ಚಿಕ್ಕಮಗಳೂರು: ಶೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದ ಯುವಕನೊಬ್ಬ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಸಾವಿಗೆ ಶರಣಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯ ನಿವಾಸಿ ಸಿ.ಎಸ್. ಯೋಗೀಶ್ ಮೃತ ದುರ್ದೈವಿ. ಎಂದಿನಂತೆ ರಾತ್ರಿ ಊಟ ಮುಗಿಸಿ ತಮ್ಮ ಕೊಠಡಿಗೆ ತೆರಳಿದ್ದ ಯೋಗೀಶ್, ಬೆಳಗ್ಗೆ ಎಷ್ಟು ಹೊತ್ತಾದರೂ ಬಾಗಿಲು ತೆರೆಯದಿದ್ದಾಗ ಕುಟುಂಬಸ್ಥರು ಕಿಟಕಿಯ ಮೂಲಕ ಪರಿಶೀಲಿಸಿದ್ದಾರೆ.
ಈ ವೇಳೆ ಕೊಠಡಿಯ ಫ್ಯಾನ್‌ಗೆ ಬೆಡ್‌ಶೀಟ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣವೇ ಬಾಗಿಲು ಒಡೆದು ಕೆಳಗಿಳಿಸಿದರೂ ಅಷ್ಟರಲ್ಲಾಗಲೇ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ಕುಟುಂಬಸ್ಥರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಯೋಗೀಶ್ ಅವರ ಈ ಹಠಾತ್ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅವರ ಸಹೋದರ ಆನಂದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದು.
ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Young man involved in stock market trading commits suicide
Leave a comment