Home ಲಾಂಗ್ ಹಿಡಿದು ಯುವ ಕಾಂಗ್ರೆಸ್ ಮುಖಂಡ ಪುಂಡಾಟ
Home

ಲಾಂಗ್ ಹಿಡಿದು ಯುವ ಕಾಂಗ್ರೆಸ್ ಮುಖಂಡ ಪುಂಡಾಟ

Share
Share

ಚಿಕ್ಕಮಗಳೂರು: ಯುವ ಕಾಂಗ್ರೆಸ್ ಮುಖಂಡನೋರ್ವ ಕ್ಷುಲ್ಲಕ ವಿಚಾರಕ್ಕೆ ಕಿರಿಕ್ ಮಾಡಿಕೊಂಡು ಕೈಯಲ್ಲಿ ಲಾಂಗ್ ಹಿಡಿದು ಪುಂಡಾಟ ಮೆರೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಐದಳ್ಳಿ ಗ್ರಾಮದಲ್ಲಿ ನಡೆದಿದೆ.

ಆಲ್ಲೂರು ಯೂತ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ತೇಜಸ್ ಎಂಬಾತ ರಸ್ತೆಯಲ್ಲೇ ಲಾಂಗ್ ಹಿಡಿದು ಪುಂಡಾಟ ಮೆರೆದಿದ್ದಾನೆ. ಗ್ರಾಮದಲ್ಲಿ ಹಬ್ಬ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ.

ಗ್ರಾಮಸ್ಥರೆಲ್ಲರೂ ಹಬ್ಬ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ, ಐದಳ್ಳಿ ಗ್ರಾಮದ ದಯಾನಂದ್ ಎಂಬುವವರು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಕಿರಿಕ್ ತೆಗೆದ ಯೂತ್ ಕಾಂಗ್ರೆಸ್ ಮುಖಂಡ ತೇಜಸ್, ದಯಾನಂದ್ ಅವರ ಬೈಕ್‌ಗೆ ಅಡ್ಡಗಟ್ಟಿದ್ದಾನೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದಾಗ, ತೇಜಸ್ ತಕ್ಷಣವೇ ತನ್ನ ಕಾರಿನಲ್ಲಿದ್ದ ಮಾರಕಾಸ್ತ್ರವನ್ನು (ಲಾಂಗ್) ಹೊರ ತೆಗೆದು ದಯಾನಂದ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾನೆ.

ಸಾರ್ವಜನಿಕ ರಸ್ತೆಯಲ್ಲೇ ಲಾಂಗ್ ಹಿಡಿದು ಅಟ್ಟಹಾಸ ಮೆರೆದ ಕಾಂಗ್ರೆಸ್ ಮುಖಂಡನ ಈ ರೌಡಿಸಂಗೆ ಸ್ಥಳೀಯ ಗ್ರಾಮಸ್ಥರು ಸಾಕ್ಷಿಯಾಗಿದ್ದು, ಕೆಲಕಾಲ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ದಯಾನಂದ್ ಕತ್ತಿ ಬಿಟ್ಟು ಬಾ ನೋಡ್ತೀನಿ ಎಂದು ಅವಾಜ್ ಹಾಕಿದ್ದಾನೆ ಕಾರಿನಿಂದ ಲಾಂಗ್ ತೆಗೆದು ವ್ಯಕ್ತಿಯ ಮೇಲೆ ಹಲ್ಲೆಗೆ ಯತ್ನಿಸಿದ ಇಡೀ ದೃಶ್ಯಾವಳಿಗಳು ಮೊಬೈಲ್ ನಲ್ಲಿ ಸೆರೆಯಾಗಿದ್ದು ಪುಂಡಾಟಿಕೆ ಕೈ ಮುಖಂಡನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Young Congress leader rants while holding a long stick

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...