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆ.೭ ಮತ್ತು ೮...