Home namma chikmagalur ಅಧಿಕಾರಿಗಳ ವರ್ಗಾವಣೆಯಲ್ಲಿ ಯತೀಂದ್ರಗೆ ತೆರಿಗೆ ಕಟ್ಟಬೇಕು
namma chikmagalurchikamagalurHomeLatest News

ಅಧಿಕಾರಿಗಳ ವರ್ಗಾವಣೆಯಲ್ಲಿ ಯತೀಂದ್ರಗೆ ತೆರಿಗೆ ಕಟ್ಟಬೇಕು

Share
Share

ಚಿಕ್ಕಮಗಳೂರು:  ಅಧಿಕಾರಿಗಳ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರಗೆ ತೆರಿಗೆ ಕಟ್ಟಬೇಕು ಎಂಬ ಮಾತು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬರುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದರು.

ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಪುತ್ರ ಅಲ್ಲೊಂದು, ಇಲ್ಲೊಂದರಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರು. ಆದರೆ, ಈಗ ಯತೀಂದ್ರ ಎಲ್ಲದರಲ್ಲೂ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ ಎಂದರು.

ನಾನು ಅವರ ಬಳಿ ಹೋಗಿಲ್ಲ, ಹಾಗಾಗಿ ನನಗೆ ಅದರ ಅನುಭವ ಆಗಿಲ್ಲ ಎಂದ ಅವರು, ಈ ಅವಧಿಯಲ್ಲಿ ಅವರ ಕುಟುಂಬ ದೊಡ್ಡ ಪ್ರಮಾಣದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂಬ ದೂರು ಎರಡು ವರ್ಷದಿಂದ ಕೇಳಿ ಬರುತ್ತಿದೆ ಎಂದು ಹೇಳಿದರು.

ಇಷ್ಟೇ ಅಲ್ಲ ಸಿದ್ದರಾಮಯ್ಯ ಅವರು ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಾಯಿಸುತ್ತಾರೆಂಬ ದೂರು ಇದೆ. ಪಡೆದ ಹಣದಲ್ಲಿ ಹೈಕಮಾಂಡ್‌ಗೆ ತಲುಪಿಸುತ್ತಾರೋ, ಅವರ ಹೆಸರಿನಲ್ಲಿ ಇವರ ಖಜಾನೆ ಭರ್ತಿಯಾಗುತ್ತೋ ಗೊತ್ತಿಲ್ಲ, ಅಧಿಕಾರಿಗಳ ವರ್ಗಾವಣೆ ದಂಧೆಯಾಗಿರುವುದಂತೂ ನಿಜ ಎಂದು ದೂರಿದರು.

Yathindra should be paid tax on transfer of officers

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...