Home namma chikmagalur chikamagalur ಮದುವೆಗೆ ಸಿದ್ಧತೆ ನಡೆಯುತ್ತಿದ್ದ ಮನೆಯಲ್ಲಿ ಯುವಕ ಸಾವು
chikamagalurHomeLatest Newsnamma chikmagalur

ಮದುವೆಗೆ ಸಿದ್ಧತೆ ನಡೆಯುತ್ತಿದ್ದ ಮನೆಯಲ್ಲಿ ಯುವಕ ಸಾವು

Share
Share

ಮೂಡಿಗೆರೆ: ಮದುವೆ ನಿಶ್ಚಯವಾಗಿ, ಮುಂದಿನ ತಿಂಗಳು ವಿವಾಹ ನಡೆಯಬೇಕಿದ್ದ ಯುವಕ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು 25 ವರ್ಷದ ಅಭಿಷೇಕ್ ಎಂದು ಗುರುತಿಸಲಾಗಿದೆ. ಕಳೆದ ತಿಂಗಳಷ್ಟೇ ಅಭಿಷೇಕ್ ಅವರ ವಿವಾಹ ನಿಶ್ಚಯವಾಗಿದ್ದು, ಅ.25ರಂದು ಮದುವೆ ನಡೆಸಲು ಎರಡೂ ಕುಟುಂಬಗಳು ಸಿದ್ಧತೆ ನಡೆಸುತ್ತಿದ್ದವು ಎನ್ನಲಾಗಿದೆ.

ಈ ನಡುವೆ ನಾಲ್ಕು ದಿನಗಳ ಹಿಂದೆ ಅಭಿಷೇಕ್ ಮನೆಯಲ್ಲಿ ವಿಷ ಸೇವಿಸಿದ್ದ. ತಕ್ಷಣ ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಆದರೆ ನಾಲ್ಕು ದಿನಗಳ ಕಾಲ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮದುವೆ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಇದೀಗ ದುಃಖದ ವಾತಾವರಣ ನಿರ್ಮಾಣವಾಗಿದೆ. ಪುತ್ರನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಮದುವೆ ನಿಶ್ಚಯವಾಗಿದ್ದ ಯುವತಿಯ ಕುಟುಂಬದಲ್ಲಿಯೂ ಆಘಾತದ ಪರಿಸ್ಥಿತಿ ನಿರ್ಮಾಣವಾಗಿದೆ.

ಅಭಿಷೇಕ್ ವಿಷ ಸೇವಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Young man dies at house where wedding preparations were underway.

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳ ಕಳ್ಳತನ

ಚಿಕ್ಕಮಗಳೂರು: ಮನೆಗೆ ಬೀಗ ಹಾಕಿ ಮಾಲೀಕರು ದೂರದ ಊರಿಗೆ ತೆರಳಿದ್ದನ್ನೇ ಹೊಂಚು ಹಾಕಿದ ಖದೀಮರು, ಹಿಂಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿ ಪರಾರಿಯಾಗಿರುವ...

Related Articles

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...

ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ...